ಪ್ರಾಧಿಕಾರ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಕ್ರಮ : ಸಚಿವ ಸುನಿಲ್ ಕುಮಾರ್
ನಾಲ್ಕು ಉಪ ವಿಭಾಗಕ್ಕೆ ನಾಲ್ಕು ಜಂಟಿ ನಿರ್ದೇಶಕರ ನೇಮಕ
Team Udayavani, Aug 19, 2021, 6:13 PM IST
ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಬಲವರ್ಧನೆಗೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಜೊತೆಗೆ ಅವು ಹೊಸ ದೃಷ್ಟಿಕೋನದಿಂದ ಕಾರ್ಯಕ್ರಮ ರೂಪಿಸಿ ಜಾರಿಗೆ ತರುವ ಮೂಲಕ ಸಂಸ್ಕೃತಿ ಕಟ್ಟುವ ಕೆಲಸಕ್ಕೆ ತೊಡಗಲು ಬೇಕಾದ ಎಲ್ಲಾ ಸಹಕಾರ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಇಂದು (ಗುರುವಾರ, ಆಗಸ್ಟ್ 19) ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಅಧ್ಯಕ್ಷರು ಹಾಗೂ ರಂಗಾಯಣ ನಿರ್ದೇಶಕರು ಗಳೊಂದಿಗೆ ವಿಕಾಸ ಸೌಧದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಪ್ರಾಧಿಕಾರ,ಅಕಾಡೆಮಿ ಮತ್ತು ರಂಗಾಯಣಗಳ ಹಾಗೂ ಸಂಸ್ಕೃತಿ ಇಲಾಖೆಯ ಮಧ್ಯೆ ಸುಗಮ ಸಮನ್ವಯ ಕಾರ್ಯ ನಿರ್ವಹಣೆ ಗಾಗಿ ರಾಜ್ಯದ ನಾಲ್ಕು ಉಪವಿಭಾಗ ಗಳಲ್ಲೀ ನಾಲ್ಕು ಜಂಟಿ ನಿರ್ದೇಶಕರ ನೇಮಕ ಮಾಡಲಾಗುವುದು ಇದರಿಂದ ಅಧಿಕಾರ ವಿಕೇಂದ್ರೀಕರಣ ವಾಗಿ ಆಡಳಿತ ಸುಧಾರಣೆಆಗುತ್ತದೆ, ಈ ಕುರಿತು ಆದೇಶ ಹೊರಡಿಸಲು ಈಗಾಗಲೇ ನಿರ್ದೇಶನ ನೀಡುತ್ತಿದ್ದೇನೆ ಎಂದರು.
ಇದನ್ನೂ ಓದಿ : ಪ್ರಧಾನಿಯವರ ಜನಪ್ರಿಯತೆಗೆ ಸರಿಸಮಾನರಾದ ನಾಯಕರೇ ವಿರೋಧ ಪಕ್ಷದಲ್ಲಿಲ್ಲ: ಸಚಿವ ಆರ್ ಅಶೋಕ್
ಸ್ವಾತಂತ್ರದ ಅಮೃತ ಮಹೋತ್ಸವ ಆಚರಣೆಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಜೊತೆಗೂಡಿ ದೊಡ್ಡಮಟ್ಟದಲ್ಲಿ ಕಾರ್ಯಕ್ರಮ ರೂಪಿಸಿ ಅದನ್ನೊಂದು ಅಭಿಯಾನ ಮಾಡುವ ಚಿಂತನೆ ನಡೆದಿದೆ ಅದಕ್ಕೆಪೂರಕ ವಾಗುವಂತೆ ಎಲ್ಲಾ ಅಕಾಡೆಮಿ ಮತ್ತು ಪ್ರಾಧಿಕಾರಗಳು ಕಾರ್ಯಕ್ರಮ ರೂಪಿಸಬೇಕು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದರು.
ಮುಂದಿನ ನೂರು ದಿನಗಳಿಗೆ ಕಾರ್ಯಯೋಜನೆ ರೂಪಿಸಲು ಅವರು ಸೂಚಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗಾಭರಣ ,ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ನಂದೀಶ್ ಹಂಚೆ ಸೇರಿದಂತೆ ಎಲ್ಲ ಪ್ರಾಧಿಕಾರ ಮತ್ತು ಅಕಾಡೆಮಿಗಳ ಅಧ್ಯಕ್ಷರು, ಇಲಾಖೆ ಕಾರ್ಯದರ್ಶಿ ರವಿಶಂಕರ್ ಮತ್ತು ನಿರ್ದೇಶಕ ಎಸ್ ರಂಗಪ್ಪ ಹಾಜರಿದ್ದರು .
ಇದನ್ನೂ ಓದಿ : ಅಫ್ಘಾನಿಸ್ಥಾನದಿಂದ ಏರ್‌ಲಿಫ್ಟ್ ತಾಯ್ನಾಡಿಗೆ ಮರಳಿದ ಉಳ್ಳಾಲದ ಮೆಲ್ವಿನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.