ಮೈ-ಬೆಂ ಹೆದ್ದಾರಿ 2ನೇ ಟೋಲ್ ಸಂಗ್ರಹ ಕೇಂದ್ರ ಸರ್ಕಾರದ ಉದ್ಧಟತನ: ಸಚಿವ ಎನ್.ಚಲುವರಾಯಸ್ವಾಮಿ
Team Udayavani, Jul 1, 2023, 11:43 AM IST
ಮೈಸೂರು: ಮೈಸೂರು ಬೆಂಗಳೂರು ಹೆದ್ದಾರಿ ಎರಡನೇ ಟೋಲ್ ಸಂಗ್ರಹ ವಿಚಾರ, ಕೇಂದ್ರ ಸರ್ಕಾರದ ಉದ್ಧಟತನ. ಜನರಿಗೆ ಟೋಲ್ ಕಟ್ಟದಂತೆ ಕರೆ ನೀಡಲಾಗಿದೆ. ಟೋಲ್ ಸಂಗ್ರಹ ವಿರೋಧಿ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ನೇರವಾಗಿ ಪ್ರತಿಭಟನೆಗೆ ಹೋಗಲ್ಲ ಈ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ಮಾಡಲಾಗುವುದು. ಕೇಂದ್ರ ಈ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಟೋಲ್ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ತರಲಾಗಿದೆ. ನಮ್ಮ ಶಾಸಕರು ಮುಖ್ಯ ಕಾರ್ಯದರ್ಶಿ ಭೇಟಿ ಮಾಡಿ ಮಾತನಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು,ಕೇಂದ್ರ ಸರ್ಕಾರ ಎಲ್ಲಿಂದಲೋ ಹಣ ತಂದಿರುವುದಲ್ಲ. ರಾಜ್ಯ ಸರ್ಕಾರಗಳು ಕಟ್ಟುವ ತೆರಿಗೆಯಿಂದಲೇ ಅಭಿವೃದ್ಧಿ ಕಾರ್ಯ ಮಾಡುತ್ತದೆ. ಹೀಗಿದ್ದರೂ ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಕಾಮಗಾರಿ ಪೂರ್ಣವಾಗದೆ ಟೋಲ್ ಸಂಗ್ರಹ ಬೇಡ ಅಂತ ಹೇಳಿದ್ದೇವೆ. ಎಡಿಜಿಪಿ ಅಲೋಕ್ಕುಮಾರ್ ಸ್ಥಳ ಪರಿಶೀಲನೆ ಮಾಡಿದ್ದಾರೆ ಎಲ್ಲಾ ಸಮಸ್ಯೆ ಸರಿ ಮಾಡಿಕೊಂಡು ಟೋಲ್ ಸಂಗ್ರಹಿಸಿದರೆ ನಮ್ಮ ಅಡ್ಡಿ ಇಲ್ಲ ಶೀಘ್ರದಲ್ಲೇ ಇದಕ್ಕೊಂದು ಪರಿಹಾರ ಕಂಡು ಹಿಡಿಯುತ್ತೇವೆ ಎಂದರು.
ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ತುಳಸಿಗೌಡ ಸೇರಿ ಆರು ಮಂದಿಗೆ ಗೌರವ ಡಾಕ್ಟರೇಟ್ ಪ್ರದಾನ
ಮೊದಲು ಸಿಟಿ.ರವಿ ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ ಎಂದು ಸಿದ್ದು, ಡಿಕೆಶಿ ಪಂಚೆ ಪಂಚೆ ಬಗ್ಗೆ ಮಾತಾಡಿದ ಅವರು, ಚುನಾವಣೆಯಲ್ಲಿ ಹೀಗೆ ಮಾತನಾಡಿ ಮಾತನಾಡಿ ಜನ ಉತ್ತರ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ 65 ಸ್ಥಾನಕ್ಕೆ ಕುಸಿದಿರುವ ಅವರಲ್ಲಿ ಕಚ್ಚಾಟ ಇಲ್ವಾ ? ನಮ್ಮಲ್ಲಿ ಡಿಕೆಶಿ, ಸಿದ್ದರಾಮಯ್ಯ ಏನು ಕಿತ್ತಾಡುತ್ತಿದ್ದಾರಾ ? ಸುಮ್ಮನೇ ಅವರೇ ಕಲ್ಪಿಸಿಕೊಂಡು ಮಾತಾನಾಡುತ್ತಾರೆ ಮನಸಿಗೆ ಬಂದಂತೆ ಮಾತನಾಡಿದವರನ್ನು ಜನರು ಉತ್ತರ ಕೊಟ್ಟಿದ್ದಾರೆ ಅದರಲ್ಲಿ ಒಬ್ಬರು ಇಬ್ಬರು ಉಳಿದುಕೊಂಡಿದ್ದಾರೆ ಅಷ್ಟೇ ಜನ ಈಗ ಉತ್ತರ ಕೊಟ್ಟಿದ್ದಾರೆ ನಮ್ಮ ಪಂಚೆ ಸರಿ ಮಾಡುವುದು ಬೇಡ ಮೊದಲು ಅವರ ಪಂಚೆ ಸರಿ ಮಾಡಿಕೊಳ್ಳುವುದಕ್ಕೆ ಹೇಳಿ ಎಂದು ವ್ಯಂಗ್ಯವಾಡಿದರು.
ದಿನ ಬೆಳಗಾದರೆ ಜೆಡಿಎಸ್ -ಬಿಜೆಪಿ ನಿಮ್ಮ ಮುಂದೆ ಏನೇನೋ ಮಾತನಾಡಿ ಪ್ರಚಾರ ತೆಗೆದುಕೊಳ್ಳೋಕೆ ನೋಡುತ್ತಾರೆ. ಗ್ಯಾರಂಟಿ ಯೋಜನೆಗಳು ಜಾರಿ ಆಗುವುದೇ ಇಲ್ಲ ಅಂತ ಎರಡು ಪಕ್ಷದವರು ಹೋರಾಟ ಮಾಡಿದರು. ದೇಶದ ಇತಿಹಾಸದಲ್ಲೇ ಯಾವುದೇ ಸರ್ಕಾರ ಈ ರೀತಿ ಯೋಜನೆ ಜಾರಿ ಮಾಡಿದೆಯಾ? ನಾವು ಅದನ್ನು ಜಾರಿ ಮಾಡಿದ್ದೇವೆ ಎಂದರು.
ಜುಲೈ 5 ರಿಂದ ಯಡಿಯೂರಪ್ಪ ಧರಣಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪ ಮಾತ್ರ ಅಲ್ಲ ಬೊಮ್ಮಾಯಿ, ಸಾಮ್ರಾಟ್ ಅಶೋಕ್, ಸಿಟಿ.ರವಿ ಎಲ್ಲಾ ಬಂದು ಹೋರಾಟ ಮಾಡಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.