ಲೋಕ ಚುನಾವಣೆಯತ್ತ ಮೂರೂ ಪಕ್ಷಗಳ ಚಿತ್ತ
Team Udayavani, Feb 16, 2019, 12:30 AM IST
ಬೆಂಗಳೂರು: ರಾಜ್ಯ ಬಜೆಟ್ ಮಂಡನೆ ಹಾಗೂ ವಿಧಾನಮಂಡಲ ಅಧಿವೇಶನ ಮುಗಿಯುತ್ತಿದ್ದಂತೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಇದೀಗ ಲೋಕಸಭೆ ಚುನಾವಣೆಯತ್ತ ಚಿತ್ತ ಹರಿಸಿವೆ. ಮುಂದಿನ ಮೂರು ತಿಂಗಳು ಮೂರೂ ಪಕ್ಷಗಳಿಗೂ ಅಗ್ನಿಪರೀಕ್ಷೆಯಂತಾಗಿದೆ.
ಮುಂದಿನ ವಾರ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಲೋಕಸಭೆ ಚುನಾವಣೆ ಕುರಿತಂತೆ
ಮೈತ್ರಿ ಮಾತುಕತೆ ನಡೆಯಲಿದ್ದು, ಬಹುತೇಕ ಈ ಮಾಸಾಂತ್ಯಕ್ಕೆ ಸೀಟು ಹಂಚಿಕೆ ಅಂತಿಮಗೊಳ್ಳುವ ಸಾಧ್ಯತೆಯಿದೆ. ಬಿಜೆಪಿ ಸಹ ಈಗಾಗಲೇ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದು, ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯ ಪ್ರವಾಸ ಕೈಗೊಂಡು ಕಾರ್ಯಕರ್ತರು, ಮುಖಂಡರಲ್ಲಿ ಉತ್ಸಾಹ ತುಂಬಿ ಹೋಗಿದ್ದಾರೆ. ಮೊದಲ ಹಂತದ ಲೋಕಸಭಾ ಕ್ಷೇತ್ರವಾರು ಅಭಿಪ್ರಾಯ ಸಂಗ್ರಹಣೆ ಸಭೆಯನ್ನೂ ನಡೆಸಿರುವ ಬಿಜೆಪಿ, ಸ್ಥಳೀಯ ಮುಖಂಡರ ಸಲಹೆ-ಸೂಚನೆ ಪಡೆದಿದೆ.ಮಾರ್ಚ್ ಮೊದಲ ವಾರದಲ್ಲಿ ಲೋಕಸಭಾ ಚುನಾವಣೆಗೆ ಅಧಿಸೂಚನೆ ಹೊರಡುವ ನಿರೀಕ್ಷೆ ಇರುವುದರಿಂದ ಮೂರೂ ಪಕ್ಷಗಳು ಭರದ ಸಿದ್ಧತೆ ನಡೆಸುತ್ತಿವೆ. ಆಪರೇಷನ್ ಕಮಲದ ಗುಂಗಿನಲ್ಲಿದ್ದ ಬಿಜೆಪಿ, ಅಧಿವೇಶನದಲ್ಲಿ ಆಡಿಯೋ ಬಾಂಬ್ ಬಿಡುಗಡೆ ನಂತರ ಥಂಡಾ ಹೊಡೆದಿದ್ದು, ತಕ್ಷಣಕ್ಕೆ ಲೋಕಸಭೆ ಚುನಾವಣೆಯತ್ತ ಮುಖ ಮಾಡಿದೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಗುರಿಯೂ 20 ಪ್ಲಸ್ ಸೀಟು ಗೆಲ್ಲುವುದು. ಬಿಜೆಪಿಯ ಗುರಿಯೂ 20 ಪ್ಲಸ್ ಗೆಲ್ಲುವುದೇ ಆಗಿರುವುದರಿಂದ ಮೂರೂ ಪಕ್ಷಗಳು ಕ್ಷೇತ್ರವಾರು ತಂತ್ರಗಾರಿಕೆಯಲ್ಲಿ ತೊಡಗಿವೆ. ಕಾಂಗ್ರೆಸ್ -ಜೆಡಿಎಸ್ ಜತೆಗೂಡಿ ಚುನಾವಣೆ ಎದುರಿಸುವುದು ಬಹುತೇಕ ಖಚಿತ ಆಗಿರುವುದರಿಂದ ಬಿಜೆಪಿ ಮೈಸೂರು, ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ, ಬೆಳಗಾವಿ, ಹಾವೇರಿ, ವಿಜಯಪುರ, ಕಲಬುರಗಿ, ಬೀದರ್ ಸೇರಿ ಹತ್ತು ಕ್ಷೇತ್ರಗಳಲ್ಲಿ ಕಾರ್ಯತಂತ್ರ ಬದಲಾಯಿಸಿಕೊಳ್ಳಲುಮುಂದಾಗಿದೆ.
ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಪ್ರತಿ ಹಂತದಲ್ಲೂ ಎಚ್ಚರಿಕೆಯಿಂದ ಹೆಜ್ಜೆ ಇಡಲು ತೀರ್ಮಾನಿಸಿದೆ. ಬಹುತೇಕ ಈ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಯಾರು ಎಂಬುದು ನಿರ್ಧಾರವಾದ ನಂತರವಷ್ಟೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಟ್ಟು, ಬಿಕ್ಕಟ್ಟು: ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವ ತೀರ್ಮಾನ ಮಾಡಿರುವ ಜೆಡಿಎಸ್, 10 ರಿಂದ 12 ಕ್ಷೇತ್ರಕ್ಕೆ ಬೇಡಿಕೆ ಇಟ್ಟಿದೆಯಾದರೂ ಅಂತಿಮವಾಗಿ ಎಂಟು ಕ್ಷೇತ್ರಕ್ಕೆ ತೃಪ್ತಿಪಡಬಹುದು. ಆದರೆ, ಆ ಎಂಟು ಕ್ಷೇತ್ರಗಳು ಯಾವುವು ಎಂಬುದೇ ಇದೀಗ ಯಕ್ಷ ಪ್ರಶ್ನೆಯಾಗಿದೆ.
ಮಂಡ್ಯ, ಹಾಸನದ ಜತೆಗೆ ಬಿಜೆಪಿ ಗೆಲುವು ಸಾಧಿಸಿರುವ ಶಿವಮೊಗ್ಗ, ಮೈಸೂರು, ಬೆಂಗಳೂರು ಉತ್ತರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲು ಕಾಂಗ್ರೆಸ್ ಸಹ ಮನಸ್ಸು ಮಾಡಬಹುದು. ಆದರೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಯಚೂರು ಪೈಕಿ ಎರಡು ಕ್ಷೇತ್ರಗಳನ್ನು ನಮಗೆ ಬಿಟ್ಟುಕೊಡಿ ಎಂಬ ವಾದ ಜೆಡಿಎಸ್‌ನದ್ದಾಗಿದೆ. ಕಾಂಗ್ರೆಸ್‌ನ ಹಾಲಿ ಸಂಸದರು ಇರುವ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು ಕ್ಷೇತ್ರಗಳನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡಲು ಸಾಧ್ಯವಿಲ್ಲ ಎಂಬುದು ಕಾಂಗ್ರೆಸ್ ನಾಯಕರ ಹಠ. ಹೀಗಾಗಿ, ದೇವೇಗೌಡ ಹಾಗೂ ರಾಹುಲ್‌ಗಾಂಧಿಯವರ ಜತೆಗಿನ ಮಾತುಕತೆ ನಂತರವಷ್ಟೇ ಅಂತಿಮ ಚಿತ್ರಣ ಸಿಗಲಿದೆ.
ಈ ಮಧ್ಯೆ, ಮಂಡ್ಯದಲ್ಲಿ ಸುಮಲತಾ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿಸುವ ಯತ್ನವೂ ಇದ್ದು, ಅದಕ್ಕೆ ಖುದ್ದು ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿಯವರ ವಿರೋಧವಿದೆ. ನಿಖೀಲ್ ಅಲ್ಲಿ ಕಣಕ್ಕಿಳಿಯಲು ಬಯಸಿದ್ದಾರೆ. ಸುಮಲತಾ ಹೆಸರು ಕೇಳಿ ಬರುತ್ತಿರುವುದರಿಂದ ಸಹಜವಾಗಿಯೇ ಜೆಡಿಎಸ್ ನಾಯಕರು ಗರಂ ಆಗಿದ್ದಾರೆ. ಹೀಗಾಗಿ, ಸೀಟು ಹಂಚಿಕೆಕಾಂಗ್ರೆಸ್-ಜೆಡಿಎಸ್ ನಡುವೆ ಕಗ್ಗಂಟಾಗುವ ಸಾಧ್ಯತೆಯೂ ಇಲ್ಲದಿಲ್ಲ.
ಕ್ಷೇತ್ರವಾರು ಸಭೆಗಳ ನಿಗದಿ ಸಮ್ಮಿಶ್ರ ಸರ್ಕಾರದ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾರ್ಚ್ ಮೊದಲ ವಾರದೊಳಗೆ ಪ್ರಮುಖ ಯೋಜನೆ ಉದ್ಘಾಟನೆ, ಕ್ಷೇತ್ರಗಳಲ್ಲಿನ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮುಗಿಸಿಕೊಳ್ಳಿ ಎಂದು ಸೂಚನೆ ನೀಡಲಾಗಿದೆ. ಹಿಂದಿನ ಬಜೆಟ್‌ನಲ್ಲಿ ಘೋಷಣೆಯಾಗಿರುವ ಕಾರ್ಯಕ್ರಮಗಳಿಗೂ ಹಣ ಹೊಂದಾಣಿಕೆಗೆ ಹಣಕಾಸು ಇಲಾಖೆಗೂ ನಿರ್ದೇಶನ ನೀಡಲಾಗಿದೆ. ಇದರ ಜತೆಯಲ್ಲೇ ಕಾಂಗ್ರೆಸ್-ಜೆಡಿಎಸ್ ನಾಯಕರು ಕ್ಷೇತ್ರವಾರು ಸಭೆಗಳನ್ನು ನಿಗದಿಪಡಿಸಿಕೊಂಡಿದ್ದಾರೆ. ಬಿಜೆಪಿಯೂ ಅದೇ ಕಾರ್ಯದಲ್ಲಿ ತೊಡಗಿದೆ.
ಎಸ್ ಲಕ್ಷ್ಮೀ ನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.