ಸಂಶೋಧನೆ ಅಭಿವೃದ್ಧಿಗೆ ಶೇ 30 ಹಣ ಮೀಸಲಿಡಿ: ಸಚಿವ ಡಾ. ಅಶ್ವತ್ಥನಾರಾಯಣ
ಕರ್ನಾಟಕದಲ್ಲಿ ಭಾಷೆ, ಧರ್ಮದ ಹೆಸರಿನಲ್ಲಿ ಸಂಕುಚಿತ ಧೋರಣೆ ಯಾವತ್ತೂ ಬೆಳೆಸಿಲ್ಲ
Team Udayavani, Jun 8, 2022, 3:36 PM IST
ಬೆಂಗಳೂರು: ನವೋದ್ಯಮಗಳು ತಮ್ಮ ಆದಾಯದಲ್ಲಿ ಶೇ.30ರಷ್ಟನ್ನಾದರೂ ಸಂಶೋಧನೆ ಮತ್ತು ಅಭಿವೃದ್ಧಿಗೆ ಮೀಸಲಿಡಬೇಕು. ಇಲ್ಲದೆ ಹೋದರೆ ದೇಶಕ್ಕೇನೂ ಪ್ರಯೋಜನವಿಲ್ಲ. ನವೋದ್ಯಮಗಳು ಭಾರತವನ್ನೇ ಉತ್ಪಾದನೆಯ ತೊಟ್ಟಿಲನ್ನಾಗಿ ಬೆಳೆಸುವ ಗುರಿ ಇಟ್ಟುಕೊಳ್ಳಬೇಕು ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಅಖಿಲ ಭಾರತ ರೋಬೋಟಿಕ್ಸ್ ಮತ್ತು ಇನ್ನೋವೇಶನ್ ಸಮಿತಿಯು (ಎಐಸಿಆರ್ ಎ) ಏರ್ಪಡಿಸಿರುವ ‘ಇಂಡಿಯಾ ಫಸ್ಟ್ ಟೆಕ್ ಸ್ಟಾರ್ಟಪ್-2022’ ಸಮಾವೇಶಕ್ಕೆ ಅವರು ಬುಧವಾರ ಚಾಲನೆ ನೀಡಿ ಮಾತನಾಡಿ, ‘ಕರ್ನಾಟಕವೆಂದರೆ ಇಲ್ಲಿ ಭಾರತವೇ ಅಡಗಿದೆ. ನಮ್ಮಲ್ಲಿರುವಷ್ಟು ಕಾಸ್ಮೋಪಾಲಿಟನ್ ಸಂಸ್ಕೃತಿ ದೇಶದ ಉಳಿದ ಭಾಗಗಳಲ್ಲಿ ಇಲ್ಲ. ನಮ್ಮಲ್ಲಿ ಭಾಷೆ, ಧರ್ಮ ಇತ್ಯಾದಿಗಳ ಹೆಸರಿನಲ್ಲಿ ಸಂಕುಚಿತ ಧೋರಣೆಯನ್ನು ಯಾವತ್ತೂ ಬೆಳೆಸಿಲ್ಲ. ರಾಜ್ಯವು ಇಡೀ ಜಗತ್ತಿನ ಜನರನ್ನು ಸ್ವಾಗತಿಸುತ್ತದೆ. ರಾಜ್ಯವು ಮೊದಲಿನಿಂದಲೂ ಉದ್ಯಮಶೀಲ ವಾತಾವರಣಕ್ಕೆ ಪ್ರೋತ್ಸಾಹ ಕೊಡುತ್ತಲೇ ಬಂದಿದೆ. ಇತ್ತೀಚಿನ ದಶಕಗಳಲ್ಲಿ ಐಟಿ, ಬಿಟಿ ಜತೆಗೆ ಆಧುನಿಕ ತಂತ್ರಜ್ಞಾನಗಳಿಗೆ ತೆರೆದುಕೊಂಡಿದ್ದು, ಇಡೀ ಜಗತ್ತಿನ ಗಮನ ಸೆಳೆಯಲಾಗಿದೆ ಎಂದರು.
ಎನ್ಇಪಿ ಜಾರಿಯಲ್ಲಿ ಉದ್ಯಮಗಳ ಅಗತ್ಯ, ಅವರಿಗೆ ಬೇಕಾದ ಕೌಶಲ್ಯ, ಸೂಕ್ತ ಪಠ್ಯಕ್ರಮ, ಸಂವಹನ ತರಬೇತಿ, ಇಂಟರ್ನ್ಶಿಪ್ ಇತ್ಯಾದಿಗಳಿಗೆ ಗಮನ ಕೊಡಲಾಗಿದೆ. ಉದ್ಯಮಶೀಲತೆಗೆ ಪ್ರೋತ್ಸಾಹ ಕೊಡುವ ವಿಚಾರದಲ್ಲಿ ರಾಜ್ಯ ಸರಕಾರವು ಕೇಂದ್ರ ಸರಕಾರದ ಜತೆ ಹೆಜ್ಜೆ ಇಡುತ್ತಿದೆ. ಇದಕ್ಕೆ ತಕ್ಕಂತೆ ಬೆಂಗಳೂರು ನಗರವು ದೇಶದ ನವೋದ್ಯಮ ರಾಜಧಾನಿಯಾಗಿ ಹೊರಹೊಮ್ಮಿದೆ ಎಂದು ಅವರು ಪ್ರತಿಪಾದಿಸಿದರು.
ಕಾರ್ಯಕ್ರಮದಲ್ಲಿ ಎಐಸಿಆರ್ ಎ ಉಪಾಧ್ಯಕ್ಷೆ ಅಲಕಾ ಸಚದೇವ್ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.