Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
ಪ್ರಧಾನಿ ಮೋದಿ ಹೇಳಿದ್ದಕ್ಕೆ ಕ್ಷೇತ್ರ ತ್ಯಾಗ
Team Udayavani, Nov 9, 2024, 7:35 AM IST
ಮಂಡ್ಯ: ನಾನು ಬಿಜೆಪಿಯಲ್ಲಿ ಸೈಡ್‌ಲೈನ್ ಆಗಿಲ್ಲ. ಐದು ವರ್ಷಗಳಲ್ಲಿ ಸಾಕಷ್ಟು ಹಳ್ಳಿಗಳಿಗೆ ಹೋಗಿದ್ದೆ. ಆದ್ದರಿಂದ ಸ್ವಲ್ಪ ವಿಶ್ರಾಂತಿ ಪಡೆಯುತ್ತಿದ್ದೇನೆ. ನರೇಂದ್ರ ಮೋದಿ ಅವರ ಮಾತಿಗೆ ಬೆಲೆಕೊಟ್ಟು ಕ್ಷೇತ್ರ ತ್ಯಾಗ ಮಾಡಿದೆ. ನಾನೆಂದೂ ಮಂಡ್ಯ ಕ್ಷೇತ್ರವನ್ನು ಬಿಡುವುದಿಲ್ಲ. ಜನವರಿಯಿಂದ ಸಕ್ರಿಯವಾಗಿ ಮಂಡ್ಯದಲ್ಲಿ ಓಡಾಡುತ್ತೇನೆ ಎಂದು ಮಾಜಿ ಸಂಸದೆ ಸುಮಲತಾ ಹೇಳಿದರು.
ಮಂಡ್ಯದ ಚಾಮುಂಡೇಶ್ವರಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ನನ್ನನ್ನು ಚುನಾವಣೆ ಪ್ರಚಾರಕ್ಕೆ ಕರೆಯದೇ ಇರುವ ಬಗ್ಗೆ ಅಷ್ಟಾಗಿ ನಾನು ಗಮನ ಕೊಟ್ಟಿಲ್ಲ. ನನ್ನ ಅಗತ್ಯ ಎಲ್ಲಿದೆ ಅನಿಸುತ್ತದೆಯೋ ಅಲ್ಲಿಗೆ ಕರೆಯುತ್ತಾರೆ ಎಂದು ಸ್ಪಷ್ಟಪಡಿಸಿದರು.
ಮೈತ್ರಿ ಅಭ್ಯರ್ಥಿ ಇರುವುದರಿಂದ ಕರೆದಿಲ್ಲ
ಕಳೆದ ಚುನಾವಣೆಯಲ್ಲಿ ಮಂಡ್ಯದಲ್ಲಿ ಯಾರೂ ಇಂತಹ ಡೇಟ್‌ನಲ್ಲಿ ಪ್ರಚಾರಕ್ಕೆ ಬರಬೇಕು ಅಂತಾ ಹೇಳಲಿಲ್ಲ. ನಾನು ಇದನ್ನು ದೊಡ್ಡ ವಿಷಯ ಅಂದುಕೊಂಡಿಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಇದ್ದಿದ್ದರೆ ನನ್ನನ್ನ ಕರೆಯುತ್ತಿದ್ದರು ಅನಿಸುತ್ತಿದೆ. ಆದರೆ ಮೈತ್ರಿ ಅಭ್ಯರ್ಥಿ ಇರುವುದರಿಂದ ಮಂಡ್ಯ ಲೋಕಸಭಾ ಚುನಾವಣೆ ನೋಡಿ ಕರೆದಿಲ್ಲ. ನಮಗೆ ಜೆಡಿಎಸ್ ನವರ ಮೇಲೆ ದ್ವೇಷವಿಲ್ಲ. ಹಳೆಯ ಕಥೆ ಮುಗಿದಿದೆ. ಈಗಾಗಲೇ ಹೈಕಮಾಂಡ್‌ಗೆ ಈ ಬಗ್ಗೆ ಹೇಳಿದ್ದೇನೆ ಎಂದರು.
ಸಕ್ರಿಯ ಪಕ್ಷ ಸಂಘಟನೆಗೆ ಒತ್ತು
ಮಂಡ್ಯದಲ್ಲಿ ಪಕ್ಷವನ್ನು ಬಲಪಡಿಸಬೇಕಿದ್ದು ಜಿಲ್ಲೆಯಲ್ಲಿ ಸಕ್ರಿಯವಾಗಿ ಪಕ್ಷ ಸಂಘಟಿಸುತ್ತೇನೆ. ನಾನು ನಿರೀಕ್ಷೆ ಇಟ್ಟುಕೊಂಡು ಕೆಲಸ ಮಾಡಿಲ್ಲ. ಬೆಂಬಲಿಗರು ಆಸೆ ಪಡುವುದರಲ್ಲಿ ತಪ್ಪಿಲ್ಲ, ನನ್ನ ರಾಜಕಾರಣ ಮಂಡ್ಯದಲ್ಲಿ ಇರುತ್ತದೆ. ಮಂಡ್ಯದಲ್ಲಿ ಬಿಜೆಪಿ ಸಂಘಟನೆ ಹಿಂದಿದ್ದು, ಈ ಬಗ್ಗೆ ಹೈಕಮಾಂಡ್‌ಗೆ ತಿಳಿಸಿದ್ದೇನೆ. ಮೈತ್ರಿ ಇದ್ದಾಗ ಪಕ್ಷ ಸಂಘಟನೆ ಸವಾಲಾಗಿರುತ್ತದೆ. ಜೆಡಿಎಸ್ ಮಂಡ್ಯದಲ್ಲಿ ಬಲಿಷ್ಠವಾಗಿದೆ, ಬಿಜೆಪಿಗೆ ಅಷ್ಟಾಗಿ ಇಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಸಮರ್ಥವಾಗಿ ಕಟ್ಟುವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Simple Life: ಬದುಕು ನಿರಾಡಂಬರವಾಗಿರಲಿ
Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ
BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Udupi: ಇಲ್ಲಿ ಹೊಂಡಗಳೇ ಸ್ಪೀಡ್ ಬ್ರೇಕರ್‌ಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.