CM ವಿರುದ್ದ ಪ್ರಾಸಿಕ್ಯೂಷನ್‌ ಅನುಮತಿ; ರಾಜ್ಯಪಾಲರ ವಿರುದ್ದ ಮುಗಿಬಿದ್ದ ಕಾಂಗ್ರೆಸ್‌ ನಾಯಕರು


Team Udayavani, Aug 17, 2024, 2:50 PM IST

CM ವಿರುದ್ದ ಪ್ರಾಸಿಕ್ಯೂಷನ್‌ ಅನುಮತಿ; ರಾಜ್ಯಪಾಲರ ವಿರುದ್ದ ಮುಗಿಬಿದ್ದ ಕಾಂಗ್ರೆಸ್‌ ನಾಯಕರು

ಬೆಂಗಳೂರು: ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿದ ಬಳಿಕ ಕಾಂಗ್ರೆಸ್‌ ನಾಯಕರು ರಾಜ್ಯಪಾಲರ ವಿರುದ್ದ ಮುಗಿಬಿದ್ದಿದ್ದಾರೆ. ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ.

ರಾಜ್ಯಪಾಲರ ವಜಾಕ್ಕೆ ಖಂಡ್ರೆ ಒತ್ತಾಯ

ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಸಚಿವ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸರಿಯಲ್ಲ. ರಾಜ್ಯಪಾಲರು ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾರೆ ಎಂದು ನಾವು ನಿರೀಕ್ಷಿಸಿರಲಿಲ್ಲ. ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಎಂದು ಈಶ್ವರ ಖಂಡ್ರೆ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಪಕ್ಷ ಇದರ ವಿರುದ್ಧ ರಾಜಕೀಯ ಹೋರಾಟ ಮಾಡುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ರಾಜಭವನದ ದುರ್ಬಳಕೆ

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅಬಕಾರಿ ಸಚಿವ ತಿಮ್ಮಾಪುರ ಆರೋಪಿಸಿದ್ದಾರೆ.

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ ಮತ್ತು ರಾಜಕೀಯ ಪ್ರೇರಿತ ಕ್ರಮಗಳಿಂದಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ಪ್ರಮೇಯವನ್ನು ರಾಜ್ಯ ಸರ್ಕಾರ ನಿರಾಕರಿಸುತ್ತದೆ. ಈಗಾಗಲೇ ನಿವೃತ್ತ ನ್ಯಾಯಮೂರ್ತಿ ದೇಸಾಯಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ವರದಿ ಹೊರಬೀಳುವ ಮುನ್ನವೇ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಚಿವ ತಿಮ್ಮಾಪೂರ ಆರೋಪಿಸಿದ್ದಾರೆ.

ರಾಜ್ಯಪಾಲರ ವಿರುದ್ದ ಕಾನೂನು ಹೋರಾಟ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ಎಂದು ಟೀಕಾ ಪ್ರಹಾರ ನಡೆಸಿರುವ ಸಚಿವ ಶಿವಾನಂದ ಪಾಟೀಲ, ರಾಜ್ಯಪಾಲರ ನಡೆಯ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ಹೇಳಿದರು.

ರಾಜ್ಯಪಾಲರ ಎದುರು ಬಿಜೆಪಿ ನಾಯಕರ ಹಲವು ಹಗರಣಗಳ ಪ್ರಕರಣಗಳು ಬಾಕಿ ಇದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾತ್ರ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿದ್ದಾರೆ. ಇದರೊಂದಿಗೆ ರಾಜ್ಯಪಾಲರ ನಡೆ ರಾಜಕೀಯ ಪ್ರೇರಿತ ಎಂಬುದು ಸ್ಪಷ್ಟವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮೋದಿ, ಶಾ ಹೇಳಿದಂತೆ ರಾಜ್ಯಪಾಲರು ಕುಣಿತ: ತಂಗಡಗಿ

ಕೊಪ್ಪಳ: ಮೋದಿ, ಅಮಿತ್ ಶಾ ಅವರ ಕೈಗೊಂಬೆಯಾಗಿ ರಾಜ್ಯಪಾಲರು ಕೆಲಸ ಮಾಡುತ್ತಿದ್ದಾರೆ. ಬಲಿಷ್ಠ ಸರಕಾರ ಅಸ್ಥಿರಗೊಳಿಸಲು ಹೊರಟಿದ್ದಾರೆ. ಮೊದಲು ರಾಜ್ಯಪಾಲರನ್ನು ಹುದ್ದೆಯಿಂದ ವಜಾಗೊಳಿಸಬೇಕೆಂದು ಸಚಿವ ಶಿವರಾಜ ತಂಗಡಗಿ ಒತ್ತಾಯಿಸಿದರು.

ಸಂವಿಧಾನವನ್ನು ‌ಹತ್ತಿಕ್ಕುವ ಕೆಲಸ ಕೇಂದ್ರದಿಂದ ನಡೆಯುತ್ತಿದೆ.‌ ಸಿಎಂ ವಿರುದ್ದ ರಾಜ್ಯಪಾಲರ ಪ್ರಾಸಿಕ್ಯೂಷನ್ ಕೊಟ್ಟಿದ್ದಾರೆ. ಅಮಿತ್ ಶಾ, ಮೋದಿ‌‌‌ 136 ಜನ ಶಾಸಕರ ಸರಕಾರ ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅನುಮತಿ ಅನಿರೀಕ್ಷಿತವಲ್ಲ: ಬಿ.ಆರ್ ಪಾಟೀಲ್

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವುದು ನಮಗೇನು ಅನಿರೀಕ್ಷಿತ ಅಲ್ಲ ಎಂದು ಸಿಎಂ‌ ಸಲಹೆಗಾರ, ಆಳಂದ ಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುತ್ತಾರೆಂದು ಗೊತ್ತಿತ್ತು? ಇದಕ್ಕೆ ನಾವೇನೂ ಹೆದರೋದಿಲ್ಲ, ಸಿಎಂ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ವಿರುದ್ದ ನಾವು ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ, ಕಾನೂನು ಹೋರಾಟ ಮಾಡುತ್ತೇವೆ.‌ ರಾಜಕೀಯ ದುರುದ್ದೇಶದಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ ಎಂದರು.‌

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi ಕ್ಯಾಬಿನೆಟ್‌ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್‌

Kalaburagi ಕ್ಯಾಬಿನೆಟ್‌ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್‌

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ

Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.