ಮತ್ತೆ ಲಾಕ್‌ಡೌನ್ ಕೂಗು : 10 ಸಾವಿರ ಮೀರಿದ ಸೋಂಕು ಪೀಡಿತರ ಸಂಖ್ಯೆ
Team Udayavani, Jun 25, 2020, 6:53 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆಯ ಬಳಿಕ ಕೋವಿಡ್ 19 ಸೋಂಕು ಪೀಡಿತರ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್‌ಡೌನ್ ಸೂಕ್ತ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.
ಗುರುವಾರದ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನವಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಕೋವಿಡ್ 19 ಬಾಧಿತರ ಸಂಖ್ಯೆ 10,118ಕ್ಕೆ ಏರಿದ್ದು ಸಾವಿನ ಸಂಖ್ಯೆಯೂ 165ಕ್ಕೆ ತಲುಪಿದೆ.
ಬುಧವಾರ ಪ್ರಕರಣಗಳ ಸಂಖ್ಯೆ 397, ಸಾವಿನ ಸಂಖ್ಯೆ 15 ವರದಿಯಾಗಿರುವುದು ಸರಕಾರಕ್ಕೂ ಆತಂಕ ಮೂಡಿಸಿದೆ.
ಹಲವು ಕಾರಣಗಳು
ಈ ಮಧ್ಯೆ ಪೊಲೀಸ್ ಠಾಣೆಗಳು, ಮಾರುಕಟ್ಟೆ, ವ್ಯಾಪಾರಿ ಸ್ಥಳಗಳು ಸೀಲ್‌ಡೌನ್ ಆಗಿರುವುದು; ಕೆಪಿಸಿಸಿ ಅಧ್ಯಕ್ಷ ಹಾಗೂ ಸ್ಥಳೀಯ ಶಾಸಕರೂ ಆದ ಡಿ.ಕೆ. ಶಿವಕುಮಾರ್ ಸಭೆ ನಡೆಸಿ ಕನಕಪುರ ಸ್ವಯಂ ಲಾಕ್‌ಡೌನ್ ತೀರ್ಮಾನ ಕೈಗೊಂಡಿದ್ದು, ಬೆಂಗಳೂರು 20 ದಿನ ಲಾಕ್‌ಡೌನ್‌ಗೆ ಸಲಹೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇದೀಗ ರಾಮನಗರ, ಚನ್ನಪಟ್ಟಣ ಲಾಕ್‌ಡೌನ್ ಮಾಡಲು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವುದು, ಆಡಳಿತಾರೂಢ ಬಿಜೆಪಿಯ ಮತ್ತಷ್ಟು ಶಾಸಕರು ಇದೇ ಅಭಿಪ್ರಾಯ ಹೊಂದಿರುವುದು ಸರಕಾರ ಚಿಂತಿಸುವಂತೆ ಮಾಡಿದೆ.
ಎಸೆಸೆಲ್ಸಿ ಪರೀಕ್ಷೆ ಬಳಿಕ?
ಗುರುವಾರ ಎಸೆಸೆಲ್ಸಿ ಪರೀಕ್ಷೆ ಪ್ರಾರಂಭವಾಗುವುದರಿಂದ ಪರೀಕ್ಷೆ ಮುಗಿಯುವವರೆಗೆ ಲಾಕ್‌ಡೌನ್ ಸಾಧ್ಯವಾಗದು. ಅನಂತರ ಪರಿಸ್ಥಿತಿ ನೋಡಿ ತೀರ್ಮಾನಿಸಬಹುದು. ಆದರೆ ಮುಂದೇನು ಮಾಡಬೇಕು ಎಂಬ ಬಗ್ಗೆ ಸಂಪುಟದಲ್ಲಿ ಚರ್ಚಿಸಲಾ ಗುವುದು ಎಂದು ಸರಕಾರದ ಮೂಲಗಳು ತಿಳಿಸಿವೆ.
