ಸಿಎಂ ಒಬ್ರೆ ಅಲ್ಲ ಎಲ್ಲ ಸಚಿವರೂ ಮಾತನಾಡ್ಬೇಕು
Team Udayavani, Oct 7, 2017, 7:42 AM IST
ಬೆಂಗಳೂರು: ರಾಜ್ಯ ಸರ್ಕಾರದ ಸಾಧನೆಗಳನ್ನು ಸರಿಯಾಗಿ ಜನರಿಗೆ ಮುಟ್ಟಿಸದೇ ಇರುವ ಮತ್ತು ಪ್ರತಿಪಕ್ಷಗಳ
ಆರೋಪಗಳಿಗೆ ತಕ್ಕ ಉತ್ತರ ನೀಡದೇ ಇರುವ ಸಚಿವರ ವಿರುದ್ಧ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಗರಂ ಆಗಿದ್ದಾರೆ. ಜತೆಗೆ, ಪ್ರತಿಪಕ್ಷಗಳ ಪ್ರತಿ ಟೀಕೆಗೆ ಮುಖ್ಯಮಂತ್ರಿಗಳೊಬ್ಬರೇ ತಿರುಗೇಟು ನೀಡಿದರೆ ಸಾಲದು, ಎಲ್ಲರೂ ಪ್ರತಿಕ್ರಿಯಿಸಬೇಕು ಎಂದೂ ಖಡಕ್ಕಾಗಿ ಸೂಚಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರಿಗೆ ವಿನಂತಿ ರೂಪದ ಎಚ್ಚರಿಕೆ ನೀಡಿದ ಅವರು, ಕಳೆದ ನಾಲ್ಕೂವರೆ ವರ್ಷದಲ್ಲಿ ಸಚಿವರು, ಸರ್ಕಾರ ಹಾಗೂ ಪಕ್ಷದ ವಿರುದ್ಧ ಬಂದಿರುವ ಆರೋಪಗಳಿಗೆ ಪ್ರತಿ ಕ್ರಿಯೆ ನೀಡದೆ ಮೌನ ವಹಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. “ಸರ್ಕಾರದ ಸಾಧನೆಗಳನ್ನು ಹೇಳಿಕೊಳ್ಳಲು ಎಷ್ಟು ಪತ್ರಿಕಾಗೋಷ್ಠಿ ಮಾಡಿದ್ದೀರಿ? ಪ್ರತಿಪಕ್ಷಗಳ ಟೀಕೆಗಳಿಗೆ ಎಷ್ಟು ಪ್ರತಿಕ್ರಿಯೆ ನೀಡಿದ್ದೀರಿ?’ ಎಂದು ಸಚಿವರಿಗೆ ಮಾಹಿತಿ ನೀಡುವಂತೆ ವೇಣುಗೋಪಾಲ ಕೇಳಿದರು. ಪ್ರತಿಪಕ್ಷಗಳ ಪ್ರತಿಯೊಂದು ಟೀಕೆಗೂ ಮುಖ್ಯ ಮಂತ್ರಿಯೊಬ್ಬರೇ ತಿರುಗೇಟು ನೀಡಿದರೆ ಸಾಲದು. ಎಲ್ಲರೂ ಪ್ರತಿಕ್ರಿಯೆ ನೀಡಬೇಕು. ಪಕ್ಷ ನಿಮ್ಮನ್ನು ಮಂತ್ರಿಗಳನ್ನಾಗಿ ಮಾಡಿದೆ. ಪಕ್ಷ ಇಲ್ಲದಿದ್ದರೆ ಅಧಿಕಾರ ಇಲ್ಲ ಎನ್ನುವ ಮಾತನ್ನು ಸಚಿವರಿಗೆ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಶಾಸಕರೇ, ಕೆಲಸ ಮಾಡಿ: ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸರಿಯಾಗಿ ಕೆಲಸ ಮಾಡದಿದ್ದರೆ ಭವಿಷ್ಯ ಕಷ್ಟ ಎನ್ನುವ ಸಂದೇಶ ವನ್ನು ವೇಣುಗೋಪಾಲ ನೀಡಿದ್ದಾರೆ. ಪಕ್ಷ ಜಾರಿಗೊಳಿಸಿರುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರಾಸಕ್ತಿ ವಹಿಸಿದರೆ, ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ ಎನ್ನಲಾಗಿದೆ.
ಅಲ್ಲದೆ, ಬೂತ್ ಮಟ್ಟದ ಸಮಿತಿಗಳ ರಚನೆ ಮಾಡುವಲ್ಲಿ ಶಾಸಕರು ನಿರಾಸಕ್ತಿ ವಹಿಸುತ್ತಿದ್ದಾರೆ ಎಂಬ ಆರೋಪ ಕೇಳಿ
ಬಂದಿದ್ದರಿಂದ ಕಡ್ಡಾಯವಾಗಿ ಶಾಸಕರು ಬೂತ್ ಕಮಿಟಿ ರಚನೆ ಮಾಡಬೇಕು ಮತ್ತು ಮನೆ ಮನೆಗೆ ಕಾಂಗ್ರೆಸ್
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಅಲ್ಲದೆ, ಪ್ರತಿ ದಿನ ಎಷ್ಟು ಬೂತ್ ಗಳಿಗೆ ಭೇಟಿ ನೀಡಿ, ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ನಡೆಸಿದ್ದೀರಿ ಎಂಬ ಬಗ್ಗೆ ರಾಜ್ಯ ಘಟಕಕ್ಕೆ ಮತ್ತು ಹೈಕಮಾಂಡ್‌ಗೆ ವರದಿ ನೀಡುವಂತೆ ಶಾಸಕರಿಗೆ ವೇಣುಗೋಪಾಲ ತಾಕೀತು ಮಾಡಿದ್ದಾರೆ. ಹಾಲಿ ಶಾಸಕರಲ್ಲಿ ಎಲ್ಲರೂ ಮತ್ತೆ ವಿಧಾನಸಭೆಗೆ ಬರಬೇಕು ಎನ್ನುವುದು ಪಕ್ಷದ ಬಯಕೆ. ಅದನ್ನು ಉಳಿಸಿಕೊಳ್ಳಲು ಎಲ್ಲರೂ ಸಕ್ರೀಯರಾಗಿ ಕೆಲಸ ಮಾಡಿ ಎಂದು ಸೂಚಿಸಿದ್ದಾರೆ
ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.