ಅ.4ರಂದು ಕೋರ್ಟ್ ಕಲಾಪಕ್ಕೆಗೈರು: ಬಾರ್ ಕೌನ್ಸಿಲ್ ನಿರ್ಣಯ
Team Udayavani, Sep 28, 2017, 12:42 PM IST
ಬೆಂಗಳೂರು: ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಜಯಂತ್ ಪಟೇಲ್ರನ್ನು ಏಕಾಏಕಿ ವರ್ಗಾವಣೆ ಮಾಡಿ ರುವುದನ್ನು ಖಂಡಿಸಿರುವ ರಾಜ್ಯ ವಕೀಲರ ಪರಿಷತ್, ನ್ಯಾಯಾಂಗ ವ್ಯವಸ್ಥೆಯ ಸ್ವತಂತ್ರ ಕಾರ್ಯನಿರ್ವಹಣೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಅಕ್ಟೋಬರ್ 4ರಂದು ಕೋರ್ಟ್ ಕಲಾಪಗಳಿಂದ ದೂರ ಉಳಿದು ಪ್ರತಿಭಟಿಸು ವುದಾಗಿ ತಿಳಿಸಿದೆ. ನ್ಯಾ.ಜಯಂತ್ ಪಟೇಲ್ರ ವರ್ಗಾವಣೆ ಸಂಬಂಧ ರಾಜ್ಯ ವಕೀಲರ ಪರಿಷತ್ ಬುಧವಾರ ತುರ್ತು ಸಭೆ ನಡೆಸಿ ಈ ನಿರ್ಣಯ ಅಂಗೀಕರಿಸಿದೆ ಎಂದು ಪರಿಷತ್ನ ಉಪಾಧ್ಯಕ್ಷ ವೈ.ಆರ್.ಸದಾಶಿವರೆಡ್ಡಿ ತಿಳಿಸಿದ್ದಾರೆ.
ಹಿರಿಯ ನ್ಯಾಯಮೂರ್ತಿ ಆಗಿದ್ದ ಜಯಂತ್ ಪಟೇಲ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಥವಾ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆಗಬೇಕಿತ್ತು. ಆದರೆ, ನ್ಯಾಯಾಂಗ ವ್ಯವಸ್ಥೆ ಅವರನ್ನು ನಡೆಸಿಕೊಂಡಿರುವ ರೀತಿಗೆ ಬೇಸರಗೊಂಡು ರಾಜೀನಾಮೆ ನೀಡಿದ್ದಾರೆ. ನ್ಯಾ.ಜಯಂತ್ ಪಟೇಲ್ ದಿಢೀರ್ ವರ್ಗಾವಣೆ, ಖಾಲಿ ಹುದ್ದೆಗಳ ನೇಮಕಕ್ಕೆ ವಿಳಂಬ, ನ್ಯಾಯಮೂರ್ತಿಗಳ ನೇಮಕ, ವರ್ಗಾವಣೆ ವಿಚಾರಗಳಲ್ಲಿ ಸರ್ಕಾರಗಳ ಹಸ್ತ ಕ್ಷೇಪ ಸೇರಿದಂತೆ ಇತ್ತೀಚಿನ ಕೆಲವು ಬೆಳವಣಿಗೆಗಳು ನ್ಯಾಯಾಂಗ ವ್ಯವಸ್ಥೆಯಲ್ಲಿನ ಲೋಪಗಳನ್ನು ಎತ್ತಿತೋರಿಸುತ್ತಿವೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.
ಪಾರದರ್ಶಕತೆ ತರಬೇಕು: ಈ ನಿಟ್ಟಿನಲ್ಲಿ ಕೊಲಿಜಿಯಂ ವ್ಯವಸ್ಥೆಯಲ್ಲಿ ಶಾಸಕಾಂಗದ ಪಾತ್ರವನ್ನು ಕುಗ್ಗಿಸಿ, ಮತ್ತಷ್ಟು ಪಾರದರ್ಶಕತೆ, ನ್ಯಾಯಾಂಗ ವ್ಯವಸ್ಥೆಯ ಘನತೆ ಹಾಗೂ ವಿಶ್ವಾಸಾರ್ಹತೆ ಎತ್ತಿಹಿಡಿಯುವ ಅನಿವಾರ್ಯತೆಯಿದೆ. ಎಂದು ನಿರ್ಣಯದ ಪತ್ರದಲ್ಲಿ ತಿಳಿಸಿದ್ದಾರೆ.
32 ನ್ಯಾಯಮೂರ್ತಿ ಹುದ್ದೆ ಖಾಲಿ! ರಾಜ್ಯ ಹೈಕೋರ್ಟ್ನಲ್ಲಿ 62 ನ್ಯಾಯಮೂರ್ತಿಗಳ ಹುದ್ದೆಯಿವೆ. ಆದರೆ, ಹಾಲಿ 25 ನ್ಯಾಯಮೂರ್ತಿಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, 32 ಹುದ್ದೆಗಳು ಖಾಲಿಯಾಗಿವೆ. ಕೇಂದ್ರ ಸರ್ಕಾರ ನ್ಯಾಯಮೂರ್ತಿಗಳ ಹುದ್ದೆಗಳನ್ನು ಭರ್ತಿ ಮಾಡಲು ವಿಳಂಬ ಧೋರಣೆ ಅನುಸರಿಸುತ್ತಿರುವುದು ಬೇಸರ ತಂದಿದೆ ಎಂದು ವಕೀಲರ ಪರಿಷತ್ ಅಸಮಾಧಾನ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್ಗೆ ಕಾರಾಗೃಹ ಶಿಕ್ಷೆ
Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.