ಐಟಿಐ ಅಲ್ಪಾವಧಿ ಕೋರ್ಸ್ ಕೌಶಲ್ಯಾಭಿವೃದ್ಧಿ ನಿಗಮಕ್ಕೆ ಪ್ರಮಾಣ ಪತ್ರ ನೀಡುವ ಮಾನ್ಯತೆ
ಅಲ್ಪಾವಧಿ ಕೋರ್ಸುಗಳನ್ನು ಮಾಡುವವರಿಗೆ ಅನುಕೂಲ
Team Udayavani, Aug 1, 2022, 6:59 PM IST
ಬೆಂಗಳೂರು: ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ಸಹಯೋಗದಲ್ಲಿ ಉನ್ನತೀಕರಿಸಿರುವ 150 ಐಟಿಐಗಳಲ್ಲಿ ಅಲ್ಪಾವಧಿ ಕೋರ್ಸ್ ಗಳನ್ನು ಮಾಡುವವರಿಗೆ ಇನ್ನು ಮುಂದೆ ಕೌಶಲ್ಯ ಅಭಿವೃದ್ಧಿ ನಿಗಮವೇ ಪ್ರಮಾಣ ಪತ್ರಗಳನ್ನು ಕೊಡಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಸೋಮವಾರ ಈ ವಿಚಾರ ತಿಳಿಸಿರುವ ಅವರು, ಈ ಸಂಬಂಧವಾಗಿ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮ ಮತ್ತು ನವದೆಹಲಿಯಲ್ಲಿರುವ ರಾಷ್ಟ್ರೀಯ ವೃತ್ತಿ ಶಿಕ್ಷಣ ಮತ್ತು ತರಬೇತಿ ಮಂಡಳಿ ನಡುವೆ ಒಡಂಬಡಿಕೆ ಆಗಿದೆ ಹೀಗಾಗಿ ಇನ್ನು ಮುಂದೆ ಪ್ರಮಾಣಪತ್ರದ ವಿಷಯದಲ್ಲಿ ಗೊಂದಲಗಳಿರುವುದಿಲ್ಲ ಎಂದರು.
ಸೋಮವಾರ ದೆಹಲಿಯಲ್ಲಿ ಒಡಂಬಡಿಕೆಗೆ ಅಂಕಿತ ಹಾಕಲಾಗಿದೆ ಈ ಸಂದರ್ಭದಲ್ಲಿ ಕೌಶಲ್ಯ ಅಭಿವೃದ್ಧಿ ನಿಗಮದ ಪರವಾಗಿ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ ಮತ್ತು ಎನ್ಸಿವಿಇಟಿ ಪರವಾಗಿ ನಿರ್ದೇಶಕ ಕರ್ನಲ್ ಸತೀಶ್ ಇದ್ದರು.
ಉನ್ನತಿಕರಿಸಿರುವ ಐಟಿಐಗಳಲ್ಲಿ ವಿದ್ಯಾರ್ಥಿಗಳಲ್ಲದೆ ಇತರರು ಸಾಮಾನ್ಯವಾಗಿ ಈ ಅಲ್ಪಾವಧಿ ಕೋರ್ಸ್ ಗಳನ್ನು ಅಭ್ಯಸಿಸುತ್ತಾರೆ. ಇಂತಹ 23 ಅಲ್ಪಾವಧಿ ಕೋರ್ಸ್ ಗಳು ರಾಜ್ಯದಲ್ಲಿ ಲಭ್ಯವಿದ್ದು ಇವುಗಳ ಅವಧಿ ಕನಿಷ್ಠ 3 ತಿಂಗಳಿನಿಂದ ಗರಿಷ್ಠ 6 ತಿಂಗಳಾಗಿದೆ ಎಂದು ಅವರು ಹೇಳಿದ್ದಾರೆ
ಆದರೆ ಇದುವರೆಗೆ ಇಂತವರಿಗೆ ಯಾರು ಪ್ರಮಾಣ ಪತ್ರ ನೀಡಬೇಕು ಎಂಬ ಗೊಂದಲವಿತ್ತು, ಇದನ್ನು ಬಗೆಹರಿಸಲು ಹಲವು ದಿನಗಳಿಂದ ಪ್ರಯತ್ನಿಸಲಾಗುತ್ತಿತ್ತು. ಈಗ ಈ ಸಮಸ್ಯೆ ಬಗೆಹರಿದಿರುವುದು ಸಂತಸ ತಂದಿದೆ ಎಂದರು.
ಹೀಗಾಗಿ ಫಂಡಮೆಂಟಲ್ ಆಫ್ ಇನೋವೇಷನ್ ಅಂಡ್ ಟೆಕ್ನಾಲಜಿ, ಜೂನಿಯರ್ ಪ್ರಾಡಕ್ಟ್ ಡಿಸೈನರ್, ಆಟೋ ಎಲೆಕ್ಟ್ರಿಕಲ್ ಡಿಸೈನ್ ಟೆಕ್ನಿಷಿಯನ್, ಆಟೋಮೊಬೈಲ್ ರಿಪೇರ್ ಅಂಡ್ ಮೈನ್ಟೆನೆನ್ಸ್ ಜೂನಿಯರ್, ಸಿಎಎಂ ಪ್ರೋಗ್ರಾಮರ್, ಸಿಎನ್ಸಿ ಮಷೀನಿಂಗ್, ಜೂನಿಯರ್ ರೋಬೋಟ್ ಆಪರೇಟರ್ ಮುಂತಾದ ಅಲ್ಪಾವಧಿ ಕೋರ್ಸುಗಳನ್ನು ಮಾಡುವವರಿಗೆ ಅನುಕೂಲವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.