Solo Ride; ಬೈಕ್ ನಲ್ಲೆ ಏಕಾಂಗಿಯಾಗಿ ಜಮ್ಮು& ಕಾಶ್ಮೀರ ಸುತ್ತಿ ಬಂದ ಧಾರವಾಡ ಯುವತಿ

Team Udayavani, Feb 22, 2024, 8:45 PM IST

1—-asdasd

ಧಾರವಾಡ : ಬೈಕ್ ನಲ್ಲಿ ಏಕಾಂಗಿಯಾಗಿ ಧಾರವಾಡದಿಂದ ಜಮ್ಮು-ಕಾಶ್ಮೀರಕ್ಕೆ ಹೋಗಿದ್ದ ಯುವತಿ, 9 ದಿನಗಳಲ್ಲಿ ಸಂಚಾರ ಕೈಗೊಂಡು ಮರಳಿ ವಾಪಸಾಗಿದ್ದಲ್ಲದೇ ಎಂಗೆಸ್ಟ್ ಸೊಲೋ ರೈಡರ್ ಎಂಬ ಹೆಗ್ಗಳಿಕೆ ಪಾತ್ರಳಾಗುವ ಮೂಲಕ ಗಮನ ಸೆಳೆದಿದ್ದಾಳೆ.

ಇಲ್ಲಿನ ಡಾ.ಆರ್. ಎನ್.ಶೆಟ್ಟಿ ಕ್ರೀಡಾಂಗಣ ಬಳಿಯ ಕೆಎಚ್‌ಬಿಕಾಲನಿ ನಿವಾಸಿಯಾದ 18 ವರ್ಷದ ಪ್ರತೀಕ್ಷಾ ಹರವಿಶೆಟ್ಟರ್ ಈ ಸಾಧನೆ ಮಾಡಿದವಳು. ಶಿಕ್ಷಕ ಶಿವಯೋಗಿ ಹರವಿಶೆಟ್ಟರ್ ಪುತ್ರಿಯಾಗಿರುವ ಪ್ರತೀಕ್ಷಾ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಬಿಸಿಎ ಎರಡನೇ ಸೆಮಿಸ್ಟರ್ ವಿದ್ಯಾರ್ಥಿನಿ. ಈಕೆ ಬೈಕ್ ಮೇಲೆ ಜಮ್ಮು-ಕಾಶ್ಮೀರಕ್ಕೆ ಏಕಾಂಗಿಯಾಗಿ ಸಂಚಾರ ಕೈಕೊಂಡು ಬುಧವಾರ ರಾತ್ರಿ ವಾಪಸ್ಸಾಗಿದ್ದಾಳೆ. ಸಂಚಾರ ನಿಯಮ ಪಾಲನೆ ಮತ್ತು ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತೀಕ್ಷಾ ಈ ಸಂಚಾರ ಕೈಗೊಂಡಿದ್ದಳು.

ಕಳೆದ ಫೆ.13 ರಂದು ಧಾರವಾಡ ನಗರದಿಂದ ಕೆಟಿಎಂ ಡ್ಯೂಕ್ -390 ಬೈಕ್ ಮೇಲೆ ಹೊರಟ ಪ್ರತೀಕ್ಷಾಗೆ ಜಿಲ್ಲಾ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡರ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸದಾನಂದ ಅಮರಾಪೂರ ಸೇರಿದಂತೆ ಹಲವರು ಸತ್ಕರಿಸಿ, ಬೀಳ್ಕೊಟ್ಟಿದ್ದರು. ನಂತರ ಧಾರವಾಡದಿಂದ ಲೋನಾವಾಲಾ, ವಡೋದರ, ಜೋಧಪುರ, ಅಮೃತಸರ ಮಾರ್ಗವಾಗಿ ಶ್ರೀನಗರ ತಲುಪಿದಳು. ಅಲ್ಲಿ ಲಾಲಚೌಕ್‌ನಲ್ಲಿ ಕರುನಾಡಿನ ಬಾವುಟ ಹಾರಿಸಿದ ಸಂದರ್ಭದಲ್ಲಿ ಬ್ರಿಗೇಡಿಯರ್ ಮನೋಜ ಜೋಶಿ ಸೇರಿದಂತೆ ಹಲವರು ಸನ್ಮಾನಿಸಿದ್ದಾರೆ.

ಮರುದಿನದ ಶ್ರೀನಗರದಿಂದ ಪ್ರಯಾಣ ಆರಂಭಿಸಿ ಜಲಂಧರ, ಅಜ್ಮೇರ, ಧುಲೆ ಮಾರ್ಗವಾಗಿ 9 ನೇ ದಿನಕ್ಕೆ ಮತ್ತೆ ಧಾರವಾಡಕ್ಕೆ ಬಂದು ತಲುಪಿದ್ದಾಳೆ. ಸತತ 9 ದಿನಗಳ ಕಾಲ ಬೈಕ್ ಮೇಲೆ ತೆರಳಿ ಬುಧವಾರ ರಾತ್ರಿ ನಗರಕ್ಕೆ ಆಗಮಿಸಿದ ಪ್ರತೀಕ್ಷಾಳನ್ನು ಹಿರಿಯ ನ್ಯಾಯವಾದಿ ಶೇಖರ ಕವಳಿ, ಅಶೋಕ ಶೆಟ್ಟರ್, ಸಂಗಮೇಶ ಹನಸಿ, ಮಂಜುನಾಥ ಹಿರೇಮಠ, ರಾಜಶೇಖರ ಉಪ್ಪಿನ ಸೇರಿದಂತೆ ಹಲವರು, ಬರಮಾಡಿಕೊಂಡಿದ್ದಾರೆ. ಇದಲ್ಲದೇ ಸುಮಾರು6500 ಕಿ.ಮೀ. ದೂರವನ್ನು ನಿರಂತರ 9 ದಿನಗಳಲ್ಲಿ ಕ್ರಮಿಸುವ ಮೂಲಕ ‘ಎಂಗೆಸ್ಟ್ ಸೊಲೋ ರೈಡರ್ ’ ಎಂಬ ಹೆಗ್ಗಳಿಕೆ ಲಭಿಸಿದೆ.

ಟಾಪ್ ನ್ಯೂಸ್

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.