1 ಲಕ್ಷ ಸರ್ಕಾರಿ ನೌಕರರ ನೇಮಕಕ್ಕೆ ಕ್ರಮ; ಶಿಕ್ಷಣ ಇಲಾಖೆಗೆ ಹೆಚ್ಚಿನ ಆದ್ಯತೆ
ಮೊದಲ ಬಾರಿಗೆ 14,762 ಕೋಟಿ ರೂ. ಗಳ ಪೂರಕ ಅಂದಾಜು ಮಂಡನೆ ಮಾಡಲಾಗಿತ್ತು.
Team Udayavani, Dec 30, 2022, 3:48 PM IST
ಸುವರ್ಣವಿಧಾನಸೌಧ: ರಾಜ್ಯದಲ್ಲಿ ಸುಮಾರು 1 ಲಕ್ಷ ಸರ್ಕಾರಿ ನೌಕರರ ನೇಮಕಕ್ಕೆ ತೀರ್ಮಾನಿಸಲಾಗಿದ್ದು, ಶಿಕ್ಷಣ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪರಿಷತ್‌ನಲ್ಲಿ ಗುರುವಾರ ಕರ್ನಾಟಕ ಧನ ವಿನಿಯೋಗ ವಿಧೇಯಕ (ಪೂರಕ ಅಂದಾಜು) ಮಂಡನೆ ಮಾಡಿ ಮಾತನಾಡಿದ ಅವರು, ವೇತನಕ್ಕೆ ತಕ್ಕ ರೀತಿಯ ಕೆಲಸ ನಿಗದಿ ಹಾಗೂ ಮೌಲ್ಯಾಂಕನಕ್ಕೆ ಒತ್ತು ನೀಡಲಾಗುವುದು. ಐದು ವರ್ಷದ ಯೋಜನೆ ಇದಾಗಿದ್ದು, ಈ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡುವುದಾಗಿ ತಿಳಿಸಿದರು.
ಕೆಲಸದ ಅವಧಿಯನ್ನೂ ಹೆಚ್ಚಿಸುವ ಚಿಂತನೆ ಇದೆ. ಶಿಕ್ಷಕರು, ಉಪನ್ಯಾಸಕರು ಪಡೆಯುವ ವೇತನಕ್ಕೆ ತಕ್ಕ ರೀತಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಮೌಲ್ಯಾಂಕನ ಮಾಡಲು ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಶಿಕ್ಷಕರ ನಿಯೋಜನೆ ಮಾಡಲಾಗುವುದು ಎಂದರು.ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಈಗಾಗಲೇ 15 ಸಾವಿರ ಶಿಕ್ಷಕರ ನೇಮಕ ಕೈಗೊಳ್ಳಲಾಗಿತ್ತು.
ಕೆಲವರು ಕೋರ್ಟ್‌ಗೆ ಹೋಗಿದ್ದರಿಂದ ತಡೆಯಾಗಿದೆ. ಇದಲ್ಲದೆ ಇನ್ನೂ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ವಿಶ್ವವಿದ್ಯಾಲಯ ಉಪನ್ಯಾಸರ ನೇಮಕಕ್ಕೆ ಅನುಮತಿ ನೀಡಿದ್ದೇನೆ. ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡಲಾಗಿದೆ ಎಂದರು.
ಧನ ವಿನಿಯೋಗ ವಿಧೇಯಕ ಅಂಗೀಕಾರ: ಕರ್ನಾಟಕ ಧನ ವಿನಿಯೋಗ ವಿಧೇಯಕಕ್ಕೆ ವಿಧಾನಪರಿಷತ್‌ನಲ್ಲಿ ಅಂಗೀಕಾರ ನೀಡಲಾಯಿತು. ಸಿಎಂ ಬೊಮ್ಮಾಯಿ ಅವರು ವಿಧೇಯಕ ಮಂಡಿಸಿದರು. ಅಂದಾಜು 2,71,542 ಕೋಟಿ ರೂ.ಗಳ ಬಜೆಟ್ ಗಾತ್ರ ಇದ್ದು, ಮೊದಲ ಬಾರಿಗೆ 14,762 ಕೋಟಿ ರೂ. ಗಳ ಪೂರಕ ಅಂದಾಜು ಮಂಡನೆ ಮಾಡಲಾಗಿತ್ತು.
ಇದೀಗ 8001.13 ಕೋಟಿ ರೂ.ಗಳ ಪೂರಕ ಅಂದಾಜು ಮಂಡನೆ ಮಾಡುತ್ತಿದ್ದು, ವಿವಿಧ ಆಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳ ಉದ್ದೇಶದೊಂದಿಗೆ ಇದನ್ನು ಕೈಗೊಳ್ಳುತ್ತಿದ್ದೇನೆ. ಒಟ್ಟು ಬಜೆಟ್ ಗಾತ್ರಕ್ಕೆ ಹೋಲಿಸಿದರೆ ಎರಡು ಪೂರಕ ಅಂದಾಜುಗಳ ಪ್ರಮಾಣ ಶೇ.8.38ರಷ್ಟು ಮಾತ್ರ ಆಗಿದೆ ಎಂದು ಹೇಳಿದರು.
ಶೀಘ್ರ ಶಾಸಕರ ಸಭೆ
ಅಂಬೇಡ್ಕರ್, ಪರಿಶಿಷ್ಟ ಪಂಗಡ ಸೇರಿ ಬಹುತೇಕ ಎಲ್ಲಾ ನಿಗಮಗಳಲ್ಲಿ ಅನುದಾನದ ಕೊರತೆ ಇಲ್ಲ. ಬಜೆಟ್‌ನಲ್ಲಿ ಮೀಸಲಿಟ್ಟ ಹಣದ ಜತೆಗೆ 800 ಕೋಟಿ ರೂ. ನೀಡಿದ್ದೇನೆ. ಶೀಘ್ರವೇ ಶಾಸಕರ ಸಭೆ ಕರೆದು ನಿಗಮದಲ್ಲಿ ಉಳಿದಿರುವ ಕಡತಗಳನ್ನು ವಿಲೇ ಮಾಡಲು ಸೂಚಿಸಲಾಗುವುದು. ಹೆಚ್ಚಿನ ಅನುದಾನ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಪೂರಕ ಅಂದಾಜಿನ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಲೋಕೋಪಯೋಗಿ, ಸಣ್ಣ ನೀರಾವರಿ, ಕಂದಾಯ ಇಲಾಖೆ, ವಸತಿ ಇಲಾಖೆಗೆ ಹೆಚ್ಚಿನ ಅನುದಾನವನ್ನು ವಿಪಕ್ಷಗಳ ಶಾಸಕರು ಕೇಳಿದ್ದು, 3ನೇ ಕಂತಿನ ಪೂರಕ ಅಂದಾಜಿನಲ್ಲಿ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.