ಜಿಎಸ್‌ಟಿ ಸೋರಿಕೆ ತಡೆಗೆ ಕ್ರಮ: ಸಿಎಂ
Team Udayavani, Dec 15, 2018, 7:14 AM IST
ವಿಧಾನಸಭೆ: “ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ ಸೋರಿಕೆ ಯಾಗುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಿಎಸ್‌ಟಿ ವಿಧೇಯಕವನ್ನು ರಾಜ್ಯ ಸರ್ಕಾರ ಅಂಗೀಕರಿಸಲು ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ)ವಿಧೇಯಕ 2018 ಮಂಡಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಜಿಎಸ್‌ಟಿ ಕಾಯ್ದೆ ಜಾರಿಗೆ ಬಂದ ಮೇಲೆ ತೆರಿಗೆ ಸಂಗ್ರಹ ಹೆಚ್ಚಳವಾಗಿದೆ ಎಂದರು. ಜಿಎಸ್‌ಟಿ ಬಗ್ಗೆ ಜನರಿಗೆ ತಿಳಿವಳಿಕೆ ನೀಡಲು ಜಿಲ್ಲಾ ಕೇಂದ್ರಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ವ್ಯಾಪಾ ರಸ್ಥರಿಗೂ ಮಾಹಿತಿ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. 2017- 18ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ 7500 ಕೋಟಿ ರೂ. ಜಿಎಸ್‌ಟಿ ಪರಿಹಾರ ಹಣ ಬಂದಿದೆ. ಈ ವರ್ಷ ಕೇಂದ್ರದಿಂದ ಬರುವ ಹಣ ಕಡಿಮೆಯಾಗುವ ಸಾಧ್ಯತೆಯಿದೆ ಎಂದರು.
ರಾಜ್ಯ ಸರ್ಕಾರದ ಪರ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರೇ ಜಿಎಸ್‌ಟಿ ಕೌನ್ಸಿಲ್ ಸಭೆಗೆ ಹಾಜರಾಗುತ್ತಿದ್ದಾರೆ. ರಾಜ್ಯದಲ್ಲಿನ ಸಮಸ್ಯೆಗಳನ್ನು ಪ್ರತಿ ಬಾರಿ ಕೌನ್ಸಿಲ್ ಸಭೆಯಲ್ಲಿ ಕೇಂದ್ರ ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ ಎಂದರು. ಎಪಿಎಂಸಿಗಳಲ್ಲಿ ಸುಳ್ಳು ದಾಖಲೆ ತೋರಿಸಿ ತೆರಿಗೆ ವಂಚನೆ ಮಾಡುವ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿ ಗಮನ ಸೆಳೆದ ಬಿಜೆಪಿಯ ಮಾಧುಸ್ವಾಮಿ, ಆರಗ ಜ್ಞಾನೇಂದ್ರ, ಬಿ.ಸಿ. ನಾಗೇಶ್ ಅವರಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ತೆರಿಗೆ ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಲು ಸರ್ಕಾರ ತಕ್ಷಣ ಕ್ರಮಕೈಗೊಳ್ಳಲಿದೆ ಎಂದು ಹೇಳಿದರು. ವಹಿವಾಟುಗಳಲ್ಲಿ ತಪ್ಪು ಮಾಹಿತಿ ನೀಡುತ್ತಿರುವವರ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದ್ದು, ರಾಜ್ಯದಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದ್ದು, 8 ಜನರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಜಿಎಸ್‌ಟಿ ಕಾಯ್ದೆಯ ಬಗ್ಗೆ ರಾಜ್ಯದ ಅಧಿಕಾರಿಗಳು ಅಪ್‌ಡೇಟ್ ಆಗುತ್ತಿಲ್ಲ. ಕೇಂದ್ರದ
ಕಾಯ್ದೆ ಎಂದು ನಿರ್ಲಕ್ಷ್ಯ ತೋರುತ್ತಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ ಹೆಲ್ಪ್ಡೆಸ್ಕ್ ಗಳಲ್ಲಿ ಸಂಪೂರ್ಣ ಮಾಹಿತಿ ಹೊಂದಿರುವ ಅಧಿಕಾರಿಗಳನ್ನು ನಿಯೋಜಿಸಬೇಕೆಂದು ಸಲಹೆ ನೀಡಿದರು. ಪ್ರತಿಪಕ್ಷಗಳ ಸಲಹೆಯಂತೆ ತರಬೇತಿ ಹೊಂದಿದ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಜಿಎಸ್‌ಟಿ ಬಂದ ಮೇಲೆ ಚೆಕ್‌ಪೋಸ್ಟ್ ಗಳನ್ನು ರದ್ದು ಮಾಡಿರುವುದರಿಂದ ಆದಾಯ ಸೋರಿಕೆ ಮತ್ತು ಕಳ್ಳ ಸಾಗಾಣಿಕೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಕೇಂದ್ರ ಗೃಹ ಸಚಿವರ ಜತೆ ಚರ್ಚೆ: ಭರವಸೆ
ವಿಧಾನಸಭೆ: ವಿಧಾನಸಭೆ ಕ್ಷೇತ್ರಗಳಲ್ಲಿ ಶಾಸಕರಿಗೂ ರಾಷ್ಟ್ರಧ್ವಜಾರೋಹಣ ಮಾಡಲು ಅವಕಾಶ ಕಲ್ಪಿಸುವ ಕುರಿತು ಕೇಂದ್ರ ಗೃಹ ಸಚಿವರ ಜತೆ ಚರ್ಚಿಸಲಾಗುವುದು ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಶೂನ್ಯ ವೇಳೆಯಲ್ಲಿ ಜೆಡಿಎಸ್‌ನ ನಾಗನಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ರಾಷ್ಟ್ರ ಧ್ವಜಾರೋಹಣ ವಿಚಾರ ಕೇಂದ್ರದ ಕಾಯ್ದೆ ವ್ಯಾಪ್ತಿಯಲ್ಲಿ ಬರುತ್ತದೆ. ಹೀಗಾಗಿ, ರಾಜ್ಯಮಟ್ಟದಲ್ಲಿ ಏನೂ ಮಾಡಲಾಗುವುದಿಲ್ಲ. ದೆಹಲಿಗೆ ಹೋದಾಗ ಕೇಂದ್ರ ಗೃಹ ಸಚಿವರ ಬಳಿ ಮಾತನಾಡಿ
ನಿಯಮಾವಳಿ ಸರಳೀಕರಣ ಮಾಡಬಹುದಾ ಎಂದು ಚರ್ಚಿಸಲಿದ್ದೇನೆ ಎಂದು ಹೇಳಿದರು. ಇದಕ್ಕೂ ಮುನ್ನ ಮಾತನಾಡಿದ ನಾಗನಗೌಡ, ಪ್ರಧಾನಿಗಳು ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸುತ್ತಾರೆ. ಮುಖ್ಯ ಮಂತ್ರಿಗಳು ಮಾಣಿಕ್‌ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಮಟ್ಟದಲ್ಲಿ ಧ್ವಜಾರೋಹಣ ಮಾಡುತ್ತಾರೆ. ಆದರೆ, ತಾಲೂಕು ಮಟ್ಟದಲ್ಲಿ ತಹಸೀಲ್ದಾರ್ ಧ್ವಜಾರೋಹಣ ಮಾಡಿದರೆ ನಮ್ಮ ಹಕ್ಕಿಗೆ ಚ್ಯುತಿಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರ ಕೇಂದ್ರದ ಜತೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.