Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
ಬಿಜೆಪಿ ಶಾಸಕಗೆ ಒಂದಾದ ಮೇಲೊಂದು ಸಂಕಷ್ಟ!!
Team Udayavani, Sep 20, 2024, 5:14 PM IST
ಬೆಂಗಳೂರು: ಜಾತಿ ನಿಂದನೆ ಸೇರಿದಂತೆ ವಿವಿಧ ಆರೋಪಗಳ ಮೇಲೆ ಬಂಧನಕ್ಕೊಳಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬಿಡುಗಡೆಯಾದ ಬೆನ್ನಲ್ಲೇ ಬಿಜೆಪಿ ಶಾಸಕ ಎನ್.ಮುನಿರತ್ನ ಶುಕ್ರವಾರ(ಸೆ20) ಮತ್ತೆ ಬಂಧನಕ್ಕೊಳಗಾಗಿದ್ದಾರೆ.
ಮಹಿಳೆಯೊಬ್ಬರು ದಾಖಲಿಸಿದ್ದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಕಗ್ಗಲೀಪುರ ಠಾಣೆ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದಾರೆ. ಮುನಿರತ್ನ ತನ್ನ ಮೇಲೆ ಅತ್ಯಾಚಾರವೆಸಗಿ, ಹನಿ ಟ್ರ್ಯಾಪ್ ಮಾಡಲು ಬಳಸಿಕೊಂಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಬುಧವಾರ ತಡರಾತ್ರಿ ಸಂತ್ರಸ್ತ ಮಹಿಳೆ ದೂರು ನೀಡಿದ್ದರು. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಹಾಂತರ ರೆಸಾರ್ಟ್ ನಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್ ನಡೆಸಿರುವುದು ಸೇರಿದಂತೆ ವಿವಿಧ ಕೃತ್ಯಗಳನ್ನು ಎಸಗಿರುವುದಾಗಿ ಶಾಸಕ ಮುನಿರತ್ನ ಸೇರಿದಂತೆ ಏಳು ಮಂದಿಯ ವಿರುದ್ಧ ಮಹಿಳೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ನ್ಯಾಯಾಲಯ ಜಾಮೀನು ಅರ್ಜಿಯ ಮೇಲಿನ ವಾದಗಳನ್ನು ಆಲಿಸಿ, ಎರಡು ಲಕ್ಷ ರೂ. ಬಾಂಡ್ ಮತ್ತು ಎರಡು ಶ್ಯೂರಿಟಿಗಳ ಷರತ್ತಿನ ಮೇಲೆ ಜಾಮೀನು ನೀಡಿತ್ತು. ಸಾಕ್ಷ್ಯ ನಾಶ ಅಥವಾ ತನಿಖೆಗೆ ಅಡ್ಡಿಪಡಿಸಬಾರದೆಂದು, ವಿಚಾರಣೆಗೆ ಸಂಪೂರ್ಣವಾಗಿ ಸಹಕರಿಸುವಂತೆ ನಿರ್ದಿಷ್ಟ ಸೂಚನೆಗಳನ್ನು ನೀಡಿ ಗುರುವಾರ ಜಾಮೀನು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.