ಮೈತ್ರಿ ಸರ್ಕಾರಕ್ಕೆ ಸಿದ್ದುವಿನದೇ ನೇತೃತ್ವ
Team Udayavani, May 20, 2019, 3:04 AM IST
ಮೈಸೂರು: ರಾಜ್ಯದಲ್ಲಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರಕ್ಕೆ ಯಾವುದೇ ಸಂಕಷ್ಟವಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಸರ್ಕಾರ ಮುನ್ನಡೆಯುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಭಾನುವಾರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಮಾಧ್ಯಮಗಳ ವಿರುದ್ಧ ಹರಿಹಾಯ್ದರು. ಚಿಂಚೋಳಿಯಲ್ಲಿ ಚುನಾವಣೆ ವೇಳೆ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕಿತ್ತು ಎಂದು ನಾನು ನೀಡಿದ್ದ ಹೇಳಿಕೆಯನ್ನು ಮಾಧ್ಯಮದವರು ತಿರುಚಿ, ಅದನ್ನು ಸಿದ್ದರಾಮಯ್ಯ ಹಾಗೂ ಖರ್ಗೆ ನಡುವೆ ಬಿರುಕು ತರುವ ಯತ್ನ ಅಂತ ಸ್ಟೋರಿ ಮಾಡಿದರು.
ಇಂದು ಬೆಳಗ್ಗೆ ಸಚಿವ ಪುಟ್ಟರಂಗಶೆಟ್ಟಿ ಅವರು ಸಿಎಂ ಸ್ಥಾನದಲ್ಲಿ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ. ನಾನು ಸಿದ್ದರಾಮಯ್ಯ ಅವರನ್ನು ಆ ಸ್ಥಾನದಲ್ಲಿ ಇಟ್ಟು ನೋಡುತ್ತೇನೆ ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನು? ಅವರು ಸಿದ್ದರಾಮಯ್ಯ ನೆರಳಲ್ಲಿ ಬೆಳೆದು ಬಂದವರು. ಹಾಗಾಗಿ, ಆ ರೀತಿ ಹೇಳಿದ್ದಾರೆ ಎಂದು ಸಮರ್ಥಿಸಿಕೊಂಡರು.
“ನಾವು ದೇವಸ್ಥಾನಗಳಿಗೆ ಹೋದರೆ ಚುನಾವಣೆಗಾಗಿ ಟೆಂಪಲ್ ರನ್ ಅಂತಿರಾ. ಮೋದಿಯವರು ಕೇದಾರನಾಥ, ಬದರಿನಾಥದಲ್ಲಿ ಈಶ್ವರನ ತಪಸ್ಸು ಮಾಡಿದರೆ ಏನೂ ಇಲ್ಲ. ಮೇ 23ರ ಬಳಿಕ ಅವರ ಖುರ್ಚಿ ಅಳ್ಳಾಡುತ್ತೆ ಅಂತ ಹೋಗಿ ಅವರು ತಪಸ್ಸಿಗೆ ಕೂತ್ಕೊಂಡಿರೋದು’ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.