ಅಜಿತ್ ಕೌರ್- ಭುಲ್ಲರ್‌ಗೆ ಕುವೆಂಪು ರಾಷ್ಟ್ರೀಯ ಪುರಸ್ಕಾರ
Team Udayavani, Dec 25, 2019, 3:00 AM IST
ತೀರ್ಥಹಳ್ಳಿ: ಪಂಜಾಬ್‌ನ ಸಾಹಿತಿಗಳಾದ ಡಾ.ಅಜಿತ್ ಕೌರ್ ಹಾಗೂ ಗುರುಬಚ್ಚನ್ ಸಿಂಗ್ ಭುಲ್ಲರ್ ಅವರಿಗೆ ಪ್ರಸಕ್ತ ವರ್ಷದ ಕುವೆಂಪು ರಾಷ್ಟ್ರೀಯ ಪುರಸ್ಕಾರ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಕುಪ್ಪಳಿ ಹೇಮಾಂಗಣದಲ್ಲಿ ಡಿ.29ರಂದು ನಡೆಯಲಿರುವ ರಾಷ್ಟ್ರಕವಿ ಕುವೆಂಪು 115ನೇ ಜನ್ಮದಿನೋತ್ಸವ ವಿಶ್ವಮಾನವ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪುರಸ್ಕೃತರಿಬ್ಬರಿಗೂ 2.50 ಲಕ್ಷ ರೂ. ನಗದು ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾ ಗುವುದು ಎಂದು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ತಿಳಿಸಿದ್ದಾರೆ.
ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇದೇ ವೇಳೆ “ಮಂತ್ರಮಾಂಗಲ್ಯ’ ಕೃತಿಯ ಇಂಗ್ಲಿಷ್ ಆವೃತ್ತಿ ಬಿಡುಗಡೆಯಾಗಲಿದೆ. ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಗಾಂಧಿ -150 ಪುಸ್ತಕವನ್ನು ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ 2020ರ ಕ್ಯಾಲೆಂಡರ್ ಅನ್ನು ಸಚಿವ ಸಿ.ಟಿ.ರವಿ ಬಿಡುಗಡೆ ಮಾಡಲಿದ್ದಾರೆ. ಕುವೆಂಪು ವಿವಿ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.