![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Mar 10, 2019, 4:13 AM IST
ಸಕಲೇಶಪುರ: ಸರಕಾರಿ ಬಸ್ ಹಾಗು ಕಾರಿನ ನಡುವೆ ರವಿವಾರ ಮುಂಜಾನೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಾರನಹಳ್ಳಿಯಲ್ಲಿ ನಡೆದಿದೆ.
ಮಂಗಳೂರಿನಿಂದ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಹಾಸನದಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು, ಓರ್ವ ಮಹಿಳೆ ಮತ್ತು ಒಂದು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಮೃತದೇಹಗಳು ರಸ್ತೆಗೆ ಎಸೆಯಲ್ಪಟ್ಟಿದ್ದವು.
ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದು, ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹಾಸನ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ವರ್ಗಾಯಿಸಲಾಗಿದೆ.
ಕಾರಿನಲ್ಲಿದ್ದವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹಿರಿಯ ಪೊಲೀಸ್ ಆಧಿಕಾತಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.