New scam ಬೆಳಕಿಗೆ; ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ

 3 ಖಾತೆಗಳಿಂದ 2.47 ಕೋ. ರೂ. ಅನ್ಯ ಖಾತೆಗಳಿಗೆ ವರ್ಗಾವಣೆ

Team Udayavani, Jul 14, 2024, 6:50 AM IST

hk-patil

ಎಚ್‌.ಕೆ. ಪಾಟೀಲ್‌, ಪ್ರವಾಸೋದ್ಯಮ ಸಚಿವ

ಬಾಗಲಕೋಟೆ: ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಹಣ ಅಕ್ರಮವಾಗಿ ಅನ್ಯ ಖಾತೆಗಳಿಗೆ ವರ್ಗಾವಣೆಯಾಗಿ ರುವ ನಡುವೆಯೇ ಬಾಗಲಕೋಟೆಯ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಲ್ಲೂ ಅಂತಹದ್ದೇ ಹಗರಣ ಪತ್ತೆಯಾಗಿದೆ. ಸಮಿತಿಯ 3 ಬ್ಯಾಂಕ್‌ ಖಾತೆಗಳಿಂದ ಬರೋಬ್ಬರಿ 2.47 ಕೋಟಿ ರೂ. ಅನ್ಯರ ಖಾತೆಗೆ ವರ್ಗವಾಗಿದೆ. 4 ವರ್ಷಗಳಲ್ಲಿ 54 ಬಾರಿ ಹಣ ವರ್ಗಾವಣೆಯಾಗಿದೆ ಎಂಬ ಸಂಗತಿ ಬಯಲಾಗಿದೆ. ಇದಕ್ಕೆ ಸ್ಥಳೀಯ ನಿರ್ಮಿತಿ ಕೇಂದ್ರವೇ ಕಾರಣ ಎನ್ನಲಾಗಿದೆ.

ನಗರದ ಐಡಿಬಿಐ ಬ್ಯಾಂಕ್‌ನಲ್ಲಿ ಜಿಲ್ಲಾಧಿಕಾರಿಗಳು, ಅಧ್ಯಕ್ಷರು, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಹೆಸರಿನಲ್ಲಿ ಒಟ್ಟು 3 ಖಾತೆಗಳಿವೆ. ಇಲಾಖೆಯ ವಿವಿಧ ಅಭಿವೃದ್ಧಿ ಕಾರ್ಯ ಕ್ರಮ, ಫಲಾನುಭವಿಗಳಿಗೆ ಸಹಾಯಧನ ವಿತರಣೆ ಸೇರಿ ವಿವಿಧ ಯೋಜನೆಗಳಿಗೆ ವ್ಯಯಿಸಲು ಈ ಮೂರು ಖಾತೆಗಳಲ್ಲಿ 2,47,73,999 ರೂ. ಹಣವಿತ್ತು. ಆ ಮೊತ್ತ 2021ರ ಅ. 28ರಿಂದ 2024ರ ಫೆ. 22ರ ಅವಧಿಯಲ್ಲಿ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಗೊಂಡಿದೆ.

54 ಬಾರಿ ಹಣ ವರ್ಗ
ಈ ಹಗರಣದ ಕುರಿತು ಬಾಗಲ ಕೋಟೆಯ ಸೆನ್‌ ಪೊಲೀಸ್‌ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಾಥಮಿಕ ತನಿಖೆಯ ಬಳಿಕ ಮೂರು ಖಾತೆಗಳಿಂದ ಒಟ್ಟು 54 ಬಾರಿ ಹಣ ವರ್ಗಾವಣೆಯಾಗಿರುವುದು ಖಚಿತ ವಾಗಿದೆ. ಒಂದು ಖಾತೆಯಿಂದ 28 ಬಾರಿ, ಮತ್ತೂಂದು ಖಾತೆಯಿಂದ 25 ಬಾರಿ ಹಾಗೂ ಇನ್ನೊಂದು ಖಾತೆಯಿಂದ ಒಮ್ಮೆ ಹಣ ವರ್ಗವಾಗಿದೆ. ಮುಖ್ಯವಾಗಿ ಪ್ರವಾಸೋದ್ಯಮ ಸಮಿತಿಯ ಖಾತೆಯಿಂದ ಸಮಾಜ ಕಲ್ಯಾಣ ಇಲಾಖೆಗೆ, ಅಲ್ಲಿಂದ ಬಾಗಲಕೋಟೆಯ ನಿರ್ಮಿತಿ ಕೇಂದ್ರದ ಖಾತೆಗೆ ಒಮ್ಮೆ 50 ಲಕ್ಷ ರೂ. ವರ್ಗಾವಣೆಯಾಗಿದೆ. ಹೀಗಾಗಿ ಈ ಹಗರಣದಲ್ಲಿ ನಿರ್ಮಿತಿ ಕೇಂದ್ರದ ಪಾಲೂ ಇರಬಹುದು ಎಂದು ಶಂಕಿಸಲಾಗಿದೆ.

ಜಿಲ್ಲಾಧಿಕಾರಿಗಳೇ ಅಧ್ಯಕ್ಷರು
ಗಮನಾರ್ಹ ಸಂಗತಿಯೆಂದರೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಹಾಗೂ ನಿರ್ಮಿತಿ ಕೇಂದ್ರ ಎರಡಕ್ಕೂ ಜಿಲ್ಲಾಧಿಕಾರಿಗಳೇ ಅಧ್ಯಕ್ಷರಾಗಿರುತ್ತಾರೆ. 2021ರಿಂದಲೂ ಸರಕಾರಿ ಇಲಾಖೆ ಹಣ ವರ್ಗಾವಣೆಗೊಳ್ಳುತ್ತಿದ್ದರೂ ಜಿಲ್ಲಾಧಿಕಾರಿ ಅಥವಾ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಗಮನಕ್ಕೆ ಬರಲಿಲ್ಲವೇ ಎಂಬುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.

ಪ್ರವಾಸೋದ್ಯಮ ಇಲಾಖೆಗೆ ಸದ್ಯ ಗೋಪಾಲ ಹಿತ್ತಲಮನಿ ಪ್ರಭಾರ ಉಪ ನಿರ್ದೇಶಕರಾಗಿದ್ದಾರೆ. ಇಲಾಖೆಯ ನಿರ್ದೇಶನದಂತೆ ಸಮಿತಿಯ ಖಾತೆಯಲ್ಲಿರುವ ಅನುದಾನದ ವಿವರ ಪಡೆಯಲು ಐಡಿಬಿಐ ಬ್ಯಾಂಕ್‌ಗೆ ಹೋಗಿದ್ದಾರೆ. ಆಗ ಮೊದಲು 1.47 ಕೋಟಿ ರೂ. ಬ್ಯಾಲೆನ್ಸ್‌ ತೋರಿಸಿದ್ದರು. ವಾಸ್ತವದಲ್ಲಿ 2.47 ಕೋಟಿ ರೂ. ಇರಬೇಕಿತ್ತು. ಈ ಕುರಿತು ಖಾತೆಯ ಸಂಪೂರ್ಣ ವಿವರ ಪಡೆದಾಗ ಕೇವಲ 2,925 ರೂ. ಇರುವುದು ಪತ್ತೆಯಾಗಿದೆ. ಇದರಿಂದ ಗಾಬರಿಗೊಂಡ ಅಧಿಕಾರಿಯು ಐಡಿಬಿಐ ಬ್ಯಾಂಕ್‌ನ ವ್ಯವಸ್ಥಾಪಕರು ಹಾಗೂ ಸಿಬಂದಿ ವಿರುದ್ಧ ಸೆನ್‌ ಠಾಣೆಗೆ ದೂರು ನೀಡಿದ್ದಾರೆ.

ಮೂವರು ಡಿ.ಸಿ.ಗಳು
ಈ ಹಣ ವರ್ಗಾವಣೆಗೊಂಡ ಅವಧಿಯಲ್ಲಿ ಮೂವರು ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಆದರೆ ಪ್ರವಾಸೋದ್ಯಮ ಇಲಾಖೆಗೆ ಪ್ರಭಾರ ಅಧಿಕಾರಿಗಳು ಹಲವು ಬಾರಿ ಬದಲಾವಣೆಗೊಂಡಿದ್ದಾರೆ.

ಲೆಕ್ಕ ಪರಿಶೋಧಿತ ವರದಿ ಇಲ್ಲ
ಪ್ರತಿಯೊಂದು ಇಲಾಖೆಯಲ್ಲಿ ಪ್ರತೀ ವರ್ಷ ಮಾರ್ಚ್‌ನಲ್ಲಿ ಲೆಕ್ಕ ಪರಿಶೋಧನೆ ಮಾಡಿಸಲಾಗುತ್ತದೆ. ಆ ವೇಳೆ ಯಾವ ಇಲಾಖೆಯಲ್ಲಿ ಎಷ್ಟು ಅನುದಾನ ಉಳಿದಿದೆ, ಎಷ್ಟು ಖೋತಾ ಆಗಿದೆ, ಯಾವ ಯೋಜನೆ ಅಥವಾ ಉದ್ದೇಶಕ್ಕೆ ಎಷ್ಟು ಅನುದಾನ ಬಳಕೆಯಾಗಿದೆ ಎಂಬುದರ ವಿವರ ಕೊಡಲೇಬೇಕು. ಆದರೆ ಪ್ರವಾಸೋದ್ಯಮ ಇಲಾಖೆಯಲ್ಲಿ ಲೆಕ್ಕ ಪರಿಶೋಧಿತ ವರದಿ ಕೇಳಿದರೆ, ಮಾಡಿಸಿಲ್ಲ ಎಂಬ ಉತ್ತರ ಬರುತ್ತಿದೆ ಎನ್ನಲಾಗಿದೆ. ಹೀಗಾಗಿ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಹಿಡಿದು, ಬಾಗಲಕೋಟೆಯ ಬೇರೆ ಬೇರೆ ಇಲಾಖೆಯ ಅಧಿಕಾರಿಗಳೂ ಇದರಲ್ಲಿ ಶಾಮೀಲಾಗಿರಬಹುದು ಎಂಬ ಅನುಮಾನವಿದೆ ಎನ್ನಲಾಗಿದೆ.

ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸರಕಾರದ ಹಣ ದುರ್ಬಳಕೆ ಮಾಡಿದವರನ್ನು ಉಗ್ರ ಶಿಕ್ಷೆಗೆ ಒಳಪಡಿಸಲಾಗುತ್ತದೆ. ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ಬ್ಯಾಂಕ್‌ನಲ್ಲಿರಿಸಿದ್ದ ಮೊತ್ತವನ್ನು ಬ್ಯಾಂಕ್‌ನವರೇ ತೆಗೆದುಕೊಂಡಿದ್ದಾರೆ.
-ಎಚ್‌.ಕೆ. ಪಾಟೀಲ್‌, ಪ್ರವಾಸೋದ್ಯಮ ಸಚಿವ

 

ಟಾಪ್ ನ್ಯೂಸ್

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.