ಪರಿವರ್ತನಾ ರಥಯಾತ್ರೆಗೆ ನಾಳೆ ಅಮಿತ್ ಶಾ ಚಾಲನೆ
Team Udayavani, Nov 1, 2017, 8:35 AM IST
ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಾರಥ್ಯದಲ್ಲಿ ಸಂಚರಿಸುವ “ನವಕರ್ನಾಟಕ ನಿರ್ಮಾಣಕ್ಕೆ ಪರಿವರ್ತನಾ ಯಾತ್ರೆ’ಗೆ ನ.2ರ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಚಾಲನೆ ನೀಡಲಿದ್ದಾರೆ.
ಮಂಗಳವಾರ ಖಾಸಗಿ ಹೋಟೆಲ್‌ನಲ್ಲಿ ಯಾತ್ರೆಯ ಬಗ್ಗೆ ಮಾಹಿತಿ ನೀಡಿದ ಯಡಿಯೂರಪ್ಪ, “ಇದೊಂದು ಐತಿಹಾಸಿಕ ಯಾತ್ರೆಯಾಗಲಿದೆ’ ಎಂದು ಬಣ್ಣಿಸಿದರು. ಬೆಂಗಳೂರು ಹೊರವಲಯದ ಬಿಐಇಸಿಯಲ್ಲಿ 3 ಲಕ್ಷ ಕಾರ್ಯಕರ್ತರ ಸಮ್ಮುಖ ಅಮಿತ್ ಷಾ ಯಾತ್ರೆ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಯಾತ್ರೆ ಉದ್ಘಾಟನೆ ಸಂದರ್ಭದಲ್ಲಿ ಬೆಂಗಳೂರು ಸುತ್ತಮುತ್ತಲಿನ 16-17 ಜಿಲ್ಲೆಗಳ ಪ್ರತಿ ಬೂತ್ ಗಳಿಂದ 3ಲಕ್ಷ ಕಾರ್ಯಕರ್ತರು 1.50 ಲಕ್ಷ ಬೈಕ್‌ಗಳ ಮೂಲಕ ಸಮಾವೇಶಕ್ಕೆ ಆಗಮಿಸಲಿದ್ದಾರೆ. ದೊಡ್ಡ ಮಟ್ಟದ ಬೈಕ್ ರ್ಯಾಲಿ ಇದಾಗಲಿದೆ.
ಬೆಂಗಳೂರು ನಂತರ ತುಮಕೂರಿಗೆ ಯಾತ್ರೆ ಪ್ರಯಾಣ ಬೆಳೆಸಲಿದೆ. ನಂತರ ಡಿ.21 ರಂದು ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕ ಭಾಗದ ಬೃಹತ್ ಸಮಾವೇಶವನ್ನು ನಡೆಸಲಾಗುತ್ತದೆ. ಅಲ್ಲಿಯೂ ಒಂದೂವರೆ ಲಕ್ಷ ಬೈಕ್‌ಗಳಲ್ಲಿ 3 ಲಕ್ಷ ಕಾರ್ಯಕರ್ತರು ಆಗಮಿಸಲಿದ್ದಾರೆ. ಬೆಂಗಳೂರು ಮಾದರಿಯ ಸಮಾವೇಶವನ್ನೇ ಹುಬ್ಬಳ್ಳಿಯಲ್ಲೂ ನಡೆಸಲಾಗುತ್ತದೆ. ಪ್ರಧಾನಿ ಮೋದಿ ಅವರಿಗೆ ಸಮಾವೇಶಕ್ಕೆ ಆಗಮಿಸುವಂತೆ ವಿನಂತಿಸಲಾಗಿದೆ. ಅವರು ಹುಬ್ಬಳ್ಳಿ ಸಮಾವೇಶದಲ್ಲಿ ಪಾಲ್ಗೊಳ್ಳುವ ಭರವಸೆ ನೀಡಿದ್ದಾರೆಂದು ತಿಳಿಸಿದರು.
ಜನವರಿ 28 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಿ ನವಕರ್ನಾಟಕ ಯಾತ್ರೆಯನ್ನು ಮುಕ್ತಾಯಗೊಳಿಸಲಾಗುತ್ತದೆ. ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡು ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು.
