Parameshwar: ರಿಯಲ್‌ ಎಸ್ಟೇಟ್‌ ದಂಧೆಯಲ್ಲಿ ತೊಡಗಿಕೊಳ್ಳುವ ಪೊಲೀಸರ ವಿರುದ್ಧ ಕ್ರಮ: ಪರಂ


Team Udayavani, Feb 22, 2024, 9:40 PM IST

Parameshwar: ರಿಯಲ್‌ ಎಸ್ಟೇಟ್‌ ದಂಧೆಯಲ್ಲಿ ತೊಡಗಿಕೊಳ್ಳುವ ಪೊಲೀಸರ ವಿರುದ್ಧ ಕ್ರಮ: ಪರಂ

ವಿಧಾನ ಪರಿಷತು: ರಿಯಲ್‌ ಎಸ್ಟೇಟ್‌ ದಂಧೆಯಲ್ಲಿ ತೊಡಗಿಕೊಳ್ಳುವ ಪೊಲೀಸ್‌ ಅಧಿಕಾರಿಗಳ ಮೇಲೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಎಚ್ಚರಿಕೆ ನೀಡಿದರು.

ಕರ್ನಾಟಕ ಪೊಲೀಸರ (ತಿದ್ದುಪಡಿ) ವಿಧೇಯಕ-2024 ಅನ್ನು ಮಂಡಿಸಿ ಅವರು ಮಾತನಾಡಿದರು.

ಈಗಾಗಲೇ ಕೆಲವು ಪೊಲೀಸ್‌ ಅಧಿಕಾರಿಗಳು ರಿಯಲ್‌ ಎಸ್ಟೇಟ್‌ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂದು ವಿರೋಧ ಪಕ್ಷಗಳ ಸದಸ್ಯರು ಪ್ರಸ್ತಾಪ ಮಾಡಿದ್ದಾರೆ. ಆದರೆ ಈ ಬಗ್ಗೆ ಇಲಾಖೆಗೆ ಯಾವುದೇ ರೀತಿಯ ಮಾಹಿತಿ ಈವರೆಗೂ ಇಲ್ಲ. ಒಂದು ವೇಳೆ ಹಿರಿಯ ಪೊಲೀಸ್‌ ಅಧಿಕಾರಿಗಳು ರಿಯಲ್‌ ಎಸ್ಟೇಟ್‌ ದಂಧೆಯಲ್ಲಿ ತೊಡಗಿಕೊಂಡಿರುವುದು ಕಂಡು ಬಂದರೆ  ಸರ್ಕಾರ ಅಂತಹ ಅಧಿಕಾರಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

ಹಿರಿಯ ಅಧಿಕಾರಿಗಳೊಂದಿಗಿನ ಪ್ರತಿ ಸಭೆಯಲ್ಲಿ ಈ ಬಗ್ಗೆ ಎಚ್ಚರಿಕೆ ನೀಡುವ ಕೆಲಸ ನಡೆದಿದೆ. ರಿಯಲ್‌ ಎಸ್ಟೇಟ್‌, ಸಿವಿಲ್‌ ವಿಚಾರಗಳಲ್ಲಿ ಮಧ್ಯಪ್ರವೇಶ ಮಾಡಬಾರದು ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಖಡಕ್‌ ಆಗಿ ಎಚ್ಚರಿಕೆ ನೀಡಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.

ಪೊಲೀಸ್‌ ಇಲಾಖೆಯ ಅಧಿನಿಯಮದಲ್ಲಿ ಹಲವು ತಿದ್ದುಪಡಿ ತರಲಾಗಿದೆ. ಜತೆಗೆ ಕೆಲವು ಪೂರಕ ಅಂಶಗಳನ್ನು ಕೂಡ ಸೇರಿಸಲಾಗಿದೆ. ಇನ್ಸ್‌ ಪೆಕ್ಟರ್‌, ಡಿವೈಎಸ್‌ಪಿ  ಸೇರಿದಂತೆ (ಐಪಿಎಸ್‌ ಹೊರತು ಪಡಿಸಿದ ಅಧಿಕಾರಿಗಳು) ಹಿರಿಯ ಪೊಲೀಸ್‌ ಅಧಿಕಾರಗಳ ವರ್ಗಾವಣೆ ಅವಧಿ 1 ವರ್ಷವಿತ್ತು. ಅದನ್ನು 2 ವರ್ಷ ವಿಸ್ತರಿಸಲಾಗಿದೆ. ಅಸಮರ್ಥ ಅಧಿಕಾರಿಗಳನ್ನು 2 ವರ್ಷ ಕೂಡ ಒಂದೇ ಸ್ಥಳದಲ್ಲಿ ಇರಿಸಲಾಗದು. ಈ ಬಗ್ಗೆ ನಿಯಮಾವಳಿ ರೂಪಿಸಲಾಗುವುದು ಎಂದರು.

ಕೌನ್ಸೆಲಿಂಗ್‌ ಮೂಲಕ ವರ್ಗಾವಣೆಗೆ ಚಿಂತನೆ : ಈಗಾಗಲೇ ಹಲವು ಇಲಾಖೆಗಳಲ್ಲಿ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಆ ರೀತಿಯ ಪ್ರಕ್ರಿಯೆನ್ನು ರಾಜ್ಯ ಪೊಲೀಸ್‌ ಇಲಾಖೆಯಲ್ಲೂ ಕೂಡ ತರುವ ಚಿಂತನೆ ಸರ್ಕಾರದ ಮುಂದೆ ಇದೆಯಾ ಎಂಬ ಸಭಾಪತಿ  ಮಾತಿಗೆ ಉತ್ತರಿಸಿದ ಸಚಿವ ಡಾ.ಜಿ.ಪರಮೇಶ್ವರ್‌, ಹಿರಿಯ ಅಧಿಕಾರಿಗಳನ್ನು ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಮಾಡಬೇಕು ಎಂಬ ಚಿಂತನೆ ಚರ್ಚೆಯ ಹಂತದಲ್ಲಿದೆ.   ಮುಂದಿನ ದಿನಗಳಲ್ಲಿ ಈ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದರು.

ಕಮಾಂಡ್‌ ಸೆಂಟರ್‌ ಶೀಘ್ರ ಸ್ಥಾಪನೆ :

ಪೊಲೀಸ್‌ ಇಲಾಖೆಯಲ್ಲಿ ಹಲವು ರೀತಿಯ ಬದಲಾವಣೆಗೆ ಸರ್ಕಾರ ಮುಂದಾಗಿದೆ. ಜತೆಗೆ ಬೆಂಗಳೂರಿನಲ್ಲಿ ಕಮಾಂಡರ್‌ ಸೆಂಟರ್‌ ಸ್ಥಾಪಿಸಲು ಮುಂದಾಗಿದೆ. ರಾಜಧಾನಿಯ ಸುಮಾರು 1500 ಪೊಲೀಸ್‌ ಠಾಣೆಗಳಲ್ಲಿ ಪ್ರತಿ ದಿನ ನಡೆಯುವ ಆಗು ಹೋಗುಗಳನ್ನು ಈ ಕಮಾಂಡರ್‌ ಸೆಂಟರ್‌ಗಳ ಮೂಲಕ ವೀಕ್ಷಣೆ ಮಾಡಬಹುದಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು.

 

ಟಾಪ್ ನ್ಯೂಸ್

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

3-ct-ravi

ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.