ಮಾ.1ರಿಂದ ಆಗುಂಬೆ ಘಾಟಿಯಲ್ಲಿ ಸಂಚಾರ ಬಂದ್
Team Udayavani, Feb 24, 2019, 1:21 AM IST
ಶಿವಮೊಗ್ಗ: ಪದೇಪದೆ ಗುಡ್ಡ ಕುಸಿದು ಸಂಚಾರಕ್ಕೆ ತೊಡಕಾಗುತ್ತಿದ್ದ ಆಗುಂಬೆ ಘಾಟಿಯಲ್ಲಿ ಶಾಶ್ವತ ದುರಸ್ತಿ ಕಾರ್ಯ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾ.1ರಿಂದ 31ರವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿ ಸಿ ಜಿಲ್ಲಾ ಧಿಕಾರಿ ಕೆ.ಎ.ದಯಾನಂದ ಆದೇಶ ಹೊರಡಿಸಿದ್ದಾರೆ. ಕಳೆದ ಬಾರಿ ಮಳೆಗಾಲದಲ್ಲಿ ಆಗುಂಬೆ ಘಾಟಿಯ ಕೆಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ತೊಂದರೆಯಾಗಿತ್ತು. ದಿನಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತ ಘಟನೆಗಳೂ ನಡೆದಿದ್ದವು.
ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಕೈಗೊಂಡು ಮತ್ತೆ ಸಂಚಾರ ಆರಂಭಿಸಲಾಗುತ್ತಿತ್ತು. ಕಳೆದ ಜು.10 ಮತ್ತು 13ರಂದು ಸುರಿದ ಭಾರೀ ಮಳೆಯಿಂದಾಗಿ ಆಗುಂಬೆ ಘಾಟಿಯ 7ನೇ ಮತ್ತು 14ನೇತಿರುವಿನಲ್ಲಿ ಮತ್ತು ಆನೆಬಂಡೆ ಬಳಿ ಗುಡ್ಡ ಕುಸಿತ ಉಂಟಾಗಿ ಭಾಗಶಃ ರಸ್ತೆ ಕುಸಿದಿದ್ದು, ಶಾಶ್ವತ ದುರಸ್ತಿ ಕಾಮಗಾರಿಯನ್ನು ಇದೀಗ ಕೈಗೊಳ್ಳಲಾಗುತ್ತಿದೆ. ಈ ಅವ ಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಲಘು ವಾಹನಗಳಾದ ಸಾಮಾನ್ಯ ಬಸ್ಸು, ಜೀಪು, ವ್ಯಾನ್, ಎಲ್.ಸಿ.ವಿ.(ಮಿನಿ ವ್ಯಾನ್), ದ್ವಿಚಕ್ರ ವಾಹನಗಳು ತೀರ್ಥಹಳ್ಳಿ- ಕೊಪ್ಪ- ಶೃಂಗೇರಿ-ಮಾಳಾಘಾಟ್- ಕಾರ್ಕಳ- ಉಡುಪಿ (ರಾಷ್ಟ್ರೀಯ ಹೆದ್ದಾರಿ 169) ಮೂಲಕ ಸಂಚರಿಸಬೇಕು. ಭಾರೀ ವಾಹನಗಳಾದ ರಾಜಹಂಸ, ಐರಾವತ ಮತ್ತು ಖಾಸಗಿ ಲಕ್ಸುರಿ ಬಸ್ಗಳು, ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್ ಮತ್ತು ಲಾಂಗ್ ಚಾಸೀ ವಾಹನಗಳು ತೀರ್ಥಹಳ್ಳಿ- ಮಾಸ್ತಿಕಟ್ಟೆ- ಹೊಸಂಗಡಿ- ಸಿದ್ದಾಪುರ- ಕುಂದಾಪುರ- ಉಡುಪಿ (ರಾಜ್ಯ ಹೆದ್ದಾರಿ 52) ಮೂಲಕ ಸಂಚರಿಸಲು ಬದಲಿ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.