ಐಟಿ ವಿಚಾರಣೆಗೆ ನಟ ಸುದೀಪ್ ಹಾಜರು
Team Udayavani, Jan 15, 2019, 6:28 AM IST
ಬೆಂಗಳೂರು: ಐಟಿ ದಾಳಿ ಪ್ರಕರಣ ಸಂಬಂಧ ಸೋಮವಾರ ನಟ ಸುದೀಪ್ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಆದಾಯ ತೆರಿಗೆ ಇಲಾಖೆ ಕಚೇರಿಗೆ ಆಗಮಿಸಿದ ಸುದೀಪ್ ಅವರನ್ನು ಮಧ್ಯಾಹ್ನ 1 ಗಂಟೆವರೆಗೂ ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದರು. ದಾಳಿ ಸಂದರ್ಭದಲ್ಲಿ ಅವರ ಮನೆಯಲ್ಲಿ ಪತ್ತೆಯಾದ ಆಸ್ತಿ-ಪಾಸ್ತಿಗೆ ಸಂಬಂಧಿಸಿದ ದಾಖಲೆಗಳ ಕುರಿತು ಕೆಲ ಪ್ರಶ್ನೆಗಳನ್ನು ಕೇಳಲಾಗಿತ್ತು. ಎಲ್ಲದಕ್ಕೂ ಸುದೀಪ್ ಉತ್ತರ ನೀಡಿದ್ದಾರೆಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ವಿಚಾರಣೆ ಮುಗಿಸಿ ಹೊರ ಬಂದು ಪ್ರತಿಕ್ರಿಯೆ ನೀಡಿದ ಸುದೀಪ್, ಕೆಲವೊಂದು ತಪ್ಪುಗಳು ನಡೆದಿರಬಹುದು. ದಾಳಿ ಸಂದರ್ಭದಲ್ಲಿ ಪಡೆದ ಹೇಳಿಕೆಯನ್ನು ಮತ್ತೂಮ್ಮೆ ದೃಢೀಕರಿಸಿಕೊಳ್ಳಲು ಆಹ್ವಾನ ನೀಡಿದ್ದರು. ಎಲ್ಲದಕ್ಕೂ ಉತ್ತರ ನೀಡಿದ್ದೇನೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.