ಕನ್ನಡ ವಿಷಯ ಹೊರತುಪಡಿಸಿ ಪರೀಕ್ಷೆ ಬರೆಯಲು ಅನುಮತಿ
Team Udayavani, Mar 31, 2023, 6:40 AM IST
ಬೆಂಗಳೂರು: ಕನ್ನಡ ಭಾಷಾ ವಿಷಯ ಹೊರತುಪಡಿಸಿ ಹತ್ತನೇ ತರಗತಿ ಪರೀಕ್ಷೆ ಬರೆಯುವ ನಗರದ ಖಾಸಗಿ ಶಾಲೆಯ ವಿದ್ಯಾರ್ಥಿಯೋರ್ವನ ಆಯ್ಕೆಗೆ ಹೈಕೋರ್ಟ್ ಅಸ್ತು ಎಂದಿದೆ.
ಕನ್ನಡ ಹೊರತುಪಡಿಸಿ ಹಿಂದಿ, ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಯನ್ನು ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಎಸೆಸೆಲ್ಸೆ ಪರೀಕ್ಷೆ ಬರೆಯಲು ನಗರದ ವಿದ್ಯಾಭಾರತಿ ಖಾಸಗಿ ಶಾಲೆಯ 10ನೇ ತಗರತಿ ವಿದ್ಯಾರ್ಥಿಗೆ ಅವಕಾಶ ನೀಡಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಆದೇಶಿಸಿತ್ತು.
ಈ ಆದೇಶ ಪ್ರಶ್ನಿಸಿ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಆ ಮೇಲ್ಮನವಿ ವಿಚಾರಣೆ ನಡೆಸಿದ ಮು| ನ್ಯಾ| ಪಿ.ಬಿ. ವರಾಲೆ ಮತ್ತು ನ್ಯಾ| ಎಂ.ಜಿ.ಎಸ್. ಕಮಲ್ ಅವರಿದ್ದ ವಿಭಾಗೀಯ ನ್ಯಾಯಪೀಠವು ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಎತ್ತಿಹಿಡಿದಿದೆ. ಅದರಂತೆ, ವಿದ್ಯಾರ್ಥಿಯ ಆಯ್ಕೆಯಂತೆ ಕನ್ನಡ ಭಾಷಾ ವಿಷಯ ಹೊರತುಪಡಿಸಿ 10ನೇ ತರಗತಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಂತಾಗಿದೆ.
ಪ್ರಕರಣವೇನು?
ವಿದ್ಯಾಭಾರತಿ ಖಾಸಗಿ ಆಂಗ್ಲ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಸಂಸ್ಕೃತ, ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ವ್ಯಾಸಂಗ ಮಾಡಲು ಶಾಲೆಯ ಅನುಮತಿ ಪಡೆದುಕೊಂಡಿದ್ದ. ಆದರೆ ಕನ್ನಡ ಭಾಷೆಯನ್ನು ಒಂದು ವಿಷಯವನ್ನಾಗಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಶಾಲೆ ಸೂಚಿಸಿತ್ತು. ತನ್ನ ಮಗನ ಪ್ರಾರ್ಥಮಿಕ ಶಿಕ್ಷಣ ಕರ್ನಾಟಕದ ಹೊರ ಭಾಗಗಳಲ್ಲಿ ನಡೆದಿದೆ. ಹೀಗಾಗಿ ಅವರಿಗೆ ಕನ್ನಡ ಭಾಷಾ ಜ್ಞಾನವಿಲ್ಲ. ಆದ್ದರಿಂದ ಕನ್ನಡ ಹೊರತುಪಡಿಸಿ ಇತರ ಭಾಷಾ ವಿಷಯಗಳಲ್ಲಿ(ಹಿಂದಿ, ಸಂಸ್ಕೃತ ಮತ್ತು ಇಂಗ್ಲೀಷ್) ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡುವಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ವಿದ್ಯಾರ್ಥಿಯ ತಂದೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿತ್ತು. ಇದನ್ನು ಪ್ರಶ್ನಿಸಿ ಪರೀಕ್ಷಾ ಮಂಡಳಿ ಮೇಲ್ಮನವಿ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.