ಮಾತೃಭೂಮಿಗೆ ಮರಳಿದ ಅಭಿಷೇಕ

Team Udayavani, Feb 29, 2020, 3:08 AM IST

mathrubhoomi

ಕಾರವಾರ: ಕೊರೊನಾ ವೈರಸ್‌ ಕಾರಣಕ್ಕೆ ಜಪಾನ್‌ನ ಯೊಕೊಹಾಮಾದಲ್ಲಿ ಡೈಮಂಡ್‌ ಪ್ರಿನ್ಸಸ್‌ ಎಂಬ ಕ್ರೂಸ್‌ ಹಡಗಿನಲ್ಲಿ ಬಂಧಿಯಾಗಿದ್ದ ಕಾರವಾರ ಮೂಲದ ಅಭಿಷೇಕ್‌ ಬಾಲಕೃಷ್ಣ ಮಗರ್‌(27) ಸೇರಿ ಒಟ್ಟು 119 ಭಾರತೀಯರು ಮತ್ತು ಐವರು ವಿದೇಶಿಯರನ್ನು ಕೇಂದ್ರ ಸರ್ಕಾರದ ವಿಶೇಷ ಏರ್‌ ಇಂಡಿಯಾ ವಿಮಾನದ ಮೂಲಕ ಗುರುವಾರ ವಾಪಸ್‌ ಭಾರತಕ್ಕೆ ಕರೆತರಲಾಯಿತು.

ಕೊರೊನಾ ವೈರಸ್‌ ಕಬಂಧ ಬಾಹುವಿನಿಂದ ತಪ್ಪಿಸಿಕೊಂಡು ಬಂದ ಅಭಿಷೇಕ ಮಗರ್‌ ಶುಕ್ರವಾರ ಮಾಧ್ಯಮಗಳಿಗೆ ವ್ಯಾಟ್ಸ್‌ಆ್ಯಪ್‌ ಸಂದೇಶ ಕಳುಹಿಸಿ, ಕೆಲ ವಿಷಯ ಹಂಚಿಕೊಂಡಿದ್ದಾರೆ. ಪ್ರಿನ್ಸನ್‌ ಹಡಗಿನಿಂದ ಹೊರ ಬಂದ ಮೇಲೆ ಭಾರತೀಯರನ್ನು ಹೊತ್ತು ತಂದ ವಿಶೇಷ ವಿಮಾನ ಮುಂಜಾನೆ 4:30ರ ಸುಮಾರಿಗೆ ನವದೆಹಲಿ ತಲುಪಿತು. ಹರಿಯಾಣದ ಮಾನೇಸರ್‌ನಲ್ಲಿರುವ ಸೇನಾ ನೆಲೆಗೆ ಎಲ್ಲರನ್ನೂ ಕರೆದೊಯ್ಯಲಾಗಿದೆ ಎಂದು ವಿವರಿಸಿದ್ದಾರೆ.

ಅಭಿಷೇಕ್‌ ಡೈಮಂಡ್‌ ಪ್ರಿನ್ಸಸ್‌ ಕ್ರೂಸ್‌ ಹಡಗಿನಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಕೊರೊನಾ ವೈರಸ್‌ ಹರಡಲು ಕಾರಣವಾಗಬಹುದು ಎಂಬ ಭಯದಿಂದ ಜಪಾನ್‌ ಸರ್ಕಾರ ತನ್ನ ಭೂ ಪ್ರದೇಶದಲ್ಲಿ ಹಡಗನ್ನು ಒಳಪ್ರವೇಶಕ್ಕೆ ಅನುಮತಿಸಿರಲಿಲ್ಲ. ಹೀಗಾಗಿ 20 ದಿನಗಳಿಗಿಂತ ಹೆಚ್ಚು ಕಾಲ ಹಡಗಿನಲ್ಲಿದ್ದ ಸಿಬ್ಬಂದಿ, ಪ್ರಯಾಣಿಕರು ಸಮುದ್ರ ಮಧ್ಯದಲ್ಲಿಯೇ ಸಿಕ್ಕಿಕೊಂಡಿದ್ದರು. ಇದರಿಂದ ನಾವೆಲ್ಲ ಸಾವು ಬದುಕಿನ ಪ್ರಶ್ನೆ ಎದುರಿಸಿದ್ದೆವು. ಈಗ ಆ ಆತಂಕದಿಂದ ಹೊರಬರಲು ಸಾಕಷ್ಟು ಸಮಯ ಬೇಕು ಎಂದು ತಿಳಿಸಿದ್ದಾರೆ.

ನಾವು ಇದ್ದ ಹಡಗು ಚೀನಾ ತೊರೆದು ಕೆಲವೇ ದಿನಗಳಲ್ಲಿ ಇಂತಹ ಆಘಾತಕಾರಿ ಪರಿಸ್ಥಿತಿ ಎದುರಿಸುತ್ತೇವೆ ಎಂದು ಕನಸು ಮನಸ್ಸಿನಲ್ಲಿಯೂ ಎಣಿಸಿರಲಿಲ್ಲ. ಈ ಬಗ್ಗೆ ಸ್ವಲ್ಪವೂ ಅನುಮಾನ ಇರಲಿಲ್ಲ. ಈ ಹಂತದಲ್ಲಿ ನಾನು ಎಲ್ಲವನ್ನೂ ವಿವರಿಸುವ ಸ್ಥಿತಿಯಲ್ಲಿಲ್ಲ ಮತ್ತು ಮಾನೇಸರ್‌ನಲ್ಲಿ 14 ದಿನಗಳ ಕಾಲ ಕಡ್ಡಾಯವಾಗಿ ಕೊರೊನಾ ವೈರಸ್‌ ಬಾಧಿ ತರಾಗಿದ್ದಾರೆಯೇ ಹೇಗೆ ಎಂಬುದನ್ನು ಪರೀಕ್ಷಿಸಿಕೊಳ್ಳಬೇಕಾಗಿದೆ. ಕ್ಯಾರೆಂಟೈನ್‌ ಅವಧಿಯ ನಂತರ ನಾನು ಮರಳಿ ಕಾರವಾರಕ್ಕೆ ಹಿಂದಿರುಗಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ಎಲ್ಲವನ್ನೂ ವಿವರಿಸಲಿದ್ದೇನೆ ಎಂದು ತಿಳಿಸಿದ್ದಾರೆ.

ಭಾರತ ಸರ್ಕಾರಕ್ಕೆ ಧನ್ಯವಾದ: ಡೈಮಂಡ್‌ ಪ್ರಿನ್ಸಸ್‌ ಹಡಗಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಭಾರತೀಯರನ್ನಲ್ಲದೇ, ವಿದೇಶಿ ಪ್ರಜೆಗಳನ್ನೂ ಕೇಂದ್ರ ಸರ್ಕಾರ ಇದೇ ವಿಮಾನದಲ್ಲಿ ವಿಶೇಷ ಆಸಕ್ತಿ ವಹಿಸಿ ದೆಹಲಿಗೆ ಕರೆ ತಂದಿದೆ. ಇದಕ್ಕೆ ಸಹಾಯ ಹಸ್ತ ಚಾಚಿದ್ದಕ್ಕಾಗಿ ಅವರು ಭಾರತ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಅಭಿಷೇಕ್‌ ಭಾರತಕ್ಕೆ ತಲುಪಿದ ಕೂಡಲೇ ತಮ್ಮ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಜಾನ್‌ ಬಚಿ ತೋ ಲಾಖೋ ಪಾಯೇ ಲೌಟ್‌ ಕೆ ಬುದ್ದು ಘರ್‌ ತೋ ಆಯೆ’ ಎಂದು ಅವರು ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಬರೆದುಕೊಂಡಿದ್ದಾರೆ. ಅಭಿಷೇಕ್‌ ಗೋವಾದಲ್ಲಿ ಹೋಟೆಲ್‌ ಮ್ಯಾನೇಜ್ಮೇಂಟ್‌ ಕೋರ್ಸ್‌ ಮುಗಿಸಿದ ನಂತರ, ಡೈಮಂಡ್‌ ಪ್ರಿನ್ಸಸ್‌ ಕ್ರೂಸ್‌ ಹಡಗಿನ ಸಿಬ್ಬಂದಿಯಾಗಿದ್ದರು. ಅವರು ಕಾರವಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪೂರೈಸಿದ್ದರು.

ಸಮಾಧಾನದಲ್ಲಿ ತಂದೆ-ತಾಯಿ: ಅಭಿಷೇಕ್‌ ಕೊನೆಗೂ ಸುರಕ್ಷಿತವಾಗಿ ಭಾರತಕ್ಕೆ ಮರಳಿರುವ ಬಗ್ಗೆ ಅಭಿಷೇಕನ ತಾಯಿ ರೂಪಾಲಿ ಮತ್ತು ತಂದೆ ಬಾಲಕೃಷ್ಣ ಸಮಾಧಾನಪಟ್ಟಿದ್ದಾರೆ. ಸುಮಾರು ಒಂದು ತಿಂಗಳ ಕಾಲ ಮಗ ಸಮುದ್ರ ಮಧ್ಯ ಹಡಗಿನಲ್ಲಿ ಸಿಕ್ಕಿ ಹಾಕಿಕೊಂಡಾಗಿನಿಂದ ಆತಂಕದಲ್ಲಿಯೇ ಇದ್ದರು. ಕೊರೊನಾ ಎಂಬ ವೈರಸ್‌ ಭಯದಿಂದ ಮಗ ಪಾರದ ಎಂದು ಅವರು ಈಗ ನಿರಾಳರಾಗಿದ್ದಾರೆ.

ನಾವು ಅನುಭವಿಸಿದ ದುಃಖ ಮತ್ತು ಪಟ್ಟ ಸಂಕಟವನ್ನು ವಿವರಿಸಲು ಸಾಧ್ಯವಿಲ್ಲ. ಅಭಿಷೇಕ್‌ ನಮಗೆ ಒಬ್ಬನೇ ಮಗನಾಗಿದ್ದು, ಮನೆಗೆ ಬಂದ ಬಳಿಕ ಅಭಿಷೇಕ್‌ ವಿದೇಶಿ ಮೂಲದ ಅದೇ ಕಂಪನಿಯಲ್ಲಿ ಕೆಲಸ ಮುಂದುವರಿಸಬೇಕೆ ಅಥವಾ ಬೇಡವೇ ಎಂಬುದನ್ನು ವಿಚಾರ ಮಾಡುವುದಾಗಿ ತಿಳಿಸಿದ್ದಾರೆ. ಅಭಿಷೇಕ ತಾಯಿ ಮಾತನಾಡಿ, ನಾವು ಸಂಕಷ್ಟದಲ್ಲಿದ್ದಾಗ ನಮ್ಮನ್ನು ಬೆಂಬಲಿಸಿದ್ದಕ್ಕಾಗಿ ಉತ್ತರ ಕನ್ನಡ ಜಿಲ್ಲಾಡಳಿತ, ಭಾರತ ಸರ್ಕಾರ ಮತ್ತು ಮಾಧ್ಯಮಗಳಿಗೆ ಧನ್ಯವಾದ ಹೇಳಿದ್ದಾರೆ.

ಟಾಪ್ ನ್ಯೂಸ್

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.