Forest land ಪ್ರಕರಣ ತ್ವರಿತ ಇತ್ಯರ್ಥಕ್ಕೆ ಕ್ರಮ : ಈಶ್ವರ ಖಂಡ್ರೆ
ಹೆಚ್ಚುವರಿ ಫಾರೆಸ್ಟ್ ಸೆಟಲ್ಮೆಂಟ್ ಅಧಿಕಾರಿ ನಿಯೋಜನೆ
Team Udayavani, Dec 21, 2023, 1:09 AM IST
ದಾವಣಗೆರೆ: ಅರಣ್ಯ ಭೂಮಿಗೆ ಸಂಬಂಧಿಸಿದ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಮತ್ತು ರೈತರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಹೆಚ್ಚುವರಿ ಫಾರೆಸ್ಟ್ ಸೆಟಲ್ಮೆಂಟ್ ಅಧಿಕಾರಿ (ಎಸ್.ಎಫ್.ಒ.)ಗಳನ್ನು ನಿಯೋಜಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಬುಧವಾರ ದಾವಣಗೆರೆಯಲ್ಲಿ ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ದಾವಣಗೆರೆ ಮತ್ತು ಕೊಪ್ಪಳ ಅರಣ್ಯ ವಿಭಾಗದ ಪ್ರಗತಿ ಪರಿಶೀಲನ ಸಭೆ ನಡೆಸಿ ಅವರು ಮಾತನಾಡಿದರು. 25-30 ವರ್ಷಗಳಿಂದ ಅರಣ್ಯಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳು ಇತ್ಯರ್ಥ ಆಗದೆ ಉಳಿದಿದ್ದು, ಇದರಿಂದಾಗಿ ಬಡವರು ಸರಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. 3 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡವರಿಗೆ ತ್ವರಿತವಾಗಿ ನ್ಯಾಯ ಕೊಡಿಸುವಂತೆ ಮತ್ತು 1978ಕ್ಕೆ ಮುನ್ನ ಅರಣ್ಯದಲ್ಲಿದ್ದವರಿಗೆ ಅರಣ್ಯ ಹಕ್ಕು ಕೊಡಿಸಲು ಮುಂದಾಗಲಾಗುವುದು ಎಂದರು.
ಅರಣ್ಯ ಮತ್ತು ಸರಕಾರಿ ಭೂಮಿ ಒತ್ತುವರಿ ತಡೆಯಲು ತೀರುವಳಿ ಭೂಮಿಯಲ್ಲಿ ಮರಗಳನ್ನು ಬೆಳೆಸಲು ಮತ್ತು ಆದ್ಯತೆ ಮೇಲೆ ಮೀಸಲು ಅರಣ್ಯ ಎಂದು ಘೋಷಿಸುವ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಪ್ರಸ್ತುತ ದಾವಣಗೆರೆ ವೃತ್ತದಲ್ಲಿರುವ 32 ಸಾವಿರ ಹೆಕ್ಟೇರ್ ಪರಿಭಾವಿತ ಅರಣ್ಯದಲ್ಲಿ ವಸತಿ ಪ್ರದೇಶ, ದೇವಸ್ಥಾನ, ಶ್ಮಶಾನಭೂಮಿ, ಅಂಗನವಾಡಿ, ಆಸ್ಪತ್ರೆ ಇತ್ಯಾದಿಗಳಿದ್ದರೆ, ಅವುಗಳನ್ನು ಕೈಬಿಡಲು ಮತ್ತು ಅದಕ್ಕೆ ಪರ್ಯಾಯವಾಗಿ ಭೂಮಿ ಗುರುತಿಸಿ ಸುಪ್ರೀಂಕೋರ್ಟ್ ಗೆ ಮಧ್ಯಂತರ ವರದಿ ಸಲ್ಲಿಸಲು ಮತ್ತು ಕೇಂದ್ರ ಸರಕಾರಕ್ಕೆ ಈ ಬಗ್ಗೆ ಪ್ರಸ್ತಾವನೆ ಕಳುಹಿಸಲು ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.