ವಿವಿಗಳ ಬೋಧಕ ಹುದ್ದೆ ನೇಮಕಾತಿಗೆ ಸೂಚನೆ
Team Udayavani, Jun 8, 2019, 3:00 AM IST
ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇರ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ.
ವಿಶ್ವವಿದ್ಯಾಲಯಗಳು ನೀಡಿರುವ ಖಾಲಿ ಹುದ್ದೆಗಳ ಆಧಾರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಿದೆ. ನಂತರ ವಿಷಯವಾರು ಹಾಗೂ ವರ್ಗವಾರು 1:3ರಂತೆ ಕರಡು ಆಯ್ಕೆ ಪಟ್ಟಿಯನ್ನು ಮೆರಿಟ್ ಆಧಾರದ ಮೇಲೆ ತಯಾರಿಸಿದ ಪಟ್ಟಿಯನ್ನು ಆಯಾ ವಿಶ್ವವಿದ್ಯಾಲಯಕ್ಕೆ ಮುಂದಿನ ನೇಮಕಾತಿ ಪ್ರಕ್ರಿಯೆಗೆ ಸಲ್ಲಿಸಬೇಕೆಂದು ಸರ್ಕಾರ ನಿರ್ದೇಶಿಸಿದೆ.
ಸಂಬಂಧಪಟ್ಟ ವಿವಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪಡೆದ ಕರಡು ಆಯ್ಕೆ ಪಟ್ಟಿಯನ್ನು ಆಯ್ಕೆ ಮಂಡಳಿಗೆ ತಿಳಿಸಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಬೇಕು. ಸರ್ಕಾರ ಹಾಗೂ ಯುಜಿಸಿ ಮಾರ್ಗಸೂಚಿಯನ್ನು ಎಲ್ಲ ವಿವಿಗಳು ಕಡ್ಡಾಯವಾಗಿ ಪರಿಶೀಲನೆ ಮಾಡಬೇಕು. ನೇರ ನೇಮಕಾತಿ ಭರ್ತಿ ಮಾಡುವ ಸಂದರ್ಭದಲ್ಲಿ ಈಗಾಗಲೇ ರಚಿಸಿರುವ ಪರಿನಿಯಮಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ತಿಳಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.