ರಾಜ್ಯಕ್ಕೆ ನಾಲ್ವರು ಡಿಸಿಎಂ?, ಮಹತ್ವದ ಬದಲಾವಣೆಗೆ ವರಿಷ್ಠರ ಸಿದ್ಧತೆ
ರಾಜ್ಯ ಬಿಜೆಪಿಯಲ್ಲಿ ಶಾ ಕುತೂಹಲ
Team Udayavani, May 3, 2022, 7:00 AM IST
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನವು ಸರಕಾರದಲ್ಲಿ ದೊಡ್ಡ ಮಟ್ಟದ ಬದಲಾವಣೆಯ ಸುಳಿವು ನೀಡಿದೆ.
ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಯಾಗುತ್ತಿರುವಂತೆಯೇ, ಹೊಸ ಬೆಳವಣಿಗೆ ಎಂಬಂತೆ ಮತ್ತೆ ಡಿಸಿಎಂ ಹುದ್ದೆ ಸೃಷ್ಟಿಸಲು ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಸೋಮವಾರ ರಾತ್ರಿಯೇ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಮಂಗಳವಾರ ಪಕ್ಷದ ನಾಯಕರ ಜತೆ ವಿವಿಧ ಹಂತದಲ್ಲಿ ಮಾತುಕತೆ ನಡೆಸಲಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಸರಕಾರದಲ್ಲಿ ಮಹತ್ವದ ಬದಲಾವಣೆ ತರಲು ಬಿಜೆಪಿ ವರಿಷ್ಠರು ಸಿದ್ಧತೆ ನಡೆಸಿದ್ದಾರೆ.
ಮೂರು ಅಥವಾ ನಾಲ್ಕು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಚಿಂತನೆ ನಡೆದಿದ್ದು, ಮಂಗಳವಾರ ಶಾ ನಡೆಸುವ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಭೋಜನಕೂಟದಲ್ಲಿ ಭಾಗಿ
ಶಾ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ಸರಕಾರಿ ನಿವಾಸದಲ್ಲಿ ಭೋಜನ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಚಿವ ಸಂಪುಟದ ಸದಸ್ಯರು, ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳಿಗೂ ಭೋಜನ ಕೂಟಕ್ಕೆ ಸಿಎಂ ಬೊಮ್ಮಾಯಿ ಆಹ್ವಾನ ನೀಡಿರುವುದು ಚರ್ಚೆಗೆ ಹಾಗೂ ಕುತೂಹಲಕ್ಕೆ ಗ್ರಾಸವಾಗಿದೆ. ಅನಂತರ ಖಾಸಗಿ ಹೊಟೇಲ್‌ನಲ್ಲಿ ಅಮಿತ್ ಶಾ ಪಕ್ಷದ ಪದಾಧಿಕಾರಿಗಳು ಹಾಗೂ ಕೋರ್ ಕಮಿಟಿ ಸದಸ್ಯರೊಂದಿಗೆ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಈ ಸಭೆಯಲ್ಲಿ ಪ್ರಮುಖವಾಗಿ ಚುನಾವಣೆಯ ಸಿದ್ಧತೆ, ಪಕ್ಷದ ಸಂಘಟನೆ ಹಾಗೂ ಸರಕಾರದ ಯೋಜನೆಗಳ ಅನುಷ್ಠಾನ ಮತ್ತು ಅವುಗಳನ್ನು ಜನರಿಗೆ ತಲುಪಿಸುವ ಕುರಿತು ಚರ್ಚೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಡ್ಡಾ ನಿವಾಸದಲ್ಲಿ ಸಭೆ
ಇನ್ನೊಂದೆಡೆ, ಶಾ ಆಗಮನಕ್ಕೂ ಮುನ್ನ ದಿಲ್ಲಿಯಲ್ಲಿ ಬಿಜೆಪಿಯ ಪ್ರಮುಖ ನಾಯಕರು ಹಾಗೂ ಆರೆಸ್ಸೆಸ್‌ನ ಪ್ರಮುಖರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಿವಾಸದಲ್ಲಿ ಸಭೆ ನಡೆಸಿದ್ದಾರೆ. ಸಂಘಟನಾತ್ಮಕ ವಿಚಾರಗಳು, ಪಕ್ಷ ಹಾಗೂ ಸರಕಾರದ ನಡುವಿನ ಸಮನ್ವಯತೆ, ಕರ್ನಾಟಕ ಸಹಿತ ಮುಂಬರುವ ವಿಧಾನಸಭೆ ಚುನಾವಣ ಕಾರ್ಯತಂತ್ರಗಳ ಕುರಿತೂ 3 ಗಂಟೆ ಕಾಲ ಚರ್ಚೆ ನಡೆದಿದೆ ಎನ್ನಲಾಗಿದೆ.
ಬಿಎಸ್‌ವೈ- ಬೊಮ್ಮಾಯಿ ಭೇಟಿ
ಮಹತ್ವದ ಬೆಳವಣಿಗೆಯೊಂದರಲ್ಲಿ ಸೋಮ ವಾರ ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಯಾಗಿ ಮಾತುಕತೆ ನಡೆಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸದ ವೇಳೆ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗುವುದಿಲ್ಲ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ. ಈ ಬಗ್ಗೆ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ. ಇದರಲ್ಲಿ ಪಕ್ಷದ ವರಿಷ್ಠರು ಹಸ್ತಕ್ಷೇಪ ಮಾಡುವುದಿಲ್ಲ.
– ನಳಿನ್ ಕುಮಾರ್ ಕಟೀಲು, ಬಿಜೆಪಿ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.