ಜೂಜಾಟ ತಡೆಗೆ ಕಾಯ್ದೆಯಲ್ಲಿ ತಿದ್ದುಪಡಿ: ಬೊಮ್ಮಾಯಿ
Team Udayavani, Dec 8, 2020, 10:19 PM IST
ಬೆಂಗಳೂರು: ರಿಕ್ರಿಯೆಷನ್ ಕ್ಲಬ್ ಹೆಸರಿನಲ್ಲಿ ಜೂಜಾಟ ನಡೆಸುವುದನ್ನು ತಡೆಗಟ್ಟಲು ಹಾಗೂ ಜೂಜಾಟವನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಲು ರಾಜ್ಯ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಈಶ್ವರ್ ಖಂಡ್ರೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರಕಾರ ಮಾದಕ ವಸ್ತುಗಳ ವಿರುದ್ಧ ಸಮರ ಸಾರಿದೆ. ಪ್ರತಿ ವರ್ಷ ಡ್ರಗ್ಸ್ ಮಾರಾಟ ಪ್ರಕರಣಗಳ ಸಂಖ್ಯೆ 1,100ರಿಂದ 1,660ರ ವರೆಗೆ ದಾಖಲಾಗುತ್ತಿತ್ತು. ಈ ವರ್ಷ 3,852 ಪ್ರಕರಣಗಳನ್ನು ದಾಖಲಿಸಲಾಗಿದೆ. ಅವುಗಳಲ್ಲಿ 2,255 ಪ್ರಕರಣಗಳಲ್ಲಿ ಚಾರ್ಜ್‌ಶೀಟ್ ದಾಖಲಿಸಲಾಗಿದೆ. ಇದುವರೆಗೂ ಎಫ್ಎಸ್‌ಎಲ್ ವರದಿ ಬರುವುದು ತಡವಾಗುತ್ತಿತ್ತು. ಈಗ ಒಂದೇ ಸಾರಿ 51 ಸ್ಯಾಂಪಲ್ ಪರೀಕ್ಷೆಗೆ ಅವಕಾಶ ಇದೆ. ಮುಂದಿನ ಆರು ತಿಂಗಳಲ್ಲಿ ರಾಜ್ಯದ 5 ಕಡೆ ಎಫ್ಎಸ್‌ಎಲ್ ಪ್ರಯೋಗಾಲಯಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಹೇಳಿದರು.
ಡಾರ್ಕ್ ವೆಬ್ ಪತ್ತೆ
ಅಕ್ರಮವಾಗಿ ಡಾರ್ಕ್ ವೆಬ್ ಮೂಲಕ ಡ್ರಗ್ಸ್ ಮಾರಾಟ ಮಾಡುತ್ತಿರುವುದನ್ನು ರಾಜ್ಯ ಸರಕಾರ ಬೇಧಿಸಿದ್ದು, 21 ಡಾರ್ಕ್ ವೆಬ್ ಪೋರ್ಟಲ್‌ಗಳನ್ನು ಪತ್ತೆಹಚ್ಚಲಾಗಿದೆ. ಡಾರ್ಕ್ ವೆಬ್‌ಗಳ ಮೂಲಕ ಮಾನವ ಮಾರಾಟ ಜಾಲವೂ ಸಕ್ರಿಯವಾಗಿದೆ. ಅಕ್ರಮ ಡ್ರಗ್ಸ್ ಮಾರಾಟ ಮಾಡುವವರ ವಿರುದ್ಧ ಈಗಿರುವ ಎನ್‌ಡಿಪಿಎಸ್ ಕಾಯ್ದೆ ದುರ್ಬಲವಾಗಿದ್ದು,ಅದನ್ನು ಬಲಗೊಳಿಸಲು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.