ದತ್ತು ಪರಿಕಲ್ಪನೆ ದೇಶಕ್ಕೆ ಪ್ರೇರಣೆ: ಯಡಿಯೂರಪ್ಪ
ಜನಪ್ರತಿನಿಧಿ, ಸಂಸ್ಥೆಗಳಿಂದ ಸರಕಾರಿ ಶಾಲೆಗಳ ದತ್ತು ಸ್ವೀಕಾರ
Team Udayavani, Nov 25, 2020, 1:41 AM IST
ಬೆಂಗಳೂರು: ಸರಕಾರಿ ಶಾಲೆಗಳನ್ನು ಜನಪ್ರತಿನಿಧಿಗಳ ಸಹಿತ ಸಮಾಜದ ವಿವಿಧ ಸಂಘ- ಸಂಸ್ಥೆಗಳು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸುವ ಪರಿಕಲ್ಪನೆ ದೇಶದಲ್ಲೇ ಮೊದಲನೆಯದಾಗಿದ್ದು, ಇದು ಉಳಿದವರಿಗೂ ಪ್ರೇರಣೆ ಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು.
ಮಂಗಳವಾರ ವಿಧಾನಸೌಧದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸರಕಾರಿ ಶಾಲೆಗಳ ದತ್ತು ಸ್ವೀಕಾರ ಸಮಾರಂಭದಲ್ಲಿ ದತ್ತು ಸ್ವೀಕರಿಸಿದ ಸಂಸ್ಥೆಗಳಿಗೆ ಶಾಲಾ ದತ್ತು ಪತ್ರಗಳನ್ನು ವಿತರಿಸಿ, ಶಿಕ್ಷಣ ಸುಧಾರಣ ಶಿಫಾರಸುಗಳ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.
ಇದೊಂದು ವಿಶಿಷ್ಟವಾದ ಕಲ್ಪನೆ ಯಾಗಿದ್ದು ಸರಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಯಾಗಲಿದೆ. ಶಾಸಕರು ಕನಿಷ್ಠ ಮೂರು ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸುವುದು ಸಹಿತ ರಾಜ್ಯದ 34ಕ್ಕೂ ಹೆಚ್ಚು ಸರಕಾರಿ ಹಾಗೂ ಖಾಸಗಿ ವಿಶ್ವವಿದ್ಯಾನಿಲಯಗಳು, ಶಿಕ್ಷಣ ಸಂಸ್ಥೆಗಳು, ಮಾಧ್ಯಮ ಸಂಸ್ಥೆಗಳು ದತ್ತು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ನಿಜಕ್ಕೂ ಪ್ರಶಂಸನೀಯ ಎಂದರು.
ಸರಕಾರಿ ಶಾಲೆಗಳ ಅಭಿವೃದ್ಧಿ
ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ 53 ಸಾವಿರ ಸರಕಾರಿ ಶಾಲೆಗಳಿದ್ದು, ಶೇ. 85ಕ್ಕಿಂತ ಹೆಚ್ಚಿನ ಮಕ್ಕಳು ಸರಕಾರಿ ಶಾಲೆಗಳನ್ನೇ ಅವಲಂಬಿಸಿದ್ದಾರೆ. ಈ ದತ್ತು ಯೋಜನೆಯಿಂದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯೇ ಆಗಲಿದೆ ಎಂದರು.
ಸರಕಾರದ ಶೈಕ್ಷಣಿಕ ಸಲಹೆಗಾರ ಪ್ರೊ| ಎಂ.ಆರ್. ದೊರೆಸ್ವಾಮಿ ಮಾತನಾಡಿ, ರೈತರು, ಬಡವರ ಕುಟುಂಬದ
ಶೇ. 85ರಷ್ಟು ಮಕ್ಕಳು ಸರಕಾರಿ ಶಾಲೆಯಲ್ಲೇ ಓದುತ್ತಿದ್ದಾರೆ. ಜನಪ್ರತಿ ನಿಧಿಗಳಲ್ಲದೇ ಸಮುದಾಯವೂ ಪೂರ್ಣಪ್ರಮಾಣದಲ್ಲಿ ಭಾಗಿ ಯಾದರೆ, ಸರಕಾರಿ ಶಾಲೆಗಳು ಅಭಿವೃದ್ಧಿಯಾಗಲಿದೆ ಎಂದರು.
ವಿಶಿಷ್ಟ ಯೋಜನೆ: ಕಾರಜೋಳ
ಇಡೀ ಸಮುದಾಯ ಮತ್ತು ಜನಪ್ರತಿನಿಧಿಗಳು ತಮ್ಮ ಭಾಗದ ಸರಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸುವ ಪರಿಕಲ್ಪನೆಯ ಯೋಜನೆ ವಿಶಿಷ್ಟವಾಗಿದ್ದು, ಇದರಲ್ಲಿ ಹೆಚ್ಚಿನ ಸಂಖ್ಯೆಯ ಸಂಸ್ಥೆಗಳು ಭಾಗಿಯಾಗಿ ರಾಜ್ಯದ ಶಾಲೆಗಳು ಅಭಿವೃದ್ಧಿಯಾಗುವಂತಾಗಲಿ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.