![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 21, 2023, 11:19 PM IST
ಬೆಂಗಳೂರು: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವ ವಿಷಯದಲ್ಲಿ ಸಮಸ್ಯೆ ಸೃಷ್ಟಿ ಮಾಡಲೇಬೇಕು ಎಂಬವರಿಗೆ ನಾವು ಉತ್ತರ ಕೊಡಲು ಸಾಧ್ಯವಿಲ್ಲ. ಪ್ರತಿಯೊಬ್ಬರ ಸ್ವಾತಂತ್ರ್ಯ ದೃಷ್ಟಿಯಲ್ಲಿ ನಾವು ಕ್ರಮ ಕೈಗೊಂಡಿದ್ದೇವೆ. ಸಮಸ್ಯೆ ಸೃಷ್ಟಿ ಮಾಡಲು ಕೆಲವರು ಇರುತ್ತಾರೆ ಅವರನ್ನು ಕೇಳಿ ತೀರ್ಮಾನ ತೆಗೆದುಕೊಳ್ಳಲು ಆಗುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್ ಹೇಳಿದ್ದಾರೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆದ ಬಳಿಕ ಅವರು ಮಾತನಾಡಿದರು.
ಹಿಜಾಬ್ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶ ಇರುವುದು ಕಾಲೇಜುಗಳಿಗೆ. ಈಗ ನಡೆಯುತ್ತಿರುವುದು ಬೋರ್ಡ್ ಪರೀಕ್ಷೆ. ನೀಟ್ ಪರೀಕ್ಷೆಯನ್ನು ಹಿಜಾಬ್ ಧರಿಸಿ ಬರೆಯಲು ಅವಕಾಶವಿದೆ. ನಮ್ಮ ಕೆಇಎ ನಡೆಸುತ್ತಿರುವ ಪರೀಕ್ಷೆಯಲ್ಲಿ ಒಂದು ಗಂಟೆ ಮುಂಚೆ ಬಂದು ತಪಾಸಣೆಗೆ ಒಳಗಾಗುವಂತೆ ಸೂಚನೆ ನೀಡಿದ್ದೇವೆ. ಇದರಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲ. ಕೆಲವರು ಬೇರೆ ಕಾರಣಗಳನ್ನು ಮುಂದಿಟ್ಟು ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿರಬಹುದು. ಎಲ್ಲರಿಗೂ ಅವರ ಇಚ್ಛೆಯಂತೆ ಬಟ್ಟೆ ಧರಿಸುವ ಅವಕಾಶವಿದೆ ಎಂದು ಹೇಳಿದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.