Farmer ಉತ್ಪಾದಕ ಕಂಪೆನಿಗಳ ಉತ್ತೇಜನಕ್ಕೆ ಕ್ರಮ: ಸಚಿವ ಸುಧಾಕರ್
Team Udayavani, Dec 16, 2023, 12:14 AM IST
ಬೆಳಗಾವಿ: ರಾಜ್ಯದಲ್ಲಿ ಸುಮಾರು 1,262 ರೈತ ಉತ್ಪಾದಕ ಕಂಪೆನಿ ಗ ಳಿ ದ್ದು ಇವುಗಳ ನಿರ್ವಹಣೆಗೆ 2 ಕೋಟಿ ರೂ.ನೀಡಲಾಗಿದೆ. ಎಫ್‌ಪಿಒಗಳ ಉತ್ತೇಜನಕ್ಕೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ.ಸುಧಾಕರ್ ಹೇಳಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಸುನೀಲ್ ಕುಮಾರ್ ಅವರ ಪ್ರಶ್ನೆಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಪರವಾಗಿ ಉತ್ತರಿಸಿದ ಸಚಿವ ಡಾ| ಎಂ.ಸಿ.ಸುಧಾಕರ್, ಎಫ್‌ಪಿಒಗಳು ಸುಮಾರು 881.52 ಕೋಟಿ ರೂ.ಗಳ ವಹಿವಾಟು ನಡೆಸಿವೆ. ಕೇಂದ್ರದ ಅಮೃತ ಯೋಜನೆ ಅಡಿಯಲ್ಲಿ 6 ಕೋಟಿ ರೂ. ಅನುದಾನ ರಾಜ್ಯಕ್ಕೆ ಬಂದಿದೆ. ಸದಸ್ಯರ ಬೇಡಿಕೆಯಂತೆ ಎಫ್‌ಪಿಒಗಳಿಗೆ ನೀಡುವ ಆರ್ಥಿಕ ನೆರವಿನ ಸೌಲಭ್ಯ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
9 ಜಿಲ್ಲೆಗಳ ಗಣಿ ಪ್ರದೇಶದಲ್ಲಿ ಡ್ರೋನ್ ಸಮೀಕ್ಷೆ
ರಾಜ್ಯದಲ್ಲಿನ ಗಣಿ ಪ್ರದೇಶಗಳಲ್ಲಿ ನಿಯಮ ಉಲ್ಲಂಘನೆ ಬಗ್ಗೆ ಪರಿಶೀಲನೆಗೆ ರಾಜ್ಯದ 9 ಜಿಲ್ಲೆಗಳಲ್ಲಿ ಡ್ರೋನ್ ಸಮೀಕ್ಷೆ ಕೈಗೊಳ್ಳಲಾಗಿದ್ದು, ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ| ಎಂ.ಸಿ.ಸುಧಾ ಕ ರ ಹೇಳಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಬಸನಗೌಡ ದದ್ದಲ ಪ್ರಶ್ನೆಗೆ ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಪರವಾಗಿ ಸಚಿವ ಸುಧಾಕರ್ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.