ಜಂಬೂಸವಾರಿಗೆ ಸಕಲ ಸಿದ್ಧತೆ: ಸಚಿವ ಎಸ್.ಟಿ.ಸೋಮಶೇಖರ್


Team Udayavani, Oct 4, 2022, 12:16 PM IST

7

ಮೈಸೂರು: ಎರಡು ವರ್ಷ ಸರಳ ದಸರಾ ಆಚರಣೆ ಮಾಡಲಾಗಿದ್ದು ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜಿಸಲಾಗುತ್ತಿದೆ. ಜಂಬೂಸವಾರಿಗೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ‌. ಸೋಮಶೇಖರ್ ಹೇಳಿದರು.

ಮಾವುತ ಮತ್ತು ಕಾವಾಡಿಗರು ಮತ್ತವರ ಕುಟುಂಬದವರಿಗೆ ಅರಮನೆ ಆವರಣದಲ್ಲಿ ಉಪಹಾರ ಬಡಿಸಿ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಂಬೂಸವಾರಿ ಸಾಗುವ ರಸ್ತೆಯಲ್ಲಿ ಸಾರ್ವಜನಿಕರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಆನೆಗಳಿಗೆ ಒಂದು ತಿಂಗಳಿಂದ ತರಬೇತಿ ನೀಡಲಾಗಿದೆ. ನಾಳೆ ಸಂಜೆ ಜಂಬೂಸವಾರಿ ಸಾಗಲಿದೆ. ಇದರ ಜೊತೆಗೆ 40 ಸ್ತಬ್ಧಚಿತ್ರಗಳು, ಕಲಾತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದು ಹೇಳಿದರು.

ಬಂದೋಬಸ್ತ್ ಗಾಗಿ ಸುಮಾರು 4 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಹೈಕೋರ್ಟ್ ನ್ಯಾಯಾಧೀಶರು ಸೇರಿದಂತೆ ಗಣ್ಯಾತಿಗಣ್ಯರು ಆಗಮಿಸಲಿದ್ದಾರೆ ಎಂದು ಹೇಳಿದರು.

ಪಾಸ್ ವಿತರಣೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎಷ್ಟು ಸ್ಥಳಾವಕಾಶ ಇದೆಯೋ ಅಷ್ಟು ವ್ಯವಸ್ಥೆ ಮಾಡಲಾಗಿದೆ. ದಸರಾ ಎಂದರೆ ಕೇವಲ ಪಾಸ್ ಅಲ್ಲ. ಒಂದು ವಾರಗಳ ನಡೆದ ಯುವ ದಸರಾ, ಯುವ ಸಂಭ್ರಮ, ರೈತ ದಸರಾ, ಕುಸ್ತಿ ಇದ್ಯಾವುದಕ್ಕೂ ಪಾಸ್ ಇರಲಿಲ್ಲ. 15-20 ಲಕ್ಷ ಜನ ಸೇರುವ ನಿರೀಕ್ಷೆಯಿದೆ ಎಂದು ಹೇಳಿದರು.

ದಸರಾ ಉಪಸಮಿತಿ ವ್ಯವಸ್ಥಿತವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಅಪ್ಪು ನಮನ, ಯುವ ದಸರಾ, ರೈತ ದಸರಾ, ಕವಿಗೋಷ್ಠಿ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದವು. ಮಹಾರಾಣಿ ಅವರು ಕೂಡ ಎಲ್ಲಾ ರೀತಿಯ ಸಹಕಾರ ನೀಡಿದರು. ಅಧಿಕಾರಿಗಳು, ಮೈಸೂರು ಜನತೆಯ ಸಂಪೂರ್ಣ ಸಹಕಾರದಿಂದ ಎಲ್ಲವೂ ಸುಸೂತ್ರವಾಗಿ ಸಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.