ಮೊಬೈಲ್ ನೆಟ್ ವರ್ಕ್ ಸಮಸ್ಯೆ ಪರಿಹಾರಕ್ಕೆ ಕ್ರಮ: ಸಚಿವ ಸುರೇಶ್ ಕುಮಾರ್
Team Udayavani, Jul 12, 2021, 1:33 PM IST
ಬೆಂಗಳೂರು: ಬದಲಾದ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಇಂಟರ್ನೆಟ್ ನೆಟ್-ವರ್ಕ್ ಸಮಸ್ಯೆಯನ್ನು ಪರಿಹರಿಸುವ ಸಂಬಂಧದಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರಾಜ್ಯದ ಮುಖ್ಯಕಾರ್ಯದರ್ಶಿಯವರ ಜೊತೆ ಸುದೀರ್ಘವಾಗಿ ಚರ್ಚಿಸಿದರು.
ಈಗಾಗಲೇ ಮಾಹಿತಿ ತಂತ್ರಜ್ಞಾನ ಸಚಿವರೂ ಆದ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಮತ್ತು ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ರಾಜ್ಯದಲ್ಲಿ ಮೊಬೈಲ್ ನೆಟ್-ವರ್ಕ್ ಪೂರೈಕೆದಾರ ಕಂಪನಿಗಳೊಂದಿಗೆ ಮಾಹಿತಿ ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿಯವರು ಚರ್ಚಿಸಿದ್ದು, ಅವರೆಲ್ಲಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಯವರು ಸಚಿವರ ಗಮನಕ್ಕೆ ತಂದಿದ್ದಾರೆ.
ಪ್ರಸ್ತುತ ಮಳೆಗಾಲವಾದ್ದರಿಂದ ರಾಜ್ಯದ ಮಲೆನಾಡು ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್-ವರ್ಕ್ ಸಮಸ್ಯೆಯಿಂದಾಗಿ ಮಕ್ಕಳ ಪರ್ಯಾಯ ಬೋಧನಾ ಕ್ರಮಗಳಾದ ಆನ್ಲೈನ್ ಬೋಧನಾ ಕ್ರಮ ಇಲ್ಲವೇ ದೂರದರ್ಶನ ಚಂದನ ಪಾಠಗಳಿಗೆ ತೊಂದರೆಯಾಗಿರುವುದರಿಂದ ಈ ಕುರಿತು ತ್ವರಿತವಾಗಿ ಗಮನ ಹರಿಸುವುದರ ಅಗತ್ಯವಿದ್ದು, ಮಕ್ಕಳ ಬೋಧನಾ ವಿಧಾನದ ಗುಣಮಟ್ಟವನ್ನು ಕಾಪಾಡಬೇಕಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ:ಕೆಆರ್ ಎಸ್ ಡ್ಯಾಮ್ ವಿಚಾರ: ಸುಮಲತಾ ಪರವಾಗಿ ಬ್ಯಾಟ್ ಬೀಸಿದ ಸಿದ್ದರಾಮಯ್ಯ
ಕೋವಿಡ್ ಕಾಲಘಟ್ಟದಂತಹ ಪರಿಸ್ಥಿತಿಯಲ್ಲಿ ಭೌತಿಕ ಶಾಲಾ ತರಗತಿಗಳು ಆರಂಭವಾಗುತ್ತಿರುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಪರ್ಯಾಯ ಬೋಧನಾ ಕ್ರಮಗಳನ್ನೇ ಅವಲಂಬಿಸಬೇಕಾಗಿದೆ, ಎಲ್ಲ ಮಕ್ಕಳಿಗೂ ಉತ್ತಮ ಗುಣಮಟ್ಟದ ಬೋಧನೆ ದೊರಕಿಸಿಕೊಡುವ ನಿಟ್ಟಿನಲ್ಲಿ ನಾವು ಆನ್ಲೈನ್ ವ್ಯವಸ್ಥೆಯನ್ನೇ ನೆಚ್ಚಿಕೊಂಡಿರುವಂತಹ ಸಂದರ್ಭದಲ್ಲಿ ಮೊಬೈಲ್ ನೆಟ್-ವರ್ಕ್ ಬಲಪಡಿಸುವುದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೂ ಎಲ್ಲರಂತೆ ಶಿಕ್ಷಣ ದೊರೆತು ಕಲಿಕಾ ನಿರಂತರತೆಯಲ್ಲಿ ಅವರನ್ನು ತೊಡಗಿಸಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿಯವರೂ ಸಹ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಯುದ್ಧೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿ ಪಾಠ ವ್ಯವಸ್ಥೆ: ಆನ್ಲೈನ್ನಂತಹ ಪರ್ಯಾಯ ವ್ಯವಸ್ಥೆಯ ಮೂಲಕವೇ ಪ್ರಸ್ತುತ ಪರಿಸ್ಥಿತಿಯಲ್ಲಿ ಮಕ್ಕಳನ್ನು ತಲುಪಬೇಕಾಗಿರುವ ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿಯೂ ಈ ಸೌಲಭ್ಯ ವಂಚಿತ ಮಕ್ಕಳಿಗೆ ಶಿಕ್ಷಣ ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಈ ಸಂಬಂಧದಲ್ಲಿ ಸೋಮವಾರ ಮುಖ್ಯಮಂತ್ರಿಗಳ ಸಲಹೆಗಾರರಾದ ಪ್ರಶಾಂತ್ ಪ್ರಕಾಶ್ ಮತ್ತು ರಾಜ್ಯ ಸರ್ಕಾರದ ಶೈಕ್ಷಣಿಕ ಸಲಹೆಗಾರರಾದ ಪ್ರೊ. ದೊರೆಸ್ವಾಮಿಯವರೊದಿಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಚರ್ಚಿಸಿದ ಸಚಿವರು, ರಾಜ್ಯದಲ್ಲಿರುವ 5766 ಗ್ರಾಮಪಂಚಾಯ್ತಿ ಗ್ರಂಥಾಲಯಗಳನ್ನು ಬಳಸಿಕೊಂಡು ಅಲ್ಲಿ ಡಿವೈಸರ್ ಅಳವಡಿಸುವ ಮೂಲಕ ದೂರದರ್ಶನ ಇಲ್ಲವೇ ಮೊಬೈಲ್ ವಂಚಿತ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಚರ್ಚಾ ಪ್ರಕ್ರಿಯೆಗಳು ಚಾಲನೆಯಲ್ಲಿವೆ ಎಂದು ತಿಳಿಸಿದ್ದಾರೆ.
ಶಾಲೆಗಳಲ್ಲಿನ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಉತ್ತಮಗೊಳಿಸುವುದು ಸೇರಿದಂತೆ ಪರಿಣಾಮಕಾರಿ ಶಿಕ್ಷಣ ವ್ಯವಸ್ಥೆ ರೂಪಿಸುವ ಕುರಿತಂತೆ ಎಸ್ ಎಸ್ ಎಲ್ ಸಿ ಪರೀಕ್ಷಾವಧಿ ಮುಗಿದ ಕೂಡಲೇ ಆರ್.ಡಿ.ಪಿ.ಆರ್. ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಶಿಕ್ಷಣ ಇಲಾಖೆಯ ಟಾಸ್ಕ್ಫೋರ್ಸ್ ಈ ಎಲ್ಲ ಅಂಶಗಳನ್ನು ಅವಲೋಕಿಸಿ ಪ್ರಾಯೋಗಿಕ ಕ್ರಮಗಳ ಕುರಿತಂತೆ ಕ್ರಿಯಾಯೋಜನೆ ರೂಪಿಸಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.