ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ: ಇಬ್ಬರು ‘ಸ್ಟಾರ್’ ನಟರ ಮಾಹಿತಿ ಕೊಡುತ್ತೇನೆ ಎಂದು ಸಂಬರಗಿ
Team Udayavani, Sep 19, 2020, 1:36 PM IST
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ. ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಹಲವರು ನಟರಿಗೆ ನೋಟಿಸ್ ನೀಡಿ ವಿಚಾರಣೆ ಮಾಡುತ್ತಿದ್ದಾರೆ. ಪ್ರಕರಣದ ಬಗ್ಗೆ ಕೆಲವು ಸ್ಪೋಟಕ ಸುದ್ದಿಗಳನ್ನು ಮಾಧ್ಯಮದ ಎದುರು ನೀಡುತ್ತಿದ್ದ ಉದ್ಯಮಿ ಪ್ರಶಾಂತ್ ಸಂಬರಗಿ ಈಗ ಮತ್ತೊಂದು ‘ಸ್ಪೋಟಕ’ ಮಾಹಿತಿ ಹೊರಹಾಕುವುದಾಗಿ ಹೇಳಿದ್ದಾರೆ.
ಡ್ರಗ್ಸ್ ದಂದೆಯಲ್ಲಿರುವ ಇಬ್ಬರು ಸ್ಟಾರ್ ನಟರ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಶಾಂತ್ ಸಂಬರಗಿ, ಡ್ರಗ್ಸ್ ದಂದೆಯಲ್ಲಿ ಎಂ.ಎಲ್.ಎ ಮಗ, ಡಾರ್ಕ್ ವೆಬ್ ಬಳಕೆ ಮತ್ತು ಮತ್ತಿಬ್ಬರು ನಟರ ವಿಚಾರಣೆ ಒಂದು ಸಣ್ಣ ಎಳೆ ಅಷ್ಟೇ. ಮುಂದಿನ ದಿನಗಳಲ್ಲಿ ಇಬ್ಬರು ದೊಡ್ಡ ನಟರ ಸಮೇತ ಇನ್ನಷ್ಟು ಜನರ ವಿವರ ಬಹಿರಂಗಪಡಿಸುತ್ತೇನೆ. ಡ್ರಗ್ಸ್ ಮುಕ್ತ ಭಾರತಕ್ಕಾಗಿ ಒಂದಾಗೋಣ ಎಂದಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ನಟಿಯರಾದ ರಾಗಿಣಿ ಮತ್ತು ಸಂಜನಾ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದು, ಪರಪ್ಪನ ಅಗ್ರಹಾರದಲ್ಲಿದ್ದಾರೆ. ತಾರಾ ದಂಪತಿಗಳಾದ ದಿಗಂತ್ ಮತ್ತು ಐಂದ್ರಿತಾ ರೇ ಕೂಡಾ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ!
ಅದಲ್ಲದೆ ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಗೂ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಬಿಜೆಪಿಯ ಪ್ರತಿಷ್ಠಿತ ಕುಟುಂಬಕ್ಕೂ ಶಾಕ್; ಜೊಲ್ಲೆ ಪುತ್ರನ ಜಮೀನಿಗೆ ವಕ್ಫ್ ಹೆಸರು
Waqf Issue: ಮುಸ್ಲಿಂ ಮುಖಂಡರ ಮನೆ ಮೇಲೆ ಕಲ್ಲು ತೂರಾಟ; ಕಡಕೋಳದಲ್ಲಿ ಉದ್ವಿಗ್ನ ಸ್ಥಿತಿ
Renukaswamy Case: ನಟ ದರ್ಶನ್‌ಗೆ ಜಾಮೀನು ಕೊಟ್ಟು ಹೈಕೋರ್ಟ್ ವಿಧಿಸಿರುವ ಷರತ್ತುಗಳೇನು?
Forest Land: ಎಚ್‌ಎಂಟಿ ಜಾಗಕ್ಕೆ ಸಚಿವ ಖಂಡ್ರೆ ಅತಿಕ್ರಮ ಪ್ರವೇಶ: ಎಚ್.ಡಿ.ಕುಮಾರಸ್ವಾಮಿ
Congress Gurantee: ಮಹಿಳೆಯರಿಂದಲೇ ಉಚಿತ ಪ್ರಯಾಣಕ್ಕೆ ವಿರೋಧ: ಡಿಸಿಎಂ ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.