ಜು. 31ರ ವರೆಗೆ ಲಾಕ್ ಡೌನ್
ಪಶ್ಚಿಮ ಬಂಗಾಲದಲ್ಲಿ ಜು. 31ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ. ಬುಧವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಸೋಂಕು ಹೆಚ್ಚುತ್ತಲೇ ಇದ್ದು, ಈ ನಿಟ್ಟಿನಲ್ಲಿ ಮತ್ತೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಸಂಪುಟದ ಸಚಿವರಲ್ಲೇ ಭಿನ್ನರಾಗ
ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಗೊಳಿಸುವ ಬಗ್ಗೆ ಸಚಿವರ ನಡುವೆ ಗೊಂದಲ ಉಂಟಾಗಿದೆ. ಕೆಲವರು ಬೇಕು ಎಂದರೆ ಮತ್ತೆ ಕೆಲವರು ಬೇಡ ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಮಹಾರಾಷ್ಟ್ರದಿಂದ ಜನರನ್ನು ರಾಜ್ಯದೊಳಗೆ ಆಗಮಿಸಲು ಅವಕಾಶ ಕೊಟ್ಟಿದ್ದರಿಂದ ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಕೋವಿಡ್ 19 ಸೋಂಕಿತರ ಪ್ರಮಾಣ ಹೆಚ್ಚಾಗಲು ಕಾರಣವಾಗಿದೆ ಎಂದು ಕೆಲವು ಹಿರಿಯ ಸಚಿವರು ಅಭಿಪ್ರಾಯ ಪಟ್ಟಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಎಸೆಸೆಲ್ಸಿ ಪರೀಕ್ಷೆ ಆರಂಭವಾಗಿರುವುದರಿಂದ ಪರೀಕ್ಷೆ ಮುಗಿಯುವ ಜುಲೈ 4ರವರೆಗೆ ಲಾಕ್‌ಡೌನ್ ಸಾಧ್ಯತೆ ಕಡಿಮೆ. ಅನಂತರವೇ ಲಾಕ್‌ಡೌನ್ ಮಾಡುವ ಬಗ್ಗೆ ಕೆಲವು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಒಂದೇ ದಿನ ದಾಖಲೆಯ 15 ಸಾವು
ಈ ಹಿಂದೆ ಒಂದೇ ದಿನ 12 ಮಂದಿ ಸೋಂಕು ಬಾಧಿತರ ಸಾವು ವರದಿಯಾಗಿತ್ತು. ಆದರೆ ಬುಧವಾರ ಒಂದೇ ದಿನ ದಾಖಲೆಯ 15 ಮಂದಿ ಸಾವನ್ನಪ್ಪಿದ್ದಾರೆ. ಎಲ್ಲರೂ ವಿಷಮ ಶೀತ ಜ್ವರ, ತೀವ್ರ ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದರು. ಬೆಂಗಳೂರಿನಲ್ಲಿ 5, ಬಳ್ಳಾರಿಯಲ್ಲಿ 4, ಕಲಬುರಗಿ- ರಾಮನಗರದಲ್ಲಿ ತಲಾ 2, ತುಮಕೂರು ಮತ್ತು ಮಂಗಳೂರಿನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಉಳ್ಳಾಲ ಎಸ್‌ಐಗೆ ಸೋಂಕು
ಉಳ್ಳಾಲ ಪೊಲೀಸ್ ಠಾಣೆಯ ಎಸ್‌ಐ ಅವರಿಗೂ ಸೋಂಕು ದೃಢವಾಗುವುದರೊಂದಿಗೆ ಬುಧವಾರ ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ತಲಾ 14, ದ.ಕ.ದಲ್ಲಿ 12, ಕಾಸರಗೋಡಿನಲ್ಲಿ 6 ಪ್ರಕರಣ ವರದಿಯಾಗಿವೆ.
6 ಸಾವಿರ ದಾಟಿದ ಚೇತರಿಕೆ
ಆತಂಕಕಾರಿ ಬೆಳವಣಿಗೆ ಎಂಬಂತೆ ರಾಜ್ಯದಲ್ಲಿ ಕೋವಿಡ್ 19 ಬಾಧಿತರ ಸಂಖ್ಯೆ 10,118ಕ್ಕೆ ಏರಿಕೆಯಾಗಿದೆ. ಈ ಮೂಲಕ ಐದು ಡಿಜಿಟ್ ಅಂಕಿ ಪಡೆದ 12ನೇ ರಾಜ್ಯ ಕರ್ನಾಟಕವಾಗಿದೆ. ಒಂದು ಸಮಾಧಾನಕರ ಸಂಗತಿಯೆಂದರೆ ಗುಣಮುಖರಾದವರ ಸಂಖ್ಯೆಯೂ 6,153ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 3,797 ಸಕ್ರಿಯ ಪ್ರಕರಣಗಳು ಇವೆ. ಸಾವನ್ನಪ್ಪಿದವರ ಸಂಖ್ಯೆ 165ಕ್ಕೆ ಏರಿದೆ. ಅದರಲ್ಲೂ ಕಳೆದ ತಿಂಗಳಲ್ಲೇ 8 ಸಾವಿರ ಪ್ರಕರಣಗಳು ಕಾಣಿಸಿಕೊಂಡಿವೆ. ಜತೆಗೆ 122 ಮಂದಿ ಸಾವನ್ನಪ್ಪಿದ್ದಾರೆ. ಬುಧವಾರ ಒಂದೇ ದಿನ 15 ಮಂದಿ ಸಾವನ್ನಪ್ಪಿದ್ದಾರೆ. ಜತೆಗೆ 397 ಜನರಿಗೆ ವೈರಸ್ ತಗಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಅತೀ ಹೆಚ್ಚು 173 ಮಂದಿ ಸೋಂಕು ಪೀಡಿತರಾಗಿದ್ದಾರೆ.
ಜಾಗತಿಕ ಸೋಂಕು ಪೀಡಿತರ ಸಂಖ್ಯೆ : 94,30,755
ಒಟ್ಟು ಸಾವು (ಜಗತ್ತು): 4,81,662
ಭಾರತ (ಸೋಂಕು) : 4,73,170
ಸಾವು (ಭಾರತ): 15,276
ಕರ್ನಾಟಕ (ಸೋಂಕು): 10,118
ಚೇತರಿಕೆ : 2,71,364
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.