ಕೊಡಗಿನಲ್ಲಿ ಯಾತ್ರೆ ತಡೆಗೆ ಸರ್ಕಾರ ಷಡ್ಯಂತ್ರ:
ಯಾತ್ರೆಯ ಸಂಚಾಲಕಿ, ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, “ಕೊಡಗಿನ ಸೋಮವಾರಪೇಟೆಯಲ್ಲಿ ಸಭೆ ನಡೆಸಲು ಸರ್ಕಾರ
ಅನುಮತಿ ನೀಡಿಲ್ಲ. ಹಾಗಾಗಿ ಅದನ್ನು ಪುತ್ತೂರಿಗೆ ಸ್ಥಳಾಂತರ ಮಾಡಲಾಗಿದೆ. ಸೋಮವಾರಪೇಟೆಯಲ್ಲಿ ಸಭೆಗೆ ಅವಕಾಶ ನೀಡದೆ ಇರುವುದರ ಹಿಂದೆ ಸರ್ಕಾರದ ಕುತಂತ್ರ ಇದೆ’ ಎಂದು ಆರೋಪಿಸಿದರು. ಶಾಂತಿಯುತವಾಗಿ ನಾವು ಯಾತ್ರೆ ಮಾಡು ತ್ತೇವೆ. ಕೊಡಗಿನ ಜಿಲ್ಲಾಧಿಕಾರಿ, ಪೋಲಿಸ್ ವರಿಷ್ಠಾಧಿಕಾರಿಗಳು ಅನುಮತಿ ನೀಡಬೇಕೆಂದು ಮಾಧ್ಯಮಗಳ ಮೂಲಕ ವಿನಂತಿ ಮಾಡುತ್ತೇನೆಂದು ಶೋಭಾ ಕರಂದ್ಲಾಜೆ ಹೇಳಿದರು. ಪತ್ರಿಕಾ ಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ,ಸಂಸದ ಪಿ.ಸಿ.ಮೋಹನ್, ಮಾಜಿ ಸಚಿವ ಪುಟ್ಟಸ್ವಾಮಿ ಮತ್ತಿತರರಿದ್ದರು.
ಜೋಕ್ ಆಫ್ ದಿ ಇಯರ್
ಪ್ರಧಾನಿ ಮೋದಿಯವರಿಗೆ ತಮ್ಮನ್ನು ಕಂಡರೆ ಭಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿರುವುದು, ಜೋಕ್ ಆಫ್ ದಿ ಇಯರ್ ಆಗಿದೆ. ಆಚಾರ ಇಲ್ಲದ ನಾಲಿಗೆ ಏನು ಬೇಕಾದರೂ ಮಾತನಾಡಬಹುದು ಎನ್ನುವಂತೆ ಸಿದ್ದರಾಮಯ್ಯ ಪ್ರಧಾನಿ ಬಗ್ಗೆ ಟೀಕೆ ಮಾಡಿದ್ದಾರೆಂದು ಯಡಿಯೂರಪ್ಪ ಆರೋಪಿಸಿದರು. ಪ್ರಧಾನಿ ಮೋದಿಯವರು ಉಪವಾಸವಿದ್ದು, ಧರ್ಮಸ್ಥಳದಲ್ಲಿ ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೀನು ಮಾತ್ರವಲ್ಲ ಕೋಳಿ ಮಾಂಸವನ್ನೂ ತಿಂದು ದರ್ಶನ ಪಡೆದಿದ್ದೇನೆ.
ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವುದು ಭಕ್ತ ಕೋಟಿಗೆ ಅಪಮಾನ ಮಾಡುವ ವರ್ತನೆಯಾಗಿದೆ. ಇದನ್ನು ನಾನು ಖಂಡಿಸುತ್ತೇನೆಂದು ಬಿಎಸ್‌ವೈ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
New Zealand: ತವರಿನಂಗಳದಲ್ಲೇ ಟೆಸ್ಟ್ ನಿವೃತ್ತಿಗೆ ಸೌಥಿ ನಿರ್ಧಾರ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.