ನಟ ಚಂದನ್ ಅಗಲುವಿಕೆ;ಪುತ್ರನನ್ನು ಕೊಂದು ಪತ್ನಿ ಆತ್ಮಹತ್ಯೆ
Team Udayavani, May 31, 2018, 12:12 PM IST
ದೊಡ್ಡಬಳ್ಳಾಪುರ : ಕಿರುತೆರೆ ನಿರೂಪಕ ಹಾಗೂ ನಟ ಚಂದನ್ (ಚಂದ್ರಶೇಖರ್) ಅವರ ಅಕಾಲಿಕ ಮರಣದಿಂದ ತೀವ್ರವಾಗಿ ನೊಂದಿದ್ದ ಪತ್ನಿ ಮೀನಾ ಕತ್ತು ಕೊಯ್ದು ಪುತ್ರನನ್ನು ಹತ್ಯೆಗೈದು ಬಳಿಕ ತಾನು ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಗುರುವಾರ ನಡೆದಿದೆ.
ಮೇ 24 ರಂದು ದಾವಣಗೆರೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ಚಂದನ್ ಮೃತಪಟ್ಟಿದ್ದರು.
ಪತಿಯ ಅಗಲುವಿಕೆಯ ನೋವಿನಲ್ಲಿದ್ದ ಮೀನಾ(38) ಇಂದು ಬೆಳಗ್ಗೆ ಏಕಾಏಕಿ 13 ವರ್ಷದ ಪುತ್ರ ತುಷಾರ್‌ನನ್ನು ಕತ್ತು ಕೊಯ್ದು ಹತ್ಯೆಗೈದು ಬಳಿಕ ತಾನು ಆ್ಯಸಿಡ್ ಸೇವಿಸಿದ್ದಾರೆ. ಪುತ್ರ ಸಾವನ್ನಪ್ಪಿದ್ದು, ಮೀನಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ತರಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸಂಜೆ ಕೊನೆಯುಸಿರೆಳೆದಿದ್ದಾರೆ.
ಕಾರ್ಯಕ್ರಮವೊಂದಕ್ಕೆ ಕಾರಿನಲ್ಲಿ ನಾಲ್ವರು ಬೆಂಗಳೂರು ಕಡೆಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದಾಗ ದಾವಣಗೆರೆ ಸಮೀಪದ ಹನಗವಾಡಿ ಗ್ರಾಮದ ಹೆದ್ದಾರಿ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಚಂದನ್ ಸೇರಿದಂತೆ ಇಬ್ಬರು ಮೃತಪಟ್ಟು, ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.