ಜನವರಿಯಲ್ಲಿ ಬೆಂಗಳೂರಲ್ಲಿ ಎಐಸಿಸಿ ಮಹಾಧಿವೇಶನ?
Team Udayavani, Oct 21, 2017, 9:46 AM IST
ಬೆಂಗಳೂರು: ಮುಂದಿನ ಜನವರಿಯಲ್ಲಿ ಬೆಂಗಳೂರಿನಲ್ಲಿ ಎಐಸಿಸಿ ಮಹಾ ಅಧಿವೇಶನ ನಡೆಸುವ ಸಂಬಂಧ ನವೆಂಬರ್ 5 ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ (ಸಿಡಬ್ಲೂಸಿ) ಸಭೆಯಲ್ಲಿ ನಿರ್ಧಾರವಾ ಗುವ ಸಾಧ್ಯತೆಯಿದೆ. ನ.5 ರಂದು ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಎಐಸಿಸಿ ಮಹಾ ಅಧಿವೇಶನ ವಿಷಯ ಅಂದಿನ ಅಜೆಂಡಾದಲ್ಲಿ ಸೇರಿದೆ.
ಈಗಾಗಲೇ ಹಿಮಾಚಲ ಪ್ರದೇಶ ಚುನಾವಣೆ ಘೋಷಣೆ ಆಗಿರುವುದರಿಂದ ಗುಜರಾತ್ ಚುನಾವಣೆಯೂ ಅದೇ ಅವಧಿಯಲ್ಲಿ ನಡೆಯುವ ಸಾಧ್ಯತೆ ಇದ್ದು, ಎರಡೂ ರಾಜ್ಯಗಳ ಚುನಾವಣೆ ಮುಗಿದ ನಂತರ ಎಐಸಿಸಿ ಮಹಾ ಅಧಿವೇಶನ ನಡೆಸುವ ಸಾಧ್ಯತೆ ಇದೆ. ಎಐಸಿಸಿ ಒಂದು ದಿನದ ಅಧಿವೇಶನ ವನ್ನು ಪಂಜಾಬ್ ಅಥವಾ ದೆಹಲಿಯಲ್ಲಿ ನಡೆಸಲಿದ್ದು, ಜನವರಿಯಲ್ಲಿ ಮೂರು ಮಹಾಧಿವೇಶನವನ್ನು ಕರ್ನಾಟಕದಲ್ಲಿ ನಡೆಸುವ ಸಾಧ್ಯತೆ ಇದೆ. ಮುಂದಿನ ವರ್ಷ ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯುವುದರಿಂದ ರಾಜ್ಯದಲ್ಲಿ ಎಐಸಿಸಿ ಮಹಾಧಿವೇಶನ ನಡೆಸಬೇಕೆಂಬ ಇಚ್ಛೆಯನ್ನು ಈಗಾಗಲೇ ಕೆಪಿಸಿಸಿ ಹೈಕಮಾಂಡ್‌ಗೆ ಮನವಿ ಮಾಡಿಕೊಂಡಿದ್ದು, ಹೈಕಮಾಂಡ್ ಕೂಡ ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಹೇಳಲಾಗುತ್ತಿದೆ.
ನವೆಂಬರ್‌ನಲ್ಲಿ ರಾಹುಲ್ ಗಾಂಧಿ ರಾಜ್ಯ ಪ್ರವಾಸ
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನವೆಂಬರ್ 19 ರಿಂದ ಮೂರು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ರಾಜ್ಯ ಕಾಂಗ್ರೆಸ್ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ನವೆಂಬರ್ 19 ರಂದು ಚಿಕ್ಕಮಗಳೂರಿನಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆ ನಂತರ ನ. 20ರಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಆದರೆ, ಸಮಾವೇಶಕ್ಕೆ ರಾಹುಲ್‌ಗಾಂಧಿ ಇನ್ನೂ ಅಧಿಕೃತ ಒಪ್ಪಿಗೆ ಸೂಚಿಸಿಲ್ಲ ಎಂದು ತಿಳಿದು ಬಂದಿದೆ. ನ.21 ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಮೀನುಗಾರರ ಬೃಹತ್ ಸಮಾವೇಶ
ಏರ್ಪಡಿಸಲಾಗಿದ್ದು, ಅಂದಿನ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.