ಮೈತ್ರಿ ಸರ್ಕಾರ ಉರುಳಬೇಕು: ರಾಜಣ್ಣ
Team Udayavani, Jul 21, 2019, 3:00 AM IST
ತುಮಕೂರು: ಶಾಸನಸಭೆಯಲ್ಲಿ ಶಾಸಕರು ಮಾತನಾಡುವುದು ಅವರ ಹಕ್ಕು. ಹಾಗೆಂದು ಸುಮ್ಮನೆ ಕಾಲಹರಣ ಮಾಡಬಾರದು. ಈಗ ಈ ಶಾಸಕರು ಮಾತನಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ. ಈ ಸರ್ಕಾರ ಉಳಿಯಬಾರದು. ಸರ್ಕಾರ ಉರುಳಬೇಕು ಎನ್ನುವುದೇ ನನ್ನ ಅಭಿಪ್ರಾಯ ಎಂದು ರಾಜ್ಯ ಅಫೆಕ್ಸ್ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ಶನಿವಾರ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ ಮೇಲೆ ನಾವು ನೆಲ ಕಚ್ಚಿದ್ದೇವೆ. ಅಂತಹುದರಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಳ್ಳುತ್ತಿರುವ ನಮ್ಮವರಿಗೆ ಬುದ್ಧಿಯಿಲ್ಲ ಎಂದರು.
ಈ ಸಮ್ಮಿಶ್ರ ಸರ್ಕಾರ ಕಾಂಗ್ರೆಸ್‌ನ ಒಂದಿಬ್ಬರು ಶಾಸಕರು ಹಾಗೂ ದೇವೇಗೌಡರ ಕುಟುಂಬದವರಿಗೆ ಮಾತ್ರ ಬೇಕಾಗಿದೆ. ಈಗಿನ ಸಂದರ್ಭ ನೋಡಿದರೆ ಇನ್ನೂ ಕೆಲವು ದೋಸ್ತಿ ಶಾಸಕರು ರಾಜೀನಾಮೆ ನೀಡಲಿದ್ದಾರೆ. ಹೆಸರು ಹೇಳಿದರೆ ಅವರು ಅಲರ್ಟ್ ಆಗ್ತಾರೆ. ಹಾಗಾಗಿ, ಅವರ ಹೆಸರನ್ನು ಹೇಳುವುದಿಲ್ಲ.
1989ರಲ್ಲಿ 20 ಶಾಸಕರ ರಾಜೀನಾಮೆ ಕೊಡಿಸಿ ದೇವೇಗೌಡರು ಎಸ್.ಆರ್.ಬೊಮ್ಮಾಯಿ ಸರ್ಕಾರವನ್ನು ಉರುಳಿಸಿದ್ದರು. ಆಗ ದೇವೇಗೌಡರಿಗೆ ಪ್ರಜಾಪ್ರಭುತ್ವದ ಕಗ್ಗೊಲೆ ಆಗಿರಲಿಲ್ಲ. ಇವತ್ತು ಪ್ರಜಾಪ್ರಭುತ್ವದ ಕಗ್ಗೊಲೆ ಎನ್ನುತ್ತಾರೆ. ಯಾವುದೇ ಕಾರಣಕ್ಕೂ ಈ ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಬರುವುದಿಲ್ಲ ಎಂದು ರಾಜ್ಯದ ಸಮ್ಮಿಶ್ರ ಸರ್ಕಾರದ ವಿರುದ್ಧವೇ ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.