Police ಕಾಯ್ದೆಗೆ ತಿದ್ದುಪಡಿ: ವರ್ಗಾವಣೆಗೆ 2 ವರ್ಷ ಕನಿಷ್ಠ
Team Udayavani, Feb 21, 2024, 10:56 PM IST
ಬೆಂಗಳೂರು: ಆರಕ್ಷಕ ನಿರೀಕ್ಷಕ (ಪೊಲೀಸ್ ಇನ್‌ಸ್ಪೆಕ್ಟರ್), ಎಸ್ಪಿ, ಡಿವೈಎಸ್‌ಪಿ, ಡಿಐಜಿಯಂತಹ ಹುದ್ದೆಗಳಲ್ಲಿರುವ ಅಧಿಕಾರಿಗಳನ್ನು ಕನಿಷ್ಠ 2 ವರ್ಷಗಳ ವರೆಗೆ ವರ್ಗಾವಣೆ ಮಾಡದಂತೆ ಕರ್ನಾಟಕ ಪೊಲೀಸರು ಅಧಿನಿಯಮ-1963ಕ್ಕೆ ತಿದ್ದುಪಡಿ ತಂದಿದ್ದು, ಕರ್ನಾಟಕ ಪೊಲೀಸು (ತಿದ್ದುಪಡಿ) ಮಸೂದೆ -2024ಕ್ಕೆ ವಿಧಾನಸಭೆ ಸರ್ವಾನುಮತದಿಂದ ಅಸ್ತು ಎಂದಿದೆ.
ಕಾರ್ಯಾಚರಣೆ ಕರ್ತವ್ಯದಲ್ಲಿರುವ ಪೊಲೀಸ್ ಅಧಿಕಾರಿಗಳ ಕನಿಷ್ಠ ಅವಧಿಯನ್ನು ಒಂದು ವರ್ಷದಿಂದ ಎರಡು ವರ್ಷಗಳಿಗೆ ವಿಸ್ತರಿಸಲು ಮಸೂದೆಯಲ್ಲಿ ಅವಕಾಶ ನೀಡಿದ್ದು, ಇದರಿಂದ ತಮ್ಮ ಅಧಿಕಾರ ವ್ಯಾಪ್ತಿಯನ್ನು ಉತ್ತಮ ರೀತಿಯಲ್ಲಿ ಅರ್ಥ ಮಾಡಿಕೊಂಡು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ನಿರ್ಮಿಸಲು, ಅಪರಾಧ ಪತ್ತೆ ಹಚ್ಚಲು ಸಹಾಯವಾಗಲಿದೆ.
ಉಳಿದಂತೆ ಉನ್ನತ ಹುದ್ದೆಗೆ ಭಡ್ತಿ ಹೊಂದಿ ಹುದ್ದೆ ಖಾಲಿಯಾದರೆ, ಕ್ರಿಮಿನಲ್ ಅಪರಾಧದಲ್ಲಿ ನ್ಯಾಯಾಲಯದಿಂದ ದೋಷಾರೋಪಣೆ ಸಾಬೀತಾಗಿದ್ದರೆ, ಸೇವೆಯಿಂದ ವಜಾ ಮಾಡುವ, ತೆಗೆದುಹಾಕುವ, ಬಿಡುಗಡೆ ಮಾಡುವ, ಕಡ್ಡಾಯ ನಿವೃತ್ತಗೊಳಿಸುವ ದಂಡನೆ ವಿಧಿಸಿದ್ದರೆ, ಕರ್ತವ್ಯ ನಿರ್ವಹಣೆಯಲ್ಲಿ ದೈಹಿಕ ಅಥವಾ ಮಾನಸಿಕ ಅಸಮರ್ಥತೆ ಹೊಂದಿದ್ದರೆ, ಲಿಖೀತ ರೂಪದ ಕೋರಿಕೆ ಮೇರೆಗೆ 2 ವರ್ಷಕ್ಕಿಂತ ಮೊದಲೇ ವರ್ಗಾವಣೆ ಮಾಡಬಹುದು. ಇಲ್ಲದಿದ್ದರೆ ಕನಿಷ್ಠ 2 ವರ್ಷ ಅದೇ ಸ್ಥಾನದಲ್ಲಿ ಕೆಲಸ ಮಾಡಬೇಕೆಂಬುದನ್ನು ಮಸೂದೆಯಲ್ಲಿ ಉಲ್ಲೇಖಿಸಿದೆ.
ಸ್ವಾಗತಿಸುತ್ತೇವೆ
ನಮ್ಮ ಸರಕಾರ ಅಧಿಕಾರದಲ್ಲಿದ್ದಾಗ ಪೊಲೀಸ್ ಅಧಿಕಾರಿಗಳನ್ನು ಕನಿಷ್ಠ 2 ವರ್ಷ ವರ್ಗಾವಣೆ ಮಾಡದಂತೆ ಕಾನೂನು ತಂದಿದ್ದೆವು. ಕೆ.ಜೆ. ಜಾರ್ಜ್ ಅವರು ಗೃಹ ಸಚಿವರಿದ್ದಾಗ ಶಾಸಕರ ಒತ್ತಡಕ್ಕೆ ಮಣಿದು 1 ವರ್ಷಕ್ಕೆ ಇಳಿಸಿದ್ದರು. ಈಗ ಮತ್ತೆ ನಮ್ಮ ಕಾನೂನನ್ನೇ ಜಾರಿಗೆ ತರುವುದಕ್ಕೆ ಸ್ವಾಗತಿಸುತ್ತೇನೆ.
– ಆರ್.ಅಶೋಕ, ವಿಪಕ್ಷ ನಾಯಕ
ಕಾನೂನು ತರಬೇಕು
ಪದೇಪದೆ ಪೊಲೀಸರನ್ನು ವರ್ಗಾಯಿಸುವುದರಿಂದ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ. ಕೆಲವು ಆಯ್ದ ಠಾಣೆಗಳಿಗೆ ವರ್ಗಾಯಿಸಿಕೊಳ್ಳಲು ಪೊಲೀಸರೂ ತಯಾರಿರುತ್ತಾರೆ. ಜ್ಯೇಷ್ಠತೆ ಆಧಾರದ ಮೇಲೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವ ಕಾನೂನು ತರಬೇಕು.
-ಆರಗ ಜ್ಞಾನೇಂದ್ರ, ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.