ರೆಮ್ಡೆಸಿವಿರ್ ಚುಚ್ಚುಮದ್ದು ಬೆಲೆಯಲ್ಲಿ ಭಾರೀ ಇಳಿಕೆ

ಸರ್ಕಾರದ ಮಧ್ಯ ಪ್ರವೇಶ - ರೆಮ್ಡೆಸಿವಿರ್ ಬೆಲೆ ಇಳಿಕೆ ; ರೆಮ್ಡೆಸಿವಿರ್ ಉತ್ಪಾದನೆ ದ್ವಿಗುಣ - ಸದಾನಂದ ಗೌಡ;

Team Udayavani, Apr 17, 2021, 8:16 PM IST

jghjghj

ಬೆಂಗಳೂರು: ಕೇಂದ್ರ ಸರ್ಕಾರದ ಮಧ್ಯ ಪ್ರವೇಶದಿಂದ ಕೋವಿಡ್ ಚಿಕಿತ್ಸೆಯಲ್ಲಿ ಸಾಮಾನ್ಯವಾಗಿ ಬಳಸಲಾಗುವ ರೆಮ್ಡೆಸಿವಿರ್ ಚುಚ್ಚುಮದ್ದು ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂಪಾಯಿಂದ 899 ರೂಪಾಯಿಗೆ ಇಳಿಸಿದೆ. ಬೇರೆ ಬೇರೆ ಕಂಪನಿಗಳ ವಿವಿಧ ಬ್ರಾಂಡಿನ ರೆಮ್ಡೆಸಿವಿರ್ ಬೆಲೆ ಈ ಮುಂದಿನಂತಿದೆ.

ಡಾ ರೆಡ್ಡೀಸ್ ಕಂಪನಿಯ ರೆಡಿಕ್ಸ್ – ರೂ 2700 (ಈ ಮುಂಚಿನ ಬೆಲೆ ರೂ 5400);  ಸಿಂಜಿನ್ (ಬಯೊಕಾನ್) ಕಂಪನಿಯ ರೆಮ್ವಿನ್  ರೂ 2450 (ರೂ 3950);  ಸಿಪ್ಲಾ ಕಂಪನಿಯ ಸಿಪ್ರೆಮಿ  ರೂ 3000 (ರೂ 4000);  ಮಿಲನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಡೆಸ್ರೆಮ್ ರೂ 3400 (ರೂ 4800);  ಜ್ಯುಬಿಲೆಂಟ್ ಜೆನರಿಕ್ಸ್ ಕಂಪನಿಯ ಜ್ಯುಬಿ-ಆರ್ ರೂ 3400 (ರೂ 4700) ಹಾಗೂ ಹೆಥೆರೋ ಹೆಲ್ತ್ಕೇರ್ ಕಂಪನಿಯ ಕೊವಿಫೊರ್ ರೂ 3490 (ರೂ 5400).

ಇಂದು ಇಲ್ಲಿ ಪತ್ರಿಕಾ ಹೇಳಿಕೆಯೊಂದರಲ್ಲಿ ಈ ವಿಷಯ ತಿಳಿಸಿದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಬೆಲೆ ಇಳಿಸಿರುವ ಫಾರ್ಮಾ ಕಂಪನಿಗಳಿಗೆ ಧನ್ಯವಾದ ಅರ್ಪಿಸಿದರು. ರೆಮ್ಡೆಸಿವಿರ್ ಬೆಲೆ ಇಳಿಕೆಯಿಂದ ಬಳಕೆದಾರರಿಗೆ ಕನಿಷ್ಠವೆಂದರೂ 750 ಕೋಟಿ ರೂಪಾಯಿ ಉಳಿತಾಯವಾಗಲಿದೆ ಎಂದರು.

ಅದೇ ರೀತಿ  ರೆಮ್ಡೆಸಿವಿರ್ ಮಾಸಿಕ ಉತ್ಪಾದನೆ ಸಾಮರ್ಥ್ಯವನ್ನು ಹೆಚ್ಚಿಸಲು ತ್ವರಿತ ಕ್ರಮ ಕೈಗೊಳ್ಳಲಾಗುತ್ತಿದೆ. ಅಮೆರಿಕದ ಗಿಲೀಡ್ ಸೈಯನ್ಸಸ್ (Gilead Sciences) ಕಂಪನಿಯು ರೆಮ್ಡೆಸಿವಿರ್ ಚುಚ್ಚುಮದ್ದಿನ ಪೆಟೆಂಟ್ ಹೊಂದಿದ್ದು ಭಾರತದ ಏಳು ಫಾರ್ಮಾ ಕಂಪನಿಗಳು ಉತ್ಪಾದನಾ ಲೈಸನ್ಸ್ ಪಡೆದಿವೆ. ಅವುಗಳ ಈಗಿನ ಸ್ಥಾಪಿತ ಉತ್ಪಾದನಾ ಸಾಮರ್ಥ್ಯ 38.8 ಲಕ್ಷ ವೈಯಲ್ಸ್ (ಬಾಟಲಿ). ಹೆಚ್ಚುವರಿಯಾಗಿ 35.3 ಲಕ್ಷ ವೈಯಲ್ಸ್ ಉತ್ಪಾದಿಸಲು ಅನುಮತಿ ನೀಡಲಾಗಿದೆ. ಇದರಿಂದ ಮಾಸಿಕ ರೆಮ್ಡೆಸಿವಿರ್ ಉತ್ಪಾದನೆ 74.1 ಲಕ್ಷ ವೈಯಲ್ಸಿಗೆ ಏರಿಕೆಯಾಗಲಿದೆ. ಸದ್ಯ ಪ್ರತಿದಿನ ಅಂದಾಜು 1.35 ಲಕ್ಷ ವೈಯಲ್ಸ್ ರೆಮ್ಡೆಸಿವಿರ್ ಉತ್ಪಾದನೆಯಾಗುತ್ತಿದೆ. ರೆಮ್ಡೆಸಿವಿರ್ ರಫ್ತು ನಿಷೇಧಿಸಿರುವುದರಿಂದ ಹೆಚ್ಚುವರಿಯಾಗಿ ಸುಮಾರು 4 ಲಕ್ಷ ವೈಯಲ್ಸ್ ರೆಮ್ಡೆಸಿವಿರ್ ಆಂತರಿಕ ಬಳಕೆಗೆ ಲಭ್ಯವಿದೆ. ಇನ್ನೊಂದು ವಾರೊಪ್ಪತ್ತಿನಲ್ಲಿಯೇ ಬೇಡಿಕೆ ಹಾಗೂ ಪೂರೈಕೆಯಲ್ಲಿ ಸಮತೋಲನ ಕಂಡುಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan: ದರ್ಶನ್‌ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ

Darshan: ದರ್ಶನ್‌ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

CMSIDDU1

Operation Fear: ಕಾಂಗ್ರೆಸ್‌ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.