Cauvery : ಜಲ ವಿವಾದಗಳ ಕುರಿತು ಸರ್ವ ಪಕ್ಷ ಸಭೆ; ಪ್ರಧಾನಿ ಭೇಟಿಗೆ ತೀರ್ಮಾನ
ಸುಪ್ರೀಂ ಕೋರ್ಟಿನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು...
Team Udayavani, Aug 23, 2023, 5:24 PM IST
ಬೆಂಗಳೂರು: ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸರ್ವಪಕ್ಷಗಳ ಸಭೆ ನಡೆಯಿತು.
ಸಭೆಯಲ್ಲಿ ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, , ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಎಚ್.ಡಿ.ಕುಮಾರಸ್ವಾಮಿ, , ಜಗದೀಶ ಶೆಟ್ಟರ್, ಡಿ.ವಿ.ಸದಾನಂದ ಗೌಡ,ವೀರಪ್ಪ ಮೊಯ್ಲಿ, ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಚಲುವರಾಯಸ್ವಾಮಿ, ಕೆ.ಜೆ.ಜಾರ್ಜ್, ಕೃಷ್ಣ ಭೈರೇ ಗೌಡ, ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕರು ಸಂಸದರು, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ವಕೀಲ ಮೋಹನ್ ಕಾತರಕಿ, ಇತರ ಕಾನೂನು ತಜ್ಞರು, ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸರ್ವಪಕ್ಷಗಳ ನಿಯೋಗದ ಮೂಲಕ ತೆರಳಿ ಪ್ರಧಾನಿಯನ್ನು ಭೇಟಿಯಾಗೋಣ. ಇದಕ್ಕೆ ಎಲ್ಲ ಪಕ್ಷಗಳು ನಮಗೆ ಸಹಕಾರ ನೀಡಬೇಕು. ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ. ಐದಾರು ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳು ನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ. ಈ ಕುರಿತು ಸಂಕಷ್ಟ ಹಂಚಿಕೆ ಸೂತ್ರ ನಿರ್ದಿಷ್ಟ ಪಡಿಸಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು. ಇದಕ್ಕೆ ಸರ್ಕಾರ ಅಗತ್ಯ ಬೆಂಬಲ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಂಕಷ್ಟ ಹಂಚಿಕೆ ಸೂತ್ರದ ಕುರಿತು ತೀರ್ಮಾನ ಆಗಲೇಬೇಕು. ಇಂತಹ ಸಂಕಷ್ಟದ ಸಮಯದಲ್ಲಿ 67 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಮೇಕೆದಾಟು ಸಮತೋಲನಾ ಜಲಾಶಯ ನಿರ್ಮಿಸಿದರೆ, ಅವರಿಗೆ ನೀರು ಬಿಡಲು ಅನುಕೂಲವಾಗುತ್ತದೆ. ಈ ಯೋಜನೆಗೆ ತಮಿಳುನಾಡು ವಿನಾಕಾರಣ ವಿರೋಧಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಭೆಯ ಬಳಿಕ ಟ್ವೀಟ್ ಮಾಡಿದ್ದಾರೆ.
ಕಾವೇರಿ ವಿವಾದ ಬಹಳ ಹಳೆಯದು. ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ನಂತರ 2018 ರಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಕಾವೇರಿ ನೀರು ನಿಯಂತ್ರಣಾ ಸಮಿತಿ ಸ್ಥಾಪನೆಯಾಗಿದೆ. ಕಾವೇರಿ ಪ್ರಾಧಿಕಾರವು 22 ಸಭೆ ಹಾಗೂ ನಿಯಂತ್ರಣ ಸಮಿತಿಯು 84 ಸಭೆ ನಡೆಸಿದೆ. ಈ ಸಮಿತಿಗಳಾದ ಮೇಲೆ, ರಾಜ್ಯದಲ್ಲಿ ಸಂಕಷ್ಟದ ದಿನಗಳು ಎದುರಾಗಿದೆ. ಆಗ ನಾವು ನಿಯಂತ್ರಣ ಸಮಿತಿ, ಪ್ರಾಧಿಕಾರದಲ್ಲಿ ಚರ್ಚಿಸಿ, ಅದರ ತೀರ್ಮಾನದಂತೆ ನಡೆದುಕೊಂಡ ಅನೇಕ ನಿದರ್ಶನಗಳಿವೆ ಎಂದು ಸಿಎಂ ಟ್ವೀಟ್ ನಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.