ಬಾಕಿ ಬಿಲ್ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್ ಖಂಡ್ರೆ
Team Udayavani, May 25, 2024, 11:30 PM IST
ಬೆಂಗಳೂರು: ಕಳೆದ ವರ್ಷ ಎನ್‌ಟಿಸಿಎ ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಹುಲಿ ಯೋಜನೆ-50 ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಪ್ರಧಾನಿ ಮೋದಿ ಆತಿಥ್ಯದ ಬಾಕಿ ಬಿಲ್‌ನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದ ಅವರು, 2023ರ ಏಪ್ರಿಲ್‌ನಲ್ಲಿ ಕಾರ್ಯಕ್ರಮ ನಡೆದಾಗ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿತ್ತು. ಹೀಗಾಗಿ ರಾಜ್ಯ ಸರ್ಕಾರ ಭಾಗಿ ಆಗಿರಲಿಲ್ಲ. ರಾಜ್ಯ ಲಾಂಛನದ ಬಳಕೆಯೂ ಆಗಿರಲಿಲ್ಲ. ಇದು ಸಂಪೂರ್ಣ ಎನ್‌ಟಿಸಿಎ ಕಾರ್ಯಕ್ರಮವಾಗಿತ್ತು ಎಂದರು.
ಕಾರ್ಯಕ್ರಮಕ್ಕೆ 6.33 ಕೋಟಿ ರೂ. ಖರ್ಚಾಗಿದ್ದು, ಅಷ್ಟೂ ಖರ್ಚನ್ನು ಎನ್‌ಟಿಸಿಎ ಭರಿಸುವುದಾಗಿ ಹೇಳಿತ್ತು. ಆದರೆ, ಇದುವರೆಗೆ 3 ಕೋಟಿ ರೂ. ಮಾತ್ರ ಬಂದಿದ್ದು, ಇನ್ನುಳಿದ 3.33 ಕೋಟಿ ರೂ. ಬರಬೇಕಿದೆ. ಈ ಬಗ್ಗೆ ನಮ್ಮ ಇಲಾಖೆಯ ಅಧಿಕಾರಿಗಳು ಹಲವು ಬಾರಿ ಪತ್ರ ಬರೆದಿದ್ದರೂ, ದೂರವಾಣಿ ಕರೆ ಮಾಡಿದ್ದರೂ ಎನ್‌ಟಿಸಿಎ ಈ ಬಾಕಿ ಹಣ ನೀಡಿಲ್ಲ. ಈಗ ವಿಷಯ ತಮ್ಮ ಗಮನಕ್ಕೆ ಬಂದಿದ್ದು, ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನಿಸುವುದಾಗಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.