High Court: ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕ್ರಮ ಕೈಗೊಳ್ಳಲಿ; ಹೈಕೋರ್ಟ್
Team Udayavani, Mar 21, 2024, 8:51 PM IST
ಬೆಂಗಳೂರು: ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದುಕೊಂಡವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ನಾಯಕ ಜನಾಂಗದ ಪರಿವಾರ ಮತ್ತು ತಳವಾರ ಉಪಪಂಗಡಗಳನ್ನು ಮಾತ್ರ ಎಸ್‌ಸಿ ವರ್ಗಕ್ಕೆ ಸೇರಿಸಿದ್ದರೂ ಇತರೆ ಉಪಪಂಗಡದವರಿಗೂ ಪ.ಜಾತಿಯ ನಕಲಿ ಪ್ರಮಾಣಪತ್ರ ವಿತರಿಸಲಾಗುತ್ತಿದೆ ಎಂದು ಆರೋಪಿಸಿ ಯಾದಗಿರಿಯ ರಾಜ್ಯ ಎಸ್‌ಸಿ-ಎಸ್ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಅರ್ಜಿದಾರರು ಅತ್ಯಂತ ಗಂಭೀರ ವಿಚಾರ ಪ್ರಸ್ತಾಪಿಸಿದ್ದಾರೆ. ಅರ್ಜಿಯಲ್ಲಿ ಉಲ್ಲೇಖೀಸಿರುವ 60 ನಕಲಿ ಜಾತಿ ಪ್ರಮಾಣಪತ್ರ ಪಡೆದವರನ್ನು ಸೇರಿಸಿಕೊಂಡು ಈ ರೀತಿ ನಕಲಿ ಅಥವಾ ಅನರ್ಹ ಜಾತಿ ಪ್ರಮಾಣಪತ್ರಗಳನ್ನು ಪಡೆದುಕೊಂಡವರಿಗೆ ವಾರದೊಳಗೆ ನೋಟಿಸ್ ನೀಡಬೇಕು, ಶೀಘ್ರ ಅವರ ವಿರುದ್ಧ ಕಾನೂನು ರೀತಿ ಕ್ರಮ ಜರಗಿಸಬೇಕು. ಅದಕ್ಕೂ ಮೊದಲು ನಕಲಿ ಜಾತಿ ಪ್ರಮಾಣ ಪತ್ರ ಪಡೆದವರಿಗೆ ಅಹವಾಲು ಹೇಳಲು ಅವಕಾಶ ನೀಡಬೇಕು ಎಂದು ಸರ್ಕಾರದ ವಿಶೇಷ ವಕೀಲರಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಏಪ್ರಿಲ್ 4ಕ್ಕೆ ಮುಂದೂಡಿತು.
ಈ ವೇಳೆ ನಕಲಿ ಜಾತಿ ಪ್ರಮಾಣಪತ್ರ ಪಡೆದುಕೊಂಡರೆ ಅಥವಾ ವಿತರಿಸಿದರೆ ಅದನ್ನು ತಡೆಯುವುದು ಯಾರ ಕೆಲಸ? ಸರ್ಕಾರದ ಪಾತ್ರವೇನು ಎಂದು ನ್ಯಾಯಾಲಯ ಪ್ರಶ್ನಿಸಿತು. ಜಾತಿ ಪ್ರಮಾಣಪತ್ರ ರದ್ದುಗೊಂಡರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದು ಸರ್ಕಾರದ ಪರ ವಕೀಲರು ತಿಳಿಸಿದರು. ನಕಲಿ ಅಥವಾ ಅನರ್ಹ ಜಾತಿ ಪ್ರಮಾಣಪತ್ರ ರದ್ದುಪಡಿಸುವ ಅಧಿಕಾರ ಯಾರಿಗಿದೆ ಎಂದು ನ್ಯಾಯಾಲಯ ಮರು ಪ್ರಶ್ನಿಸಿತು. ಜಿಲ್ಲಾಧಿಕಾರಿಗಳಿಗೆ ಅಧಿಕಾರವಿದೆ ಎಂದು ವಕೀಲರು ತಿಳಿಸಿದರು. ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಸರ್ಕಾರ ಏನು ಮಾಡುವುದಿಲ್ಲವೇ? ನಾಗರಿಕರ ರಕ್ಷಣೆಯ ಹೊಣೆ ಹೊತ್ತಿರುವ ಸರ್ಕಾರ ಮೂಕ ಪ್ರೇಕ್ಷಕವಾಗಿರುವುದು ಸರಿಯಲ್ಲ ಎಂದು ನ್ಯಾಯಪೀಠ ಹೇಳಿತು.
ಅದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಸರ್ಕಾರದ ವಿಶೇಷ ವಕೀಲ ಸಿ. ಜಗದೀಶ್, ನಕಲಿ ಅಥವಾ ಅನರ್ಹ ಜಾತಿ ಪ್ರಮಾಣಪತ್ರಗಳನ್ನು ವಿತರಿಸಬಾರದು ಎಂದು ಅಧಿಕಾರಿಗಳಿಗೆ ಸರ್ಕಾರದಿಂದ ಸ್ಪಷ್ಟ ಸೂಚನೆ ಇದೆ. ಆದಾಗ್ಯೂ ಕೆಲವು ಕಡೆ ನಕಲಿ ಜಾತಿ ಪ್ರಮಾಣಪತ್ರಗಳನ್ನು ವಿತರಿಸಲಾಗಿದೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ಕಾಲಾವಕಾಶ ಕೋರಿದರು.
ಅರ್ಜಿದಾರರು ಅತ್ಯಂತ ಗಂಭೀರ ವಿಚಾರ ಪ್ರಸ್ತಾಪಿಸಿದ್ದಾರೆ. ಅರ್ಜಿಯಲ್ಲಿ ಉಲ್ಲೇಖೀಸಿರುವ 60 ನಕಲಿ ಜಾತಿ ಪ್ರಮಾಣಪತ್ರ ಪಡೆದವರನ್ನು ಸೇರಿಸಿಕೊಂಡು ಈ ರೀತಿ ನಕಲಿ ಅಥವಾ ಅನರ್ಹ ಜಾತಿ ಪ್ರಮಾಣಪತ್ರಗಳನ್ನು ಪಡೆದುಕೊಂಡವರಿಗೆ ಒಂದು ವಾರದೊಳಗೆ ನೋಟಿಸ್ ನೀಡಬೇಕು, ಬಳಿಕ ಆದಷ್ಟು ಶೀಘ್ರ ಅವರ ವಿರುದ್ಧ ಕಾನೂನು ರೀತಿ ಕ್ರಮ ಜರಗಿಸಬೇಕು. ಅದಕ್ಕೂ ಮೊದಲು ನಕಲಿ ಜಾತಿ ಪ್ರಮಾಣ ಪತ್ರ ಪಡೆದವರಿಗೆ ಅಹವಾಲು ಹೇಳಲು ಅವಕಾಶ ನೀಡಬೇಕು ಎಂದು ಸರ್ಕಾರದ ವಿಶೇಷ ವಕೀಲರಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಏಪ್ರಿಲ್ 4ಕ್ಕೆ ಮುಂದೂಡಿತು.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್, ಸಂವಿಧಾನಕ್ಕೆ ತಿದ್ದುಪಡಿ ತಂದು ನಾಯಕ ಜನಾಂಗದ ಉಪಪಂಗಡಗಳಾದ ಪರಿವಾರ ಮತ್ತು ತಳವಾರವನ್ನು ಎಸ್‌ಸಿ ವರ್ಗಕ್ಕೆ ಸೇರ್ಪಡೆ ಮಾಡಲಾಗಿದೆ. ಆದರೆ ರಾಜ್ಯದಲ್ಲಿ ಅಧಿಕಾರಿಗಳು ಒಬಿಸಿಗೆ ಸೇರಿದ ಇತರೆ ಉಪಪಂಗಡದವರಿಗೂ ಎಸ್‌ಸಿ ಜಾತಿ ಪ್ರಮಾಣಪತ್ರಗಳನ್ನು ವಿತರಿಸುತ್ತಿದ್ದಾರೆ. ಆ ರೀತಿ 60ಕ್ಕೂ ಅಧಿಕ ನಕಲಿ ಜಾತಿ ಪ್ರಮಾಣಪತ್ರಗಳ ವಿವರಗಳನ್ನು ಅರ್ಜಿಯಲ್ಲಿ ಅಡಕ ಮಾಡಲಾಗಿದೆ. ಈ ರೀತಿ ನಕಲಿ ಜಾತಿ ಪ್ರಮಾಣಪತ್ರಗಳನ್ನು ಪಡೆದವರು ಶೈಕ್ಷಣಿಕ, ಔದ್ಯೋಗಿಕ ಲಾಭ ಪಡೆಯುವುದರ ಜೊತೆಗೆ ಚುನಾವಣೆಗಳಿಗೂ ಸ್ಪರ್ಧಿಸುತ್ತಿದ್ದಾರೆ. ಆ ಮೂಲಕ ಅರ್ಹ ಎಸ್‌ಟಿ ವರ್ಗಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದು ಸಾಮಾಜಿಕ ನ್ಯಾಯವನ್ನು ಬುಡಮೇಲು ಮಾಡುತ್ತಿದೆ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.