ನಕಲಿ ದಾಖಲೆಗಳ ಅರ್ಜಿ ಸ್ವೀಕರಿಸಿ ಅಕ್ರಮ


Team Udayavani, Aug 29, 2017, 11:17 AM IST

29-STATE-9.jpg

ಬೆಂಗಳೂರು: ಶಿವರಾಮ ಕಾರಂತ ಬಡಾವಣೆಯ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಯಿಂದ ತಮ್ಮ ಜಮೀನು ಕೈ ಬಿಡಬೇಕು ಎಂದು ಕೋರಿ ನಕಲಿ
ದಾಖಲೆಗಳನ್ನು ಸೃಷ್ಟಿಸಿ ಸಲ್ಲಿಕೆಯಾಗಿದ್ದ ಆಕ್ಷೇಪಣಾ ಅರ್ಜಿಗಳನ್ನು ಸ್ವೀಕರಿಸಿ ಅಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಕ್ರಮ ಎಸಗಿದ್ದಾರೆ
ಎಂದು ಭ್ರಷ್ಟಾಚಾರ ನಿಗ್ರಹ ದಳ ಹೈಕೋರ್ಟ್‌ಗೆ ತಿಳಿಸಿದೆ.

ಎಸಿಬಿ ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್‌ಗಳ ಮುಂದಿನ ಪ್ರಕ್ರಿಯೆಗಳಿಗೆ ಮಧ್ಯಂತರ ತಡೆಯಾಜ್ಞೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ರಿಟ್‌ ಅರ್ಜಿಗಳನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾ.ಅರವಿಂದಕುಮಾರ್‌ ಅವರಿದ್ದ ಏಕಸದಸ್ಯ ಪೀಠದ ಮುಂದೆ ಎಸಿಬಿ ಪರ ವಕೀಲರು ಈ
ವಿವರಣೆ ನೀಡಿದರು. ಎಸಿಬಿ ಪರ ವಕೀಲರ ಪ್ರತಿವಾದ ಆಲಿಸಿದ ನ್ಯಾಯಪೀಠ, ಈ ಹಿಂದೆ ನೀಡಿದ್ದ ಸೂಚನೆಯಂತೆ ಮುಂದಿನ ವಿಚಾರಣೆಯವರೆಗೆ ಅರ್ಜಿದಾರರನ್ನು ಬಂಧಿಸದಂತೆ ಮೌಖೀಕವಾಗಿ ಎಸಿಬಿಗೆ ತಾಕೀತು ಮಾಡಿತು. ಜೊತೆಗೆ ಅರ್ಜಿದಾರರು ಕೋರಿರುವ ಮಧ್ಯಂತರ ತಡೆಯಾಜ್ಞೆಗೆ ಆಕ್ಷೇಪಣೆ ಸಲ್ಲಿಸುವಂತೆ ಎಸಿಬಿ ಪರ ವಕೀಲರಿಗೆ ಸೂಚಿಸಿ ಆಗಸ್ಟ್‌ 30ಕ್ಕೆ ವಿಚಾರಣೆ ಮುಂದೂಡಿದೆ.

ಇದಕ್ಕೂ ಮೊದಲು ನಡೆದ ವಿಚಾರಣೆ ವೇಳೆ ವಾದ ಮಂಡಿಸಿದ ಎಸಿಬಿ ಪರ ವಕೀಲರು, ಶಿವರಾಮ ಕಾರಂತ ಬಡಾವಣೆ ನಿರ್ಮಾಣದ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಡಿ.31ಕ್ಕೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿ, 2010ರಲ್ಲಿ ಆಕ್ಷೇಪಣೆ ಆಹ್ವಾನಿಸಲಾಗಿತ್ತು. ಈ ವೇಳೆ ನಿಯಮ ಬಾಹಿರವಾಗಿ ಖುದ್ದು ಸಿಎಂ ಆಕ್ಷೇಪಣಾ ಅರ್ಜಿಗಳನ್ನು ಸ್ವೀಕರಿಸಿದ್ದಾರೆ. ಅಲ್ಲದೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಆಶಾ ಪರದೇಸಿ ಎಂಬ ಮಹಿಳೆ ಹೆಸರಿನಲ್ಲಿಯೂ ಆಕ್ಷೇಪಣೆ ಸ್ವೀಕೃತವಾಗಿದ್ದು, ಅದರಲ್ಲಿ ಅರ್ಜಿದಾರಳಾದ ಆಕೆಯ ಸಹಿ ಅಥವಾ ದಿನಾಂಕ ನಮೂದಾಗಿಲ್ಲ. ಹೀಗಿದ್ದರೂ ಬಿಎಸ್‌ವೈ ಅರ್ಜಿದಾರಳ ಪರವಾಗಿ ಭೂ ಸ್ವಾಧೀನ ಪ್ರಕ್ರಿಯಿಂದ ಕೈ ಬಿಡುವಂತೆ ಆದೇಶಿಸಿ ಅಕ್ರಮ ಎಸಗಿದ್ದಾರೆ. ಇದೇ ರೀತಿಯ 28ಕ್ಕೂ ಅಧಿಕ ಅರ್ಜಿಗಳನ್ನು ಅವರೇ ಸ್ವೀಕರಿಸಿದ್ದಾರೆ. ಈ ಪ್ರಕರಣದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿಯೇ ಅಕ್ರಮ ಎಸಗಿದ್ದಾರೆ ಎನ್ನಲು ಪುಷ್ಟಿ ದೊರೆತಿದೆ ಎಂದರು.

ಮುಂದಿನ ದಿನಗಳಲ್ಲಿ ಬಿಎಸ್‌ವೈ ಮುಖ್ಯಮಂತ್ರಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ನೂತನ ಸಿಎಂ ಆಗಿ ನೇಮಕಗೊಂಡ ಡಿ.ವಿ.ಸದಾನಂದ ಗೌಡ, ವಿಧಾನಸಭೆ ಅಧಿವೇಶನದಲ್ಲಿ ಶಿವರಾಮ ಕಾರಂತ ಬಡಾವಣೆಯಲ್ಲಿ ಅಕ್ರಮ ನಡೆದಿರುವ ಆರೋಪ ಸಂಬಂಧ ತನಿಖೆ ನಡೆಸುವುದಾಗಿ ಏಪ್ರಿಲ್‌ 3, 2012ರಲ್ಲಿ ಘೋಷಿಸಿದ್ದಾರೆ. ಅದರಂತೆ  ಈ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಆದರೆ, ಬದಲಾದ ಸನ್ನಿವೇಶಗಳಲ್ಲಿ ಸಿಐಡಿ ತನಿಖೆ ನನೆಗುದಿಗೆ ಬಿತ್ತು. ಈ ಅಂಶಗಳೇ ಅರ್ಜಿದಾರರು ಈ ಪ್ರಕರಣದಲ್ಲಿ ಅಕ್ರಮ ಎಸಗಿರುವುದು ಗೊತ್ತಾಗಲಿದೆ. ಈ ನಿಟ್ಟಿನಲ್ಲಿ ಎಸಿಬಿ ತನಿಖೆಗೆ ತಡೆಯಾಜ್ಞೆ ನೀಡಬಾರದು ಎಂದು ಕೋರಿದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.