lok sabha polls ಮೈತ್ರಿ ಸೀಟು ಹಂಚಿಕೆ ವಾರದಲ್ಲಿ ಅಂತಿಮ: ಎಚ್‌ಡಿಡಿ
Team Udayavani, Mar 4, 2024, 11:42 PM IST
ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದ್ದು ಬಹುಶಃ ಒಂದು ವಾರದೊಳಗೆ ಎಲ್ಲ ಪ್ರಕ್ರಿಯೆ ಅಂತಿಮಗೊಳ್ಳುತ್ತವೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸೋಮವಾರ ರಾಜ್ಯ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರಶ್ಮಿ ರಾಮೇಗೌಡ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸೀಟು ಹಂಚಿಕೆ ವಿಚಾರದ ಬಗ್ಗೆ ಈಗಾಗಲೇ ಬಿಜೆಪಿ ನಾಯಕರ ಜತೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ.
ಬಹುಶಃ ಇನ್ನೊಮ್ಮೆ ಕುಳಿತು ಚರ್ಚಿಸಿದರೆ ಎಲ್ಲವೂ ಅಂತಿಮ ಆಗುತ್ತದೆ ಎಂದರು.ಕುಮಾರಸ್ವಾಮಿ ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆಯೇ ಎನ್ನುವ ಪ್ರಶ್ನೆಗೆ ನೇರವಾಗಿ ಉತ್ತರಿಸಿದ ಅವರು, ಇನ್ನೊಂದು ವಾರದಲ್ಲಿ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಆಗುತ್ತದೆ. ಜೆಡಿಎಸ್‌ಗೆ ಯಾವ ಕ್ಷೇತ್ರ ಎನ್ನುವುದು ಮೋದಿ, ಅಮಿತ್ ಷಾ, ಜೆ.ಪಿ.ನಡ್ಡಾ, ಕುಮಾರಸ್ವಾಮಿ ಸಮಾಲೋಚಿಸುತ್ತಾರೆ. ಅಲ್ಲಿ ಅವರು ಸ್ಪರ್ಧೆ ಮಾಡಬೇಕಾ ಬೇಡವಾ ಎನ್ನುವ ಅಂಶವನ್ನು ಚರ್ಚಿಸಿ ನಿರ್ಧಾರ ಮಾಡುತ್ತಾರೆ ಎಂದರು.
ಚುನಾವಣೆ ಅಧಿಸೂಚನೆ ಆದ ಬಳಿಕ ರಾಜ್ಯದಲ್ಲಿ ನನ್ನ ಪ್ರವಾಸದ ಬಗ್ಗೆ ನಿರ್ಧಾರ ಮಾಡಲಾಗುವುದು. ಮೋದಿ ಅವರದ್ದು ಬಹಳ ವೇಗ ಇದೆ. 10 ದಿನಗಳಲ್ಲಿ ಹಲವಾರು ರಾಜ್ಯಗಳಲ್ಲಿ ಅವರು ಪ್ರವಾಸ ಮಾಡುತ್ತಿದ್ದಾರೆ. ಆದರೆ ನಾನು ಎಲ್ಲಿಗೆ ಕರೆದರೆ ಅಲ್ಲಿಗೆ ಹೋಗುತ್ತೇನೆ. ಯಾವ ಜಿಲ್ಲೆಗೆ ಕರೆದರೂ ಹೋಗುತ್ತೇನೆ. ಕುಮಾರಸ್ವಾಮಿ ಸಹಿತ ಜೆಡಿಎಸ್ ನಾಯಕರು ಎಲ್ಲರೂ ಪ್ರವಾಸ ಮಾಡುತ್ತಾರೆಂದು ಮಾಜಿ ಪ್ರಧಾನಿಗಳು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಶೀಘ್ರ ಮಂಡ್ಯದಲ್ಲಿ ಸಮಾವೇಶ
ಮಾಧ್ಯಮಗಳಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದ ಅನಗತ್ಯವಾಗಿ ಚರ್ಚೆ ಆಗುತ್ತಿದೆ. ಒಂದಿಷ್ಟು ಜನ ಮನಸ್ಸಿಗೆ ಬಂದ ಹಾಗೆ ಹೇಳಿಕೆ ಕೊಡುತ್ತಿದ್ದಾರೆ. ಹಾಗೆ ಹೇಳಿಕೆ ಕೊಡಲು ಅವರು ಸ್ವತಂತ್ರರು ಎಂದು ಮಾರ್ಮಿಕವಾಗಿ ಹೇಳಿದ ದೇವೇಗೌಡರು, ಆ ಜಿಲ್ಲೆಯಲ್ಲಿ ಪಕ್ಷ ಬಲಿಷ್ಠವಾಗಿದೆ. ಸಂಘಟನೆ ಚೆನ್ನಾಗಿದೆ. ಆದಷ್ಟು ಬೇಗ ಮಂಡ್ಯದಲ್ಲಿ ಸಮಾವೇಶ ನಡೆಸಲಾಗುವುದು. ನನಗೆ ವಯಸ್ಸಾಗಿದ್ದರೂ ನಾನೇನು ಸುಮ್ಮನೆ ಕೂರಲ್ಲ ಎಂದರು.
ಕೋಲಾರದಲ್ಲಿ ಮಹಿಳಾ ಸಮಾವೇಶ
ಮಹಿಳಾ ಘಟಕದ ನೂತನ ಅಧ್ಯಕ್ಷರು ಕೋಲಾರ ಜಿಲ್ಲೆಯವರು. ಹೀಗಾಗಿ ಅವರ ನೇತೃತ್ವದಲ್ಲಿ ಈ ತಿಂಗಳ 14 ಅಥವಾ 16ರಂದು ಕೋಲಾರದಲ್ಲಿ ಜೆಡಿಎಸ್ ಮಹಿಳಾ ಸಮಾವೇಶ ನಡೆಸಲಾಗುವುದು. ಆ ಮೂಲಕ ಕೋಲಾರದಿಂದಲೇ ಲೋಕಸಭಾ ಚುನಾವಣ ಪ್ರಚಾರ ಆರಂಭ ಆಗಲಿದೆ ಎಂದು ದೇವೇಗೌಡರು ಹೇಳಿದರು. ಇದಕ್ಕೂ ಮೊದಲು ಮಾಜಿ ಪ್ರಧಾನಿಗಳ ಸಮಕ್ಷಮದಲ್ಲಿ ರಶ್ಮಿ ರಾಮೇಗೌಡ ಅವರು ಲೀಲಾದೇವಿ ಆರ್. ಪ್ರಸಾದ್ ಅವರಿಂದ ಪಕ್ಷದ ಬಾವುಟ ಸ್ವೀಕರಿಸುವ ಮೂಲಕ ರಾಜ್ಯ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪದಗ್ರಹಣ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.