Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
ಅಬಕಾರಿ ಸಚಿವರಿಂದ ಭಾರೀ ಲೂಟಿ...: ಪತ್ರ ಬರೆದ ಮದ್ಯ ಸನ್ನದುದಾರರು
Team Udayavani, Nov 5, 2024, 3:31 PM IST
ಬೆಂಗಳೂರು: ಸನ್ನದುದಾರರಿಂದ ವಿಪರೀತ ಲಂಚ, ಅಕ್ರಮ ಲೈಸೆನ್ಸ್ ನೀಡುವಿಕೆ ಸೇರಿದಂತೆ ಅಬಕಾರಿ ಇಲಾಖೆಯ ಭಾರಿ ಭ್ರಷ್ಟಾಚಾರವನ್ನು ವಿರೋಧಿಸಿ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಕರ್ನಾಟಕ ನೇತೃತ್ವದಲ್ಲಿ ಮದ್ಯ ಸನ್ನದುದಾರರು ರಾಜ್ಯಾದ್ಯಂತ ನವೆಂಬರ್ 20ರಂದು ಮದ್ಯದಂಗಡಿ ಬಂದ್ ಮಾಡಲು ನಿರ್ಧರಿಸಿದೆ.
ರಾಜ್ಯ ಅಬಕಾರಿ ಸಚಿವರು ಮತ್ತು ಅಬಕಾರಿ ಇಲಾಖೆಯಲ್ಲಿನ ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಕರ್ನಾಟಕ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಇದೀಗ ರಾಜಭವನ, ಮುಖ್ಯಮಂತ್ರಿ ಮತ್ತು ಲೋಕಾಯುಕ್ತರಿಗೆ ಪತ್ರ ಬರೆದಿದೆ.
ಅಬಕಾರಿ ಸಚಿವರು ಮತ್ತು ಅವರ ಕಚೇರಿಯು ದುರ್ನಡತೆ ಮತ್ತು ಸುಲಿಗೆಯಲ್ಲಿ ತೊಡಗಿದೆ ಎಂದು ಸಂಘ ಆರೋಪಿಸಿದೆ. ಇಲಾಖೆ ಅಧಿಕಾರಿಗಳ ವರ್ಗಾವಣೆಗೆ ಅನುಮೋದನೆ ನೀಡಲು ಸಚಿವ ಆರ್.ಬಿ.ತಿಮ್ಮಾಪುರ್ ಲಂಚ ಪಡೆಯುತ್ತಿದ್ದು, ಅಧಿಕಾರಿಗಳು ಮದ್ಯದಂಗಡಿಯಿಂದ ಬಹಿರಂಗವಾಗಿ ಹಣ ಪಡೆಯುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಅಬಕಾರಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವಲ್ಲಿ ಮತ್ತು ಅಬಕಾರಿ ಅಧಿಕಾರಿಯಿಂದ ಚುನಾವಣಾ ಉದ್ದೇಶಕ್ಕಾಗಿ ಅಕ್ರಮವಾಗಿ ಹಣ ವಸೂಲಿ ಮಾಡುವಲ್ಲಿ ಅಬಕಾರಿ ಸಚಿವರ ಕಛೇರಿ ಬೆಂಗಳೂರಿನಲ್ಲಿ ಭಾರೀ ಲಂಚ ಮತ್ತು ಅಕ್ರಮ ಹಣ ವರ್ಗಾವಣೆ ನಡೆದಿದೆ. ಹಿರಿಯ ಅಧಿಕಾರಿಗಳಿಂದ ವರ್ಗಾವಣೆಗಾಗಿ 16 ಕೋಟಿ ರೂ.ಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ. ಹಿರಿಯ ಅಧಿಕಾರಿಗಳಲ್ಲಿ ಮೂವರು ಜಿಲ್ಲಾಧಿಕಾರಿಗಳು, ಒಂಬತ್ತು ಅಧೀಕ್ಷಕರು, 13 ಅಬಕಾರಿ ಉಪ ಅಧೀಕ್ಷಕರು ಮತ್ತು 20 ಅಬಕಾರಿ ನಿರೀಕ್ಷಕರು ಸೇರಿದ್ದಾರೆ.
ಈ ವರ್ಗಾವಣೆಗೆ ಹಣ ದಂಧೆ ಇಲಾಖೆಯಲ್ಲಿ ಕಳೆದ ಎರಡು ಮೂರು ವರ್ಷಗಳಿಂದ ನಡೆಯುತ್ತಿದೆ ಎಂದು ಪತ್ರ ಹೇಳಿದೆ.
ಅಬಕಾರಿ ಇಲಾಖೆಯಲ್ಲಿ ₹500 ಕೋಟಿ ಲೂಟಿ!
ಕಾಂಗ್ರೆಸ್ ಸರ್ಕಾರದ ಲಂಚಾವತಾರದ ಮತ್ತೂಂದು ಕರಾಳ ಅಧ್ಯಾಯ ಬಹಿರಂಗಗೊಂಡಿದ್ದು, ರಾಜ್ಯ ಮದ್ಯ ಮಾರಾಟಗಾರರ ಸಂಘ ಮುಖ್ಯಮಂತ್ರಿ @siddaramaiah ಹಾಗು ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಅಬಕಾರಿ ಸಚಿವರು ‘ಮಂಥ್ಲಿ ಮನಿ’ ಹೆಸರಿನಲ್ಲಿ ಮದ್ಯದ ಅಂಗಡಿಗಳಿಂದ ಪ್ರತಿ ತಿಂಗಳಿಗೆ ₹15 ಕೋಟಿ ರೂಪಾಯಿಯಂತೆ… pic.twitter.com/wFx2Eas1sK
— R. Ashoka (@RAshokaBJP) November 5, 2024
CL7 ಬಾರ್ ಲೈಸೆನ್ಸ್ಗಳನ್ನು ಸಚಿವರು 30-70 ಲಕ್ಷ ರೂಪಾಯಿಗಳ ನಡುವೆ ಲಂಚದಲ್ಲಿ ನೀಡಿದ್ದಾರೆ, ಇದು ಕಾನೂನು ಉಲ್ಲಂಘನೆಯಾಗಿದೆ ಎಂದು ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಆರೋಪಿಸಿದೆ. ಕಳೆದ ಒಂದು ವರ್ಷದಲ್ಲಿ ಅಬಕಾರಿ ಸಚಿವರು 1,000 ಅಕ್ರಮ ಪರವಾನಗಿ ನೀಡಿದ್ದು, 300-700 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.