ಇಂದಿನಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಲಭ್ಯ
15 ವರ್ಷ ಮೇಲ್ಪಟ್ಟವರ ಮೊದಲ ಡೋಸ್ ಶೇ. 100 ಪ್ರಗತಿ
Team Udayavani, Apr 10, 2022, 7:25 AM IST
ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಲಪಡಿಸಿದ್ದು ಎ. 10ರಿಂದ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರು ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸರಕಾರ, ರೋಗ ಪೂರ್ವ ನಿಯಂತ್ರಣ ಕ್ರಮಗಳಿಗೆ ಹೆಚ್ಚು ಒತ್ತು ನೀಡಿದೆ. ಇದೇ ರೀತಿ ಕೋವಿಡ್ ಲಸಿಕೀಕರಣಕ್ಕೂ ವೇಗ ನೀಡಿದೆ.
ದೇಶದಲ್ಲಿ ಈವರೆಗೆ 185 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಲಸಿಕೀಕರಣವನ್ನು ಚುರುಕುಗೊಳಿಸಿರುವುದರಿಂದ, ಈವರೆಗೆ 10.47 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇದರ ಜತೆಗೆ, ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಮುನ್ನೆಚ್ಚರಿಕೆ ಡೋಸ್ ನೀಡಲಾಗುತ್ತಿದೆ ಎಂದು ಹೇಳಿದರು.
ಗಣನೀಯ ಪ್ರಗತಿ
ರಾಜ್ಯದಲ್ಲಿ ಈವರೆಗೆ, 12-14 ವಯೋಮಾನದವರಿಗೆ ಮೊದಲ ಡೋಸ್ ಶೇ. 65.6, 15-17 ವಯೋಮಾನದವರಿಗೆ ಮೊದಲ ಡೋಸ್ ಶೇ. 79 ಹಾಗೂ ಎರಡನೇ ಡೋಸ್ ಶೇ. 64.5ರ ಗುರಿ ಸಾಧಿಸಿದೆ. 15 ವರ್ಷ ಮೇಲ್ಪಟ್ಟವರಲ್ಲಿ ಮೊದಲ ಡೋಸ್ ಶೇ. 100 ಹಾಗೂ ಎರಡನೇ ಡೋಸ್ ಶೇ. 95.4 ಆಗಿದೆ. 18ವರ್ಷ ಮೇಲ್ಪಟವರಲ್ಲಿ ಮೊದಲ ಡೋಸ್ ಶೇ. 101 ಹಾಗೂ ಎರಡನೇ ಡೋಸ್ ಶೇ. 97.4 ಮಂದಿಗೆ ನೀಡಲಾಗಿದೆ. ಇದುವರೆಗೆ ಶೇ. 57.6ರಷ್ಟು ಮುನ್ನೆಚ್ಚರಿಕೆ ಲಸಿಕೆ ಡೋಸ್ ನೀಡಲಾಗಿದೆ. ಈ ಮೂಲಕ ರಾಜ್ಯವು ಲಸಿಕೀಕರಣದಲ್ಲಿ ಶ್ಲಾಘನೀಯ ಪ್ರಗತಿ ಸಾಧಿಸುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.