Darshan: ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್
Team Udayavani, Dec 16, 2024, 2:21 PM IST
ಬೆಂಗಳೂರು: ಬೆನ್ನುನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟ ದರ್ಶನ್ (Darshan) ಒಂದುವರೆ ತಿಂಗಳ ಬಳಿಕ ವೈದ್ಯರಿಂದ ಅನುಮತಿ ಪಡೆದು ಆಸ್ಪತ್ರೆಯಿಂದ ಹೊರಬಂದು ಕೋರ್ಟ್‌ಗೆ ಹಾಜರಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ (Renukaswamya Case) ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್ ಅವರಿಗೆ ವಿಪರೀತ ಬೆನ್ನುನೋವು ಉಂಟಾದ ಕಾರಣ ಹೈಕೋರ್ಟ್ ಮೆಡಿಕಲ್ ಗ್ರೌಂಡ್ಸ್ ಮೇಲೆ ಮಧ್ಯಂತರ ಜಾಮೀನು ನೀಡಿತ್ತು. ಇದಾದ ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ದರ್ಶನ್ ಅವರಿಗೆ ಸರ್ಜರಿಯ ಅಗತ್ಯವಿತ್ತು. ಆದರೆ ಕೆಲ ಆರೋಗ್ಯ ಸಮಸ್ಯೆ ಇದ್ದ ಕಾರಣ ಅವರ ಸರ್ಜರಿಯನ್ನು ಮುಂದೂಡುತ್ತಾ ಬರಲಾಗಿತ್ತು. ದರ್ಶನ್ ಇದುವರೆಗೆ ಸರ್ಜರಿ ಮಾಡಿಸಿಲ್ಲ.
ಮೊನ್ನೆಯಷ್ಟೇ ಅವರಿಗೆ ಹೈಕೋರ್ಟ್ ಪೂರ್ಣ ಪ್ರಮಾಣದ ಜಾಮೀನು ನೀಡಿದೆ. ಜಾಮೀನು ಸಿಗುತ್ತಿದ್ದಂತೆಯೇ ʼದಾಸʼ ಸೋಮವಾರ (ಡಿ.16ರಂದು) ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಿಂದ ಸೆಷನ್ಸ್ ಕೋರ್ಟ್‌ಗೆ ತೆರಳಿದ ಅವರು ಶ್ಯೂರಿಟಿ ಬಾಂಡ್‌ಗೆ ಸಹಿ ಹಾಕಿದ್ದಾರೆ.
ಪತ್ನಿ ವಿಜಯಲಕ್ಷ್ಮೀ, ಧನ್ವೀರ್ ಜತೆ ಕಾರಿನಲ್ಲಿ ದರ್ಶನ್ ಕೋರ್ಟ್‌ಗೆ ತಲುಪಲಿದ್ದಾರೆ. ಇನ್ನು 2-3 ದಿನಗಳ ಕಾಲ ದರ್ಶನ್ ಆಸ್ಪತ್ರೆಯಲ್ಲೇ ಇರಲಿದ್ದು, ಆ ಬಳಿಕ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ ದರ್ಶನ್ ಅವರು ಸರ್ಜರಿ ಮಾಡಿಸಿಕೊಳ್ಳದೆಯೇ ಫಿಸಿಯೋ ಥೆರಪಿ ಮೂಲಕವೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ
ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ
Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ
Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ
MUST WATCH
ಹೊಸ ಸೇರ್ಪಡೆ
Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ
BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್
Central government ನೌಕರರಿಗೆ ಗಿಫ್ಟ್; 8ನೇ ವೇತನ ಆಯೋಗ ರಚನೆಗೆ ಅನುಮೋದನೆ
ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಸ್ಥಳೀಯ ಸಂಸ್ಥೆ ಚುನಾವಣೆ ಸ್ಪರ್ಧೆಗೆ ಅವಕಾಶ: ಸಿಎಂ
Sukma; ಭೀಕರ ಗುಂಡಿನ ಕಾಳಗದಲ್ಲಿ 12 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.