ಬಳ್ಳಾರಿಯಲ್ಲಿ ಶಾ ಸಂಚಲನ; ಬಿಜೆಪಿ ಚಾಣಕ್ಯ ಇಂದು ರಾಜ್ಯಕ್ಕೆ
ಹಳೆ ಮೈಸೂರಿಗೂ ರಣತಂತ್ರ
Team Udayavani, Feb 23, 2023, 7:14 AM IST
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಹಠ ತೊಟ್ಟಿರುವ ಬಿಜೆಪಿ, ಅಗತ್ಯವಿರುವ ಎಲ್ಲ ತಂತ್ರಗಾರಿಕೆಗಳನ್ನು ನಡೆಸುತ್ತಿದೆ. ಇದರ ಅಂಗವಾಗಿಯೇ ಗುರುವಾರ ಮತ್ತೊಂದು ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದು, ಬಳ್ಳಾರಿ ಜಿಲ್ಲೆ ಮತ್ತು ಬೆಂಗಳೂರಿನಲ್ಲಿ ಪಕ್ಷದ ನಾಯಕರ ಜತೆ ಮಾತುಕತೆ ನಡೆಸಲಿದ್ದಾರೆ.
ಬಳ್ಳಾರಿ ಜಿಲ್ಲೆ, ಹಳೆ ಮೈಸೂರು ಮತ್ತು ರಾಜಧಾನಿಯನ್ನು ಗಮನದಲ್ಲಿರಿಸಿಕೊಂಡು ಅಮಿತ್ ಶಾ ಕಾರ್ಯತಂತ್ರ ರೂಪಿಸಿಕೊಂಡೇ ಬರುತ್ತಿದ್ದಾರೆ. ಈ ಭಾಗಗಳಲ್ಲಿ ಬಿಜೆಪಿಯ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿ ಮಹತ್ವದ ಸಭೆ ನಡೆಸಲಿದ್ದಾರೆ. ಚುನಾವಣೆ ದೃಷ್ಟಿಯಿಂದ ಇದೊಂದು ಮಹತ್ವದ ಸಭೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಗುರುವಾರ ಮಧ್ಯಾಹ್ನ ಅವರು ಬಳ್ಳಾರಿಯ ಸಂಡೂರಿಗೆ ಆಗಮಿಸಲಿದ್ದು, ಅಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೇಸರಿ ಪಡೆಯನ್ನು ಬಡಿದೆಬ್ಬಿಸುವ ಕಾರ್ಯವನ್ನು ನಡೆಸಲಿದ್ದಾರೆ. ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಬಳಿಕ ಬಿಜೆಪಿಗೆ ಆಗಲಿರುವ ಹಾನಿಯನ್ನು ಸರಿಪಡಿಸಲು ಪ್ರಯತ್ನಿಸಲಿದ್ದಾರೆ.
ಪ್ರಮುಖ ವಿಚಾರವೆಂದರೆ, ಕಾಂಗ್ರೆಸ್‌ನ ಕೋಟೆ ಯಾಗಿದ್ದ ಬಳ್ಳಾರಿ ಜಿಲ್ಲೆಯಲ್ಲಿ ರೆಡ್ಡಿ ಸಹೋ ದರರ ಪ್ರಾಬಲ್ಯದಿಂದಾಗಿ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದ್ದರೂ ಸಂಡೂರು ಮಾತ್ರ ಕಾಂಗ್ರೆಸ್‌ನ ಭದ್ರ ಕೋಟೆಯಾಗಿಯೇ ಉಳಿದುಕೊಂಡಿದೆ.
ಹೀಗಿರುವಾಗ ಅಮಿತ್ ಶಾ ಅವರ ಬಹಿರಂಗ ಸಭೆಗೆ ಸಂಡೂರನ್ನು ಆಯ್ಕೆ ಮಾಡಿಕೊಂಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಸಂಡೂರಿನ ಕಾರ್ಯಕ್ರಮವನ್ನು ಮುಗಿಸಿ ಸಂಜೆ ಬೆಂಗಳೂರಿಗೆ ಆಗಮಿಸುವ ಅಮಿತ್ ಶಾ ಪುರಭವನದಲ್ಲಿ ಆಯೋಜಿಸಿರುವ “ಭಾರತದ ರಾಜಕೀಯದಲ್ಲಿ 65 ವರ್ಷಗಳು ಮತ್ತು ನರೇಂದ ಮೋದಿ ಅವಧಿಯ ಮಾದರಿ ಬದಲಾವಣೆಗಳು’ ಎಂಬ ವಿಚಾರ ಸಂಕಿರಣದಲ್ಲಿ ಭಾಗವಹಿಸಲಿದ್ದಾರೆ. ಅನಂತರ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿರುವ ಬಿಜೆಪಿಯ ಮಹತ್ವದ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಬೆಂಗಳೂರು ನಗರದ ಶಾಸಕರು, ಪರಾಜಿತ ಅಭ್ಯರ್ಥಿಗಳು, ಸಂಸದರು ಹಾಗೂ ಹಿರಿಯ ನಾಯಕರ ಜತೆಗೆ ಸಭೆ ನಡೆಸಲಿದ್ದಾರೆ.
ಬಲವರ್ಧನೆಗೆ ರೂಟ್ ಮ್ಯಾಪ್
ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ರಾಜಧಾನಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಪಕ್ಷದ ಬಲವರ್ಧನೆ ಕಾರ್ಯತಂತ್ರದ ಬಗ್ಗೆಯೂ ಚರ್ಚೆಯಾಗಲಿದೆ. ಹಳೆ ಮೈಸೂರು ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಅಮಿತ್ ಶಾ ರೂಟ್ ಮ್ಯಾಪ್ ನಿಗದಿ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.