![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 15, 2019, 3:06 AM IST
ಬೆಂಗಳೂರು: ಕಾಂಗ್ರೆಸ್ ಶಾಸಕರ ರಾಜೀನಾಮೆಗೂ, ನಮಗೂ ಯಾವುದೇ ಸಂಬಂಧ ಇಲ್ಲ ಎನ್ನುವ ಬಿಜೆಪಿ ನಾಯಕರು ಯಾರ ಕಿವಿಯ ಮೇಲೆ ಹೂವಿಡುತ್ತಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಭಾನುವಾರ ಎಂಟಿಬಿ ನಾಗರಾಜ್ ಅವರನ್ನು ವಿಶೇಷ ವಿಮಾನದಲ್ಲಿ ಮುಂಬೈಗೆ ಬಿಜೆಪಿ ನಾಯಕ ಆರ್.ಅಶೋಕ್ ಕರೆದುಕೊಂಡು ಹೋಗಿದ್ದು, ಧೈರ್ಯವಿದ್ದರೆ, “ಆಪರೇಷನ್ ಕಮಲ’ವನ್ನು ಬಿಜೆಪಿಯವರು ಒಪ್ಪಿಕೊಳ್ಳಬೇಕು ಎಂದು ಸವಾಲು ಹಾಕಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅತೃಪ್ತ ಶಾಸಕರಿಗೆ ಮುಂಬೈಗೆ ತೆರಳಲು ವಿಮಾನ, ವಾಸ್ತವ್ಯ ಹೂಡಲು ಹೋಟೆಲ್, ದೆಹಲಿಗೆ ತೆರಳಲು ವಿಮಾನ ವ್ಯವಸ್ಥೆ ಸೇರಿ ಎಲ್ಲವನ್ನೂ ಬಿಜೆಪಿಯವರೇ ಮಾಡಿದ್ದಾರೆ. ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ, ಪ್ರಜಾಪ್ರಭುತ್ವದಲ್ಲಿ ಎಲ್ಲವನ್ನು ಒಪ್ಪಿಕೊಳ್ಳಬೇಕು. ಅಧಿಕಾರಕ್ಕಾಗಿ ಪಂಚಾಯಿತಿಗಳಲ್ಲಿ ಮಾಡಿದ ಹಾಗೇ ನಾವೇ “ಆಪರೇಷನ್ ಕಮಲ’ ಮಾಡಿದ್ದೇವೆ ಎಂದು ಬಿಜೆಪಿಯವರು ಒಪ್ಪಿಕೊಳ್ಳಲಿ ಎಂದು ಆಗ್ರಹಿಸಿದರು.
ನಮ್ಮ ಶಾಸಕರು ನಮಗೆ ಮತ ಹಾಕುತ್ತಾರೆ: ನಾವು ಶಾಂತಿಪ್ರಿಯರು ಎಂದು ಬಿಜೆಪಿಯವರು ಈ ರೀತಿಯ ಕೆಲಸ ಮಾಡುತ್ತಿದ್ದಾರೆ. ಜನತೆ ಎಲ್ಲವನ್ನೂ ನೋಡುತ್ತಿದ್ದಾರೆ. ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ನಮ್ಮ ಶಾಸಕರು ನಮಗೆ ಮತ ಹಾಕುತ್ತಾರೆ ಎನ್ನುವ ವಿಶ್ವಾಸ ಇದೆ.
ಕಾರ್ಯಕರ್ತರು ಹಾಗೂ ರಾಜೀನಾಮೆ ಸಲ್ಲಿಸಿರುವ ಕ್ಷೇತ್ರಗಳ ಜನರು ಈಗಾಗಲೇ ರಾಜೀನಾಮೆ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ಶಾಸಕರಿಗೆ ಕರುಣೆ ಬಂದು ನಮ್ಮ ಸರ್ಕಾರ ಉಳಿಸಿಕೊಳ್ಳುತ್ತಾರೆ ಎಂದು ಹೇಳಿದರು. ಎಂಟಿಬಿ ನಾಗರಾಜ್ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ಅವರ ರಾಜೀನಾಮೆಗೆ ಯಾರ ಒತ್ತಡ ಇದೆ ಎನ್ನುವುದನ್ನು ಹೇಳಿಕೊಂಡಿದ್ದಾರೆ.
ಅದನ್ನು ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಬಿಜೆಪಿಯವರು ಸೋಮವಾರವೇ ವಿಶ್ವಾಸಮತ ಯಾಚಿಸಬೇಕೆಂದು ಕೇಳುವ ಮೊದಲು ಯಡಿಯೂರಪ್ಪ ಅವರು ಸದನ ಸಲಹಾ ಸಮಿತಿ ಸಭೆಗೆ ಹಾಜರಾಗಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಯಮಗಳ ಪ್ರಕಾರ ಸಭೆಗಳಿಗೆ ಭಾಗವಹಿಸಿ ಚರ್ಚೆ ನಡೆಸಲಿ ಎಂದು ಹೇಳಿದರು.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.