ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಮೂವರು ಗಣ್ಯರ ಆಯ್ಕೆ


Team Udayavani, Oct 12, 2019, 3:03 AM IST

maharshi

ಬೆಂಗಳೂರು: ಪರಿಶಿಷ್ಟ ಜನಾಂಗದ ಶ್ರೇಯೋಭಿವೃದ್ಧಿ ಗಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಮೂವರು ಗಣ್ಯರನ್ನು ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರ ವಾರ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ಮಾತನಾಡಿ, ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ. ಕಮಲಾ ಹಂಪನಾ, ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಓಬಳಪ್ಪ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ. ಜಿ.ರಂಗಯ್ಯ ಅವರನ್ನು ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ವಿಶ್ರಾಂತ ಕುಲಪತಿಗಳು ಹಾಗೂ ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ನಿರಂಜನ್‌ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿ ಈ ಮೂವರು ಗಣ್ಯರನ್ನು ಆಯ್ಕೆ ಮಾಡಿ, ವರದಿ ನೀಡಿದ್ದು, ಸರ್ಕಾರ ಈ ವರದಿಯನ್ನು ಅಂಗೀಕರಿಸಿದೆ. ರಾಜ್ಯಮಟ್ಟದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಅಕ್ಟೋಬರ್‌ 13ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.

ಈ ಸಮಾರಂಭದಲ್ಲಿಯೇ ಪ್ರಶಸ್ತಿ ಪ್ರದಾನ ಮಾಡಲಾ ಗುವುದು. ಪ್ರಶಸ್ತಿ ತಲಾ 20 ಗ್ರಾಂ ಚಿನ್ನದ ಪದಕ ಹಾಗೂ 5 ಲಕ್ಷ ರೂ.ನಗದನ್ನು ಒಳಗೊಂಡಿದೆ ಎಂದರು. ಸಮಾಜಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್‌ ನಾಯಕ್‌ ಉಪಸ್ಥಿತರಿದ್ದರು.

ಪ್ರಶಸ್ತಿ ಪುರಸ್ಕೃತರ ವಿವರ
ಡಾ.ಕಮಲಾ ಹಂಪನಾ: ಹಿರಿಯ ಮಹಿಳಾ ಸಾಹಿತಿ ಯಾಗಿದ್ದು, ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಓಬಳಪ್ಪ: ನಿವೃತ್ತ ಕೃಷಿ ಅಧಿಕಾರಿಯಾಗಿದ್ದು, ಮಹರ್ಷಿ ವಾಲ್ಮೀಕಿ ಗುರುಪೀಠದ ಆಡಳಿತಾಧಿ ಕಾರಿಯಾಗಿ ಹಾಗೂ ಹರಿಹರದ ವಾಲ್ಮೀಕಿ ಹಾಸ್ಟಲ್‌ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಾಲ್ಮೀಕಿ ಸಮಾಜದ ಮಕ್ಕಳಿಗೆ ಶಿಕ್ಷಣದ ಮೌಲ್ಯಗಳ ಬಗ್ಗೆ ಅರಿವು ಮೂಡಿಸಿ, ಉಚಿತ ಶಿಕ್ಷಣ ದೊರಕಿಸಿಕೊಡಲು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಪರಿಶಿಷ್ಟ ವರ್ಗಗಳ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದ್ದಾರೆ.

ಡಾ.ಜಿ.ರಂಗಯ್ಯ: ನರರೋಗ ತಜ್ಞರಾಗಿದ್ದಾರೆ. ನ್ಯೂಯಾರ್ಕ್‌ ಸಿಟಿ ಮೆಡಿಕಲ್‌ ಸೊಸೈಟಿ ಅಧ್ಯಕ್ಷರಾಗಿ, ಅಮೆರಿಕದ ಇಂಡಿಯನ್‌ ನ್ಯೂರಾಲಜಿಸ್ಟ್‌ ಸಂಸ್ಥೆಯ ಕಾರ್ಯದರ್ಶಿಯಾಗಿ, ಇಂಡಿ ಯನ್‌ ನ್ಯೂರಾಲಜಿಸ್ಟ್‌ ನ್ಯಾಷನಲ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ, ನ್ಯೂಯಾರ್ಕ್‌ನ ಪ್ರತಿಷ್ಠಿತ ಸ್ಥಳಗಳಲ್ಲಿ ಸ್ಥಾಪಿಸಿರುವ ಮಹಾತ್ಮ ಗಾಂಧಿ ಪ್ರತಿಮೆಯ ಸ್ಥಾಪಕ ಸಮಿತಿ ಸದಸ್ಯರಾಗಿದ್ದಾರೆ. ರಾಷ್ಟದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Kusuma-RR-Nagar

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Kusuma-RR-Nagar

